ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪ್ರಶ್ನೆಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆಗೆ ಸೂಕ್ತ ಮಸೂದೆ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

Pralhad Joshi: ಪರೀಕ್ಷಾ ಅಕ್ರಮಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತಹ ಮಹತ್ವದ ನಿಯಮಗಳನ್ನು ಒಳಗೊಂಡಿರುವ ಈ ಮಸೂದೆ ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಕಟಿಬದ್ಧವಾಗಿದೆ ಎಂದು ಕೇಂದ್ರದ ನೂತನ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆಗೆ ಕಟಿಬದ್ಧ ಮಸೂದೆ: ಜೋಶಿ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (ಸಂಗ್ರಹ ಚಿತ್ರ) -

Profile
Siddalinga Swamy Jul 29, 2026 9:33 PM

ನವದೆಹಲಿ, ಜು. 29: ಲೋಕಸಭೆ ಪ್ರಸ್ತುತ ಅಂಗೀಕರಿಸಿರುವ ಸಾರ್ವಜನಿಕ ಪರೀಕ್ಷೆ ಅಕ್ರಮ ತಡೆ ತಿದ್ದುಪಡಿ ಮಸೂದೆ, ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ಸಂಪೂರ್ಣ ನಿರ್ಮೂಲನಗೊಳಿಸಲಿದೆ ಎಂದು ಕೇಂದ್ರದ ನೂತನ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲೋಕಸಭೆಯಲ್ಲಿ ಬುಧವಾರ ಮಂಡಿಸಿರುವ Public Examinations (Prevention of Unfair Means) Amendment Bill 2026 ಅನ್ನು ಸಂಸತ್‌ ಅಂಗೀಕರಿಸಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಯುವಲ್ಲಿ ಕಠಿಣ ಕಾನೂನು ಚೌಕಟ್ಟನ್ನು ತಂದಿದೆ ಎಂದು ಸಚಿವರು ಪ್ರತಿಕ್ರಿಯಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರಿಗೆ ಕಠಿಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ತ್ವರಿತ ನ್ಯಾಯಾಲಯಗಳ (Fast-Track Courts) ಸ್ಥಾಪನೆ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದಿದ್ದಾರೆ.

ಪರೀಕ್ಷಾ ಅಕ್ರಮಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತಹ ಮಹತ್ವದ ನಿಯಮಗಳನ್ನು ಒಳಗೊಂಡಿರುವ ಈ ಮಸೂದೆ ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಕಟಿಬದ್ಧವಾಗಿದೆ ಎಂದು ಹೇಳಿದ್ದಾರೆ.‌

48 ಲಕ್ಷ ಕುಟುಂಬಗಳಿಗೆ ಪಿಎಂ ಸೂರ್ಯಘರ್‌ ಪ್ರಯೋಜನ; 18.93 ಲಕ್ಷಕ್ಕೂ ಅಧಿಕ ಫಲಾನುಭವಿಗಳ ವಿದ್ಯುತ್‌ ಬಿಲ್‌ ಶೂನ್ಯ

ದೇಶಾದ್ಯಂತ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಮತ್ತು ನ್ಯಾಯಸಮ್ಮತತೆಯನ್ನು ಮತ್ತಷ್ಟು ಬಲಪಡಿಸುವ ಗುರಿ ಹೊಂದಿದೆ ಎಂದು ಕೇಂದ್ರದ ನೂತನ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.