ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿಜೆಪಿ ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ: ಬಿಹಾರದ ಬಳಿಕ ಅಸ್ಸಾಂನಲ್ಲೂ ಘೋಷಣೆ

ಕೇಂದ್ರ ಸರ್ಕಾರವು ಸಿಜೆಪಿ ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಎಂದು ಭರವಸೆ ನೀಡಿದ ಬೆನ್ನಲ್ಲೇ ಎನ್ ಡಿಎ ಸರ್ಕಾರ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಕೂಡ ಸಿಜೆಪಿ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರಕರಣ ದಾಖಲಿಸುವುದಿಲ್ಲ ಎಂದು ಘೋಷಿವೆ. ಬಿಹಾರದಲ್ಲಿ ಇದು ಘೋಷಣೆಯಾದ ಬೆನ್ನಲ್ಲೇ ಅಸ್ಸಾಂನಲ್ಲೂ ಈ ಘೋಷಣೆಯನ್ನು ಮಾಡಲಾಗಿದೆ.

ಸಿಜೆಪಿ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ಕೈಬಿಟ್ಟ ಬಿಹಾರ, ಅಸ್ಸಾಂ

ಸಂಗ್ರಹ ಚಿತ್ರ -

ಅಸ್ಸಾಂ: ಬಿಹಾರದ (Bihar) ಬಳಿಕ ಇದೀಗ ಅಸ್ಸಾಂನಲ್ಲೂ (Assam) ಕೂಡ ಕಾಕ್ರೋಚ್ ಜನತಾ ಪಕ್ಷದ (Cockroach Janata Party) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರ ನೀಡಿದ್ದ ಭರವಸೆಯಲ್ಲಿ ಒಂದಾದ ಸಿಜೆಪಿ ಪ್ರತಿಭಟನಾಕಾರರ (CJP Protester) ವಿರುದ್ಧ ಯಾವುದೇ ಪ್ರಕರಣ ದಾಖಲಿಸುವುದಿಲ್ಲ ಎನ್ನುವುದನ್ನು ಇದೀಗ ಎನ್ ಡಿಎ ಸರ್ಕಾರ (NDA Govt) ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಕೂಡ ಪಾಲನೆ ಮಾಡಲಾಗುತ್ತಿದೆ. ಸಿಜೆಪಿ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರಕರಣ ದಾಖಲಿಸುವುದಿಲ್ಲ ಎಂದು ಬಿಹಾರದಲ್ಲಿ ಘೋಷಣೆಯಾದ ಬೆನ್ನಲ್ಲೇ ಅಸ್ಸಾಂನಲ್ಲೂ ಈ ಘೋಷಣೆ ಮಾಡಲಾಗಿದೆ.

ಅಸ್ಸಾಂ ಸರ್ಕಾರವು ಸೋಮವಾರ ಮಾಡಿರುವ ಘೋಷಣೆಯಲ್ಲಿ ನೀಟ್-ಯುಜಿ ಪರೀಕ್ಷಾ ಅಕ್ರಮಗಳ ವಿರುದ್ಧ ಪ್ರತಿಭಟನೆಗಳಲ್ಲಿ ಭಾಗವಹಿಸಿದವರ ವಿರುದ್ಧ ದಾಖಲಾಗಿರುವ ಕೇಸುಗಳನ್ನು ಮತ್ತು ಇತರ ಕಾನೂನು ಕ್ರಮಗಳನ್ನು ಹಿಂದಕ್ಕೆ ಪಡೆಯುವುದಾಗಿ ತಿಳಿಸಿದೆ.

ಬೆಂಗಳೂರಿನ 2ನೇ ವಿಮಾನ ನಿಲ್ದಾಣದ ಬಗ್ಗೆ ಮಹತ್ವದ ಅಪ್‌ಡೇಟ್‌ ಪ್ರಕಟಿಸಿದ ಕೇಂದ್ರ ಸರ್ಕಾರ; ಲೋಕಸಭೆಯಲ್ಲಿ ಹೇಳಿದ್ದೇನು?

ಪ್ರತಿಭಟನೆಗಳಿಗೆ ಸಂಬಂಧಿಸಿ ಅಸ್ಸಾಂನಲ್ಲಿ ಒಟ್ಟು ಐದು ಪ್ರಕರಣಗಳು ದಾಖಲಾಗಿದ್ದು, 13 ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣಗಳನ್ನು ಜುಲೈ 26ರಂದು ಸಂಜೆ 6 ಗಂಟೆಯ ಮೊದಲು ದಾಖಲಿಸಲಾಗಿದೆ ಎಂದು ಅಸ್ಸಾಂನ ಗೃಹ ಮತ್ತು ರಾಜಕೀಯ ಇಲಾಖೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.



ಇದಕ್ಕೆ ಸಂಬಂಧಿಸಿ ಕೆಲವು ಪ್ರಕ್ರಿಯೆಗಳಿದ್ದರೂ ಕೂಡ ದಾಖಲಾದ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಕಾನೂನಿನ ಪ್ರಕಾರ ತ್ವರಿತವಾಗಿ ಪ್ರಾರಂಭಿಸಲಾಗುವುದು. ಈಗಾಗಲೇ ನಡೆದಿರುವ ಬಂಧನಗಳನ್ನು ಪರಿಶೀಲಿಸಿ ಬಂಧಿತರನ್ನು ತ್ವರಿತವಾಗಿ ಬಿಡುಗಡೆಗೊಳಿಸಲಾಗುವುದು. ಪ್ರತಿಭಟನೆಗಳಲ್ಲಿ ಭಾಗಿಯಾಗಿರುವವಾರ ವಿರುದ್ಧ ಸರ್ಕಾರ ಬೇರೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಇದಕ್ಕೆ ಸಂಬಂಧಿಸಿ ಭವಿಷ್ಯದಲ್ಲಿ ಯಾವುದೇ ವಿಚಾರಣೆಗಳಲ್ಲ ಎಂದು ತಿಳಿಸಿ ವಿಷಯವನ್ನು ಮುಕ್ತಾಯಗೊಳಿಸಲಾಗುತ್ತದೆ ಎಂದು ಹೇಳಿದೆ.

ಈ ಕುರಿತು ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್ ಅವರು ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಸ್ಸಾಂ ಸರ್ಕಾರವು ಬಂಧಿತ ಪ್ರತಿಭಟನಾಕಾರರನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಅವರ ವಿರುದ್ದದ ಭವಿಷ್ಯದಲ್ಲಿ ಯಾವುದೇ ಎಫ್‌ಐಆರ್‌ಗಳು ಅಥವಾ ಕ್ರಮಗಳಿಲ್ಲ ಎಂದು ಹೇಳಿದೆ ಎಂಬುದಾಗಿ ತಿಳಿಸಿದ್ದಾರೆ.

ಶಿಕ್ಷಣ ಸುಧಾರಣೆಗಾಗಿ ನಡೆದ ಪ್ರತಿಭಟನೆ ವೇಳೆ ಇದೆಂಥ ವಿಕೃತಿ? ದೆಹಲಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ದೂರು ನೀಡಿದಾಗ ಇದೆಲ್ಲ ಕಾಮನ್‌ ಎಂದಿದ್ದ ಆಯೋಜಕರು

ಬಿಹಾರ, ಅಸ್ಸಾಂ ಮತ್ತು ರಾಜಸ್ಥಾನದಲ್ಲಿ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎನ್ನುವ ಭರವಸೆ ಸಿಕ್ಕಿದೆ. ಯಾವುದೇ ಎಫ್‌ಐಆರ್‌ಗಳು ದಾಖಲಾಗಿಲ್ಲ. ಮುಂದೆ ಯಾವುದೂ ದಾಖಲಾಗುವುದಿಲ್ಲ. ಎಲ್ಲಾ ರಾಜ್ಯಗಳಲ್ಲೂ ಈ ರೀತಿಯ ಅಧಿಸೂಚನೆಗಳನ್ನು ಬಿಡುಗಡೆ ಮಾಡುವುದನ್ನು ಖಚಿತಪಡಿಸಿಕೊಳ್ಳಲು ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ. ಯಾವುದೇ ಯುವಕರು ಇದರ ವಿರುದ್ಧ ಏಕಾಂಗಿಯಾಗಿ ಹೋರಾಡಲು ಎಂದಿಗೂ ಬಿಡುವುದಿಲ್ಲ. ಈ ಕುರಿತು ಸರ್ಕಾರದ ಪ್ರತಿನಿಧಿಗಳನ್ನು ಪಕ್ಷದ ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದರು.