ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಪಾಕ್‌ನಿಂದ ಸುಳ್ಳು ಮಾಹಿತಿ ಹರಡುವ ಯತ್ನ; ರಿಪೋರ್ಟ್‌ ಮಾಡಲು ಪಿಐಬಿ ಮನವಿ

India-Pakistan Tensions: ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಕಾಳಗದ ನಡುವೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸ್​ ಕಮಿಷನರ್ ಬಿ.ದಯಾನಂದ ಎಚ್ಚರಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪಾಕ್‌ನಿಂದ ಸುಳ್ಳು ಮಾಹಿತಿ; ಪಿಐಬಿ ಎಚ್ಚರಿಕೆ

Profile Abhilash BC May 9, 2025 11:33 AM

ನವದೆಹಲಿ: ಭಾರತದಲ್ಲಿ ಆತಂಕ ಮತ್ತು ಗೊಂದಲ ಸೃಷ್ಟಿಸುವ ಉದ್ದೇಶದಿಂದ ಪಾಕಿಸ್ತಾನದ ಸಾಮಾಜಿಕ ಮಾಧ್ಯಮಗಳು ಸಂಘಟಿತ ತಪ್ಪು ಮಾಹಿತಿ ಹರಡುವಿಕೆಯನ್ನು ಆರಂಭಿಸಿದ್ದು ಕ್ಷಿಪಣಿ, ಡ್ರೋನ್‌ ಸೇರಿ ವೈಮಾನಿಕ ದಾಳಿಗಳ ಕುರಿತು ನಿಖರವಾದ ಮಾಹಿತಿಗಳಿಗಾಗಿ ಭಾರತ ಸರ್ಕಾರ ಅಧಿಕೃತ ಖಾತೆಗಳನ್ನು ಮಾತ್ರ ಅವಲಂಬಿಸಿ ಎಂದು ಪಿಐಬಿ(PIB) ದೇಶದ ಜನರನ್ನು ಎಚ್ಚರಿಸಿದೆ. ಜತೆಗೆ ಪರಿಶೀಲಿಸದೇ ಯಾವುದೇ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಡಿ ಮತ್ತು ಅಂತಹ ನಕಲಿ ಸುದ್ದಿಗಳನ್ನು ನಂಬಬೇಡಿ ಎಂದು ತಿಳಿಸಿದೆ.

ಯಾವುದೇ ತಪ್ಪು ಮಾಹಿತಿ ಕಂಡುಬಂದರೆ, ಅದರಲ್ಲೂ ಸಶಸ್ತ್ರ ಪಡೆ ಕುರಿತಾದ ಅಥವಾ ಸದ್ಯದ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಕುರಿತಂತೆ ಸುಳ್ಳು ಮಾಹಿತಿ ಗಮನಕ್ಕೆ ಬಂದರೆ #PIBFactCheckಗೆ ರಿಪೋರ್ಟ್ ಮಾಡಿ. ಈ ಕೆಳಗಿನ ವಾಟ್ಸ್‌ಆ್ಯಪ್ ಸಂಖ್ಯೆ,(+91 8799711259) ಇಮೇಲ್(Email: factcheck@pib.gov.in) ಮೂಲಕ ಮಾಹಿತಿ ಹಂಚಿಕೊಳ್ಳಲು ಕೋರಲಾಗಿದೆ.

ಭಾರತ ಪಾಕ್‌ ವಿರುದ್ಧ ಪ್ರತಿ ದಾಳಿ ನಡೆಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಸೇನಾ ಮುಖ್ಯಸ್ಥ ಜನರಲ್‌ ವಿ.ಕೆ. ನಾರಾಯಣ್ ಅವರು ಉತ್ತರ ಕಮಾಂಡ್‌ನ ಸೇನಾ ಅಧಿಕಾರಿಗೆ ಮಿಲಿಟರಿ ಸನ್ನದ್ಧತೆಯ ಕುರಿತು ಗೌಪ್ಯ ಪತ್ರವನ್ನು ಕಳುಹಿಸಿದ್ದಾರೆ ಎನ್ನಲಾಗುವ ಪತ್ರವೊಂದು ಹರಿದಾಡಿತ್ತು. ಇದನ್ನು 'ಪಿಐಬಿ' ಫ್ಯಾಕ್ಟ್‌ಚೆಕ್‌ ಮಾಡಿದಾಗ ಇದೊಂದು ಸುಳ್ಳು ಸುದ್ದಿ ಎನ್ನುವುದು ತಿಳಿದುಬಂದಿದೆ. ಈ ಪತ್ರವು ಸಂಪೂರ್ಣವಾಗಿ ನಕಲಿಯಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ India-Pakistan dispute: ಭಾರತ-ಪಾಕ್‌ ಯದ್ಧದಲ್ಲಿ ಭಾಗಿಯಾಗಲ್ಲ; ಅಮೆರಿಕ ಉಪಾಧ್ಯಕ್ಷ ಸ್ಪಷ್ಟನೆ

ಸುಳ್ಳು ಸುದ್ದಿ ಹರಡುವವರ ಮೇಲೆ ಕ್ರಮ: ಕಮಿಷನರ್‌

ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಕಾಳಗದ ನಡುವೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸ್​ ಕಮಿಷನರ್ ಬಿ.ದಯಾನಂದ ಎಚ್ಚರಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ದಯಾನಂದ್, ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆ ಆಗಿವೆ. ಅಧಿಕೃತ ಮಾಧ್ಯಮಗಳ ಮೂಲಕ ಈ ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತದೆ. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಸಿಬ್ಬಂದಿಗಳಿಗೆ ಹಲವು ಸೂಚನೆ ನೀಡಲಾಗಿದೆ. ನಗರದ ಎಲ್ಲಾ ಕಡೆಗೆ ಸೂಕ್ತ ಆಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.