LPG Price: ಗ್ರಾಹಕರಿಗೆ ಗುಡ್‌ನ್ಯೂಸ್; LPG ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ
ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಗುಡ್ ನ್ಯೂಸ್ ದೊರಕಿದೆ. ಜುಲೈ 1ರಂದು ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಬಹುದೊಡ್ಡ ಬದಲಾವಣೆ ಕಂಡು ಬಂದಿದೆ. ಪ್ರತಿ ತಿಂಗಳ ಮೊದಲ ದಿನದಂದು ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸುತ್ತವೆ


ನವದೆಹಲಿ: ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಗುಡ್ ನ್ಯೂಸ್ ದೊರಕಿದೆ. ಜುಲೈ 1ರಂದು ಎಲ್‌ಪಿಜಿ ಸಿಲಿಂಡರ್‌ಗಳ (LPG Price) ದರದಲ್ಲಿ ಬಹುದೊಡ್ಡ ಬದಲಾವಣೆ ಕಂಡು ಬಂದಿದೆ. ಪ್ರತಿ ತಿಂಗಳ ಮೊದಲ ದಿನದಂದು ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸುತ್ತವೆ. ಈ ತಿಂಗಳು ಸಿಲಿಂಡರ್ ಬೆಲೆ ಕಡಿಮೆಯಾಗಿದೆ. ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ದರವನ್ನು ಸುಮಾರು 58.50 ರೂ.ಗಳಷ್ಟು ಕಡಿಮೆ ಮಾಡಿವೆ. ಆದರೆ 14.2 ಕೆಜಿ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.
ತೈಲ ಮಾರುಕಟ್ಟೆ ಕಂಪನಿಗಳು ಬಿಡುಗಡೆ ಮಾಡಿದ ಹೊಸ ದರ ಪಟ್ಟಿಯ ಪ್ರಕಾರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,665 ರೂ. ಆಗಿದೆ. ಜೂನ್‌ನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1723.50 ರೂ. ಆಗಿತ್ತು. ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1826 ರೂ. ಗಳ ಬದಲಾಗಿ 1769 ರೂಪಾಯಿಗೆ ಸಿಗಲಿದೆ. ಮುಂಬೈನಲ್ಲಿ 1674.50 ರೂ.ಗಳ ಬದಲಿಗೆ 1616 ರೂ ಮತ್ತು ಚೆನ್ನೈನಲ್ಲಿ 1823.50 ರೂ.ಗಳ ಬದಲಿಗೆ 1881 ರೂ.ಗೆ 19 ಕೆಜಿ ಎಲ್‌ಪಿಜಿ ಸಿಲಿಂಡರ್ ದೊರೆಯಲಿದೆ.
ಬೆಂಗಳೂರಿನಲ್ಲಿಯೂ ದರ ಪರಿಷ್ಕರಣೆಯಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ 58.50 ರು.ಗಳಷ್ಟು ಕಡಿಮೆಯಾಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ವಾಣಿಜ್ಯ ಸಿಲಿಂಡರ್ ಅಗ್ಗವಾಗುತ್ತಿರುವುದರಿಂದ, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಬೆಲೆ ಕಡಿಮೆಯಾಗುತ್ತಿರುವ ನಿರೀಕ್ಷೆ ಇದೆ.
ಈ ಸುದ್ದಿಯನ್ನೂ ಓದಿ: Israel-Iran Conflict: ಹೊರ್ಮುಜ್ ತೈಲ ಮಾರ್ಗ ಮುಚ್ಚಲು ಇರಾನ್ ನಿರ್ಧಾರ; ಭಾರತಕ್ಕೆ ಪೆಟ್ರೋಲ್, ಡಿಸೇಲ್ ಸರಬರಾಜು ಬಂದ್ ಆಗುತ್ತಾ?
ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಗುಡ್ ನ್ಯೂಸ್ ದೊರಕಿದೆ. ಜುಲೈ 1ರಂದು ಎಲ್‌ಪಿಜಿ ಸಿಲಿಂಡರ್‌ಗಳ ದರದಲ್ಲಿ ಬಹುದೊಡ್ಡ ಬದಲಾವಣೆ ಕಂಡು ಬಂದಿದೆ. ಪ್ರತಿ ತಿಂಗಳ ಮೊದಲ ದಿನದಂದು ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸುತ್ತವೆ. ಈ ತಿಂಗಳು ಸಿಲಿಂಡರ್ ಬೆಲೆ ಕಡಿಮೆಯಾಗಿದೆ. ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ದರವನ್ನು ಸುಮಾರು 58.50 ರೂ.ಗಳಷ್ಟು ಕಡಿಮೆ ಮಾಡಿವೆ. ಆದರೆ 14.2 ಕೆಜಿ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.