ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ್​ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

'ಆಪರೇಷನ್ ಸಿಂಧೂರ್'; ಜೈ ಹಿಂದ್ ಎಂದ ಟೀಮ್‌ ಇಂಡಿಯಾ ಕ್ರಿಕೆಟಿಗರು

26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತ ತಕ್ಕ ಪ್ರತಿಕಾರ ತೀರಿಸಿಕೊಂಡಿದೆ. ಉಗ್ರರ ಗುಂಡಿಗೆ ಬಲಿಯಾದವರಿಗೆ ಸಿಕ್ಕ ನಿಜವಾದ ನ್ಯಾಯ ಮತ್ತು ಗೌರವವಾಗಿದೆ. ಜೈ ಹಿಂದ್ ಎಂದು ಗಂಭೀರ್‌, ವಿರೇಂದ್ರ ಸೆಹವಾಗ್‌ ಆಕಾಶ್ ಚೋಪ್ರಾ, ಪ್ರಗ್ಯಾನ್ ಓಜಾ ಮತ್ತು ವರುಣ್ ಚಕ್ರವರ್ತಿ ಸೇರಿ ಹಲವರು 'ಆಪರೇಷನ್ ಸಿಂಧೂರ್' ಫೋಟೋವನ್ನು ಹಂಚಿಕೊಂಡಿದ್ದಾರೆ.

'ಆಪರೇಷನ್ ಸಿಂಧೂರ್'; ಜೈ ಹಿಂದ್ ಎಂದ ಟೀಮ್‌ ಇಂಡಿಯಾ ಕ್ರಿಕೆಟಿಗರು

Profile Abhilash BC May 7, 2025 10:56 AM

ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸೇನೆ(Operation Sindoor) ನಡೆಸಿದ ಸಂಘಟಿತ ದಾಳಿಗೆ 80ಕ್ಕೂ ಹೆಚ್ಚು ಉಗ್ರರು(India strikes Pakistan) ಹತರಾಗಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಭಾರತ ಕ್ರಿಕೆಟ್‌ ತಂಡದ ಪ್ರಧಾನ ಕೋಚ್‌ ಗೌತಮ್‌ ಗಂಭೀರ್‌(Gautam Gambhir) ಸೇರಿ ಅನೇಕ ಹಾಲಿ ಮತ್ತು ಮಾಜಿ ಆಟಗಾರರು ಭಾರತದ ಪರಾಕ್ರಮವನ್ನು ಕೊಂಡಾಡಿದ್ದಾರೆ. ಜತೆಗೆ ತಮ್ಮ ಸಾಮಾಜಿಕ ಜಾಲತಾಣದ ಮಾಧ್ಯಮಗಳಲ್ಲಿ ಜೈ ಹಿಂದ್! ಎಂದು ಹೇಳಿದ್ದಾರೆ.

26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತ ತಕ್ಕ ಪ್ರತಿಕಾರ ತೀರಿಸಿಕೊಂಡಿದೆ. ಉಗ್ರರ ಗುಂಡಿಗೆ ಬಲಿಯಾದವರಿಗೆ ಸಿಕ್ಕ ನಿಜವಾದ ನ್ಯಾಯ ಮತ್ತು ಗೌರವವಾಗಿದೆ. ಜೈ ಹಿಂದ್ ಎಂದು ಗಂಭೀರ್‌, ವಿರೇಂದ್ರ ಸೆಹವಾಗ್‌ ಆಕಾಶ್ ಚೋಪ್ರಾ, ಪ್ರಗ್ಯಾನ್ ಓಜಾ ಮತ್ತು ವರುಣ್ ಚಕ್ರವರ್ತಿ ಸೇರಿ ಹಲವರು 'ಆಪರೇಷನ್ ಸಿಂಧೂರ್' ಫೋಟೋವನ್ನು ಹಂಚಿಕೊಂಡಿದ್ದಾರೆ.



ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್‌ ಮಾಡಿದ್ದು, 'ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆ ಇದೆ. ಪಹಲ್ಗಾಮ್‌ನಲ್ಲಿ ನಮ್ಮ ಮುಗ್ಧ ಸಹೋದರರ ಕ್ರೂರ ಹತ್ಯೆಗೆ ಭಾರತ ನೀಡಿದ ಪ್ರತಿಕ್ರಿಯೆಯೇ ‘ಆಪರೇಷನ್ ಸಿಂಧೂರ’. ದೇಶದ ಜನರ ಮೇಲಿನ ಯಾವುದೇ ದಾಳಿಗೆ ಸೂಕ್ತ ಪ್ರತಿಕ್ರಿಯೆ ನೀಡಲು ಮೋದಿ ಸರ್ಕಾರ ಯಾವಾಗಲೂ ದೃಢನಿಶ್ಚಯ ಹೊಂದಿದೆ. ಜತೆಗೆ ಭಯೋತ್ಪಾದನೆಯನ್ನು ಅದರ ಮೂಲದಿಂದಲೇ ನಿರ್ಮೂಲನೆ ಮಾಡಲು ಭಾರತ ಬದ್ಧ ಮತ್ತು ಸಿದ್ಧವಾಗಿದೆ' ಎಂದು ಹೇಳಿದ್ದಾರೆ.



ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಕೂಡ ಟ್ವೀಟ್‌ ಮಾಡಿದ್ದು, 'ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆ ಇದೆ. ಜೈ ಹಿಂದ್!’ ಪೋಸ್ಟ್ ಮಾಡಿದ್ದಾರೆ.



ಭಾರತ ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿ ಉಗ್ರರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ. ಯಾವುದೇ ಸೂಚನೆ ಇಲ್ಲದೆ ಸುಮಾರು 20 ನಿಮಿಷಗಳ ಕಾಲ ನಡೆದ ಈ ದಾಳಿಯಿಂದ ಪಾಕ್‌ ಪತರುಗುಟ್ಟಿ ಹೋಗಿದೆ. ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಭಾರೀ ಬಿಗಿ ಭದ್ರತೆ ಮಾಡಲಾಗಿದೆ.

ಇದನ್ನೂ ಓದಿ Operation Sindoor: ಪಾಕಿಸ್ತಾನದ 12ನೇ ಅತಿದೊಡ್ಡ ನಗರವಾದ ಬಹವಾಲ್ಪುರದ ಮೇಲೆ ಭಾರತ ದಾಳಿ ಮಾಡಿದ್ದು ಯಾಕೆ ಗೊತ್ತೇ?

ಪಾಕ್‌ ಪ್ರಧಾನಿ ಶಹಬಾಜ್‌ ಶರೀಫ್‌ ಟ್ವೀಟ್‌ ಮಾಡಿದ್ದು 'ಭಾರತ ನಿಯಮ ಉಲ್ಲಂಘಿಸಿ ಪಾಕಿಸ್ತಾನದ ಐದು ಸ್ಥಳಗಳ ಮೇಲೆ ಹೇಡಿತನದ ದಾಳಿ ನಡೆಸಿದೆ. ಭಾರತ ಹೇರಿರುವ ಈ ಯುದ್ಧ ಕ್ರಮದ ವಿರುದ್ಧ ಶಕ್ತಿಯುವಾದ ಪ್ರತಿಕ್ರಿಯೆ ನೀಡುವ ಎಲ್ಲ ಹಕ್ಕುಗಳೂ ಪಾಕಿಸ್ತಾನಕ್ಕೆ ಇವೆ. ನಾವು ಕೂಡ ಅತ್ಯಂತ ಪ್ರಬಲ ಪ್ರತಿಕ್ರಿಯೆ ನೀಡುತ್ತೇವೆ. ಇಡೀ ದೇಶವು ಪಾಕಿಸ್ತಾನ ಸಶಸ್ತ್ರ ಪಡೆಗಳಿಗೆ ಬೆಂಬಲವಾಗಿ ನಿಂತಿದೆ. ಶತ್ರುವನ್ನು ಹೇಗೆ ಎದುರಿಸಬೇಕು ಎಂಬುದು ಪಾಕಿಸ್ತಾನಕ್ಕೆ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ ಚೆನ್ನಾಗಿ ಗೊತ್ತಿದೆ. ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ' ಎಂದು ಬರೆದುಕೊಂಡಿದ್ದಾರೆ.