Operation Sindoor: ಜೆಇಎಂ ಮುಖ್ಯಸ್ಥ ಮಸೂದ್ ಅಜರ್ ಮದರಸಾ ಧ್ವಂಸ: ವಿಡಿಯೊ ವೈರಲ್
ವೇರಲ್ ಆಗುತ್ತಿರುವ ಈ ವಿಡಿಯೊದಲ್ಲಿ ಪಾಕ್‌ನ ವ್ಯಕ್ತಿ, 'ಭಾರತ ನಮ್ಮ ಮೇಲೆ ದಾಳಿ ಮಾಡಿದಾಗ ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ಎಲ್ಲಿ ಮಲಗಿದ್ದವು. ಯಾವುದೇ ಸಂದೇಹ ಬೇಡ ಬಹಾವಲ್ಪುರದಲ್ಲಿರುವ ಮಸೂದ್ ಅಜರ್‌ನ ಮದರಸಾ ಮೇಲೆ 4 ಕ್ಷಿಪಣಿಗಳಿಂದ ದಾಳಿ ಮಾಡಲಾಗಿದೆ' ಎಂದು ಹೇಳಿದ್ದಾನೆ.


ನವದೆಹಲಿ: ಪಾಕಿಸ್ತಾನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸೇನಾ ಪಡೆಗಳು ನಡೆಸಿದ ಸರಣಿ ದಾಳಿಯಲ್ಲಿ(Operation Sindoor) ಸುಮಾರು 80ಕ್ಕೂ ಹೆಚ್ಚು ಭಯೋತ್ಪಾದಕರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ದಾಳಿಯಲ್ಲಿ ಜೈಶ್ ಎ ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮೌಲಾನಾ ಮಸೂದ್ ಅಜರ್‌ನ ಮದರಾಸ(Masood Azhar’s Madrasa)ವನ್ನು ಕೂಡ ಧ್ವಂಸ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಕಿಸ್ತಾನಿ ನಾಗರಿಕನೊಬ್ಬ ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾನೆ.
ವೇರಲ್ ಆಗುತ್ತಿರುವ ಈ ವಿಡಿಯೊದಲ್ಲಿ ಪಾಕ್‌ನ ವ್ಯಕ್ತಿ, 'ಭಾರತ ನಮ್ಮ ಮೇಲೆ ದಾಳಿ ಮಾಡಿದಾಗ ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ಎಲ್ಲಿ ಮಲಗಿದ್ದವು. ಯಾವುದೇ ಸಂದೇಹ ಬೇಡ ಬಹಾವಲ್ಪುರದಲ್ಲಿರುವ ಮಸೂದ್ ಅಜರ್‌ನ ಮದರಸಾ ಮೇಲೆ 4 ಕ್ಷಿಪಣಿಗಳಿಂದ ದಾಳಿ ಮಾಡಲಾಗಿದೆ' ಎಂದು ಹೇಳಿದ್ದಾನೆ.
#Watch: भारत ने जम्मू-कश्मीर के पहलगाम में 22 अप्रैल को हुए आतंकी हमले का जवाब देने के लिए 'ऑपरेशन सिंदूर' लॉन्च किया है। इस ऑपरेशन के तहत भारतीय सशस्त्र बलों ने पाकिस्तान और पाकिस्तान के कब्जे वाले कश्मीर में आतंकी ठिकानों पर सटीक हमले किए हैं। सोशल मीडिया पर कई ऐसे वीडियो वायरल… pic.twitter.com/RQf9GjVhxk
— Hindustan (@Live_Hindustan) May 7, 2025
ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಲ್ಲಿರುವ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ದಾಳಿ ನಡೆಸಿದ್ದು, ಈ ಬಗ್ಗೆ ಭಾರತೀಯ ಸೇನೆಯು ಇಂದು ಬೆಳಗ್ಗೆ 10 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ಕರೆದಿದೆ.
ಸದ್ಯ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್‌ನಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಇಂದು ಮುಚ್ಚಲ್ಪಡುತ್ತವೆ. ಪಠಾಣ್‌ಕೋಟ್‌ನಲ್ಲಿರುವ ಎಲ್ಲಾ ಶಾಲೆಗಳು 72 ಗಂಟೆಗಳ ಕಾಲ ಮುಚ್ಚಲ್ಪಟ್ಟಿದೆ.
ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಂಡಿರುವ ಭಾರತ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿ ಉಗ್ರರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ. ಯಾವುದೇ ಸೂಚನೆ ಇಲ್ಲದೆ ಸುಮಾರು 20 ನಿಮಿಷಗಳ ಕಾಲ ನಡೆದ ಈ ದಾಳಿಯಿಂದ ಪಾಕ್ ಪತರುಗುಟ್ಟಿ ಹೋಗಿದೆ.
ಇದನ್ನೂ ಓದಿ Operation Sindoor: ಆಪರೇಷನ್ ಸಿಂಧೂರ್- ರಕ್ಷಣಾ ಸಚಿವಾಲಯದಿಂದ ಇಂದು ಬೆಳಗ್ಗೆ 10ಗಂಟೆಗೆ ಮಹತ್ವದ ಸುದ್ದಿಗೋಷ್ಠಿ
ಪಾಕ್ ಪ್ರಧಾನಿ ಶಹಬಾಜ್ ಶರೀಫ್ ಟ್ವೀಟ್ ಮಾಡಿದ್ದು 'ಭಾರತ ನಿಯಮ ಉಲ್ಲಂಘಿಸಿ ಪಾಕಿಸ್ತಾನದ ಐದು ಸ್ಥಳಗಳ ಮೇಲೆ ಹೇಡಿತನದ ದಾಳಿ ನಡೆಸಿದೆ. ಭಾರತ ಹೇರಿರುವ ಈ ಯುದ್ಧ ಕ್ರಮದ ವಿರುದ್ಧ ಶಕ್ತಿಯುವಾದ ಪ್ರತಿಕ್ರಿಯೆ ನೀಡುವ ಎಲ್ಲ ಹಕ್ಕುಗಳೂ ಪಾಕಿಸ್ತಾನಕ್ಕೆ ಇವೆ. ನಾವು ಕೂಡ ಅತ್ಯಂತ ಪ್ರಬಲ ಪ್ರತಿಕ್ರಿಯೆ ನೀಡುತ್ತೇವೆ. ಇಡೀ ದೇಶವು ಪಾಕಿಸ್ತಾನ ಸಶಸ್ತ್ರ ಪಡೆಗಳಿಗೆ ಬೆಂಬಲವಾಗಿ ನಿಂತಿದೆ. ಶತ್ರುವನ್ನು ಹೇಗೆ ಎದುರಿಸಬೇಕು ಎಂಬುದು ಪಾಕಿಸ್ತಾನಕ್ಕೆ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ ಚೆನ್ನಾಗಿ ಗೊತ್ತಿದೆ. ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ' ಎಂದು ಬರೆದುಕೊಂಡಿದ್ದಾರೆ.