ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ್​ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ಭಯೋತ್ಪಾದಕರ ನೆಲೆ ಮೇಲೆ ವೈಮಾನಿಕ ದಾಳಿ; 100 ಕ್ಕೂ ಅಧಿಕ ಉಗ್ರರು ಮಟಾಶ್‌

ಭಾರತದಲ್ಲಿ ಉಗ್ರರು ನಡೆಸಿದ ನರಮೇಧಕ್ಕೆ ಭಾರತ ಪಾಕ್‌ಗೆ ತಕ್ಕ ಪ್ರತ್ಯುತ್ತರ ನೀಡಿದೆ. ಆಪರೇಷನ್‌ ಸಿಂಧೂರ್‌ ಮೂಲಕ ಪಾಕಿಸ್ತಾನದಲ್ಲಿರುವ 9 ಉಗ್ರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಸರಣಿ ನಿಖರ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಾಕ್‌ ಮೇಲೆ ವೈಮಾನಿಕ ದಾಳಿ; 100 ಕ್ಕೂ ಅಧಿಕ ಉಗ್ರರು ಮಟಾಶ್‌

Profile Vishakha Bhat May 7, 2025 8:28 AM

ನವದೆಹಲಿ: ಭಾರತದಲ್ಲಿ ಉಗ್ರರು ನಡೆಸಿದ ನರಮೇಧಕ್ಕೆ ಭಾರತ ಪಾಕ್‌ಗೆ ತಕ್ಕ ಪ್ರತ್ಯುತ್ತರ ನೀಡಿದೆ. ಆಪರೇಷನ್‌ ಸಿಂಧೂರ್‌ (Operation Sindoor) ಮೂಲಕ ಪಾಕಿಸ್ತಾನದಲ್ಲಿರುವ 9 ಉಗ್ರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಸರಣಿ ನಿಖರ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನ ಹಾಗೂ POK ಅಲ್ಲಿರುವ 9 ಸ್ಥಳಗಳಾದ ಕೊಟ್ಪಿ, ಮುಜಾಫರ್‌ಬಾದ್, ಬಹವಲ್ಪುರ್‌ ಬಳಿ ಏರ್‌ಸ್ಟ್ರೈಕ್ ನಡೆದಿದೆ. ಲಷ್ಕರ್ ಎ ತಯಬಾ ಮತ್ತು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರನ್ನು ಹತ್ಯೆ ಮಾಡಿದ್ದ ಪ್ರತೀಕಾರವಾಗಿ ಉಗ್ರರ ನೆಲೆಗೆ ನುಗ್ಗಿ ಉಡೀಸ್‌ ಮಾಡಲಾಗಿದೆ. , ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಜೈಶ್-ಎ-ಮೊಹಮ್ಮದ್ (ಜೆಇಎಂ), ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ ಒಂಬತ್ತು ನೆಲೆಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದೆ.

ಹಿರಿಯ ಅಧಿಕಾರಿಗಳ ಪ್ರಕಾರ, ಜೆಇಎಂನ ಪ್ರಬಲ ಕೋಟೆಯಾದ ಬಹವಾಲ್ಪುರ್ ಮತ್ತು ಮುರಿಡ್ಕೆಯಲ್ಲಿ ಎರಡು ದೊಡ್ಡ ದಾಳಿಗಳನ್ನು ನಡೆಸಲಾಗಿದ್ದು, ಪ್ರತಿ ಸ್ಥಳದಲ್ಲಿ ಅಂದಾಜು 25–30 ಭಯೋತ್ಪಾದಕರು ಹತರಾಗಿದ್ದಾರೆ. ಮುರಿಡ್ಕೆಯಲ್ಲಿ, ಎಲ್‌ಇಟಿಯ ನರ ಕೇಂದ್ರ ಮತ್ತು ಸೈದ್ಧಾಂತಿಕ ಪ್ರಧಾನ ಕಚೇರಿಯಾದ ಮಸ್ಜಿದ್ ವಾ ಮರ್ಕಜ್ ತೈಬಾ ಗುರಿಯಾಗಿತ್ತು, ಇದನ್ನು ದೀರ್ಘಕಾಲದಿಂದ ಪಾಕಿಸ್ತಾನದ "ಭಯೋತ್ಪಾದನಾ ನರ್ಸರಿ" ಎಂದು ಪರಿಗಣಿಸಲಾಗುತ್ತದೆ. ಇತರ ಗುರಿ ಸ್ಥಳಗಳಲ್ಲಿ ಸಾವುನೋವುಗಳ ಸಂಖ್ಯೆಯನ್ನು ಗುಪ್ತಚರ ಸಂಸ್ಥೆಗಳು ಇನ್ನೂ ಪರಿಶೀಲಿಸುತ್ತಿವೆ. ಪ್ರಾಥಮಿಕ ಅಂದಾಜಿನ ಪ್ರಕಾರ ಒಟ್ಟು 80 ರಿಂದ 90 ಭಯೋತ್ಪಾದಕರು ಹತರಾಗಿದ್ದಾರೆ.

ಈ ಸುದ್ದಿಯನ್ನೂ ಓದಿ: Operation Sindoor: 'ರೆಡಿ ಟು ಸ್ಟ್ರೈಕ್' ; ಆಪರೇಷನ್‌ ಸಿಂಧೂರ್‌ಗೂ ಮೊದಲು ಸೇನೆಯಿಂದ ಪೋಸ್ಟ್‌!

ದಾಳಿ ನಡೆಸುವ ಕೆಲವೇ ನಿಮಿಷಗಳ ಮೊದಲು ಭಾರತೀಯ ಸೇನೆಯು ಶಸ್ತ್ರಾಸ್ತ್ರ, ಮದ್ದುಗುಂಡುಗಳು ಮತ್ತು ಟ್ಯಾಂಕ್‌ಗಳನ್ನು ತೋರಿಸುವ ವೀಡಿಯೊವನ್ನು ಪೋಸ್ಟ್ ಮಾಡಿದೆ. ಶೀರ್ಷಿಕೆಯಲ್ಲಿ ʼರೆಡಿ ಟು ಸ್ಟ್ರೈಕ್‌ ಟ್ರೇನ್‌ ಟು ವಿನ್‌ʼ ಎಂದು ಬರೆದುಕೊಂಡಿದೆ. ವೀಡಿಯೊ ಪೋಸ್ಟ್ ಮಾಡಿದ ಕೆಲವೇ ಕ್ಷಣಗಳಲ್ಲಿ, ಬಹಾವಲ್ಪುರ್ ಮತ್ತು ಮುಜಫರಾಬಾದ್‌ನಲ್ಲಿ ಸ್ಫೋಟಗಳ ಶಬ್ದ ಕೇಳಿಬಂದಿದೆ. ಯಶಸ್ವಿಯಾಗಿ ದಾಳಿ ನಡೆಸಿದ ಬಳಿಕ ಭಾರತೀಯ ಸೇನೆ ಮತ್ತೆ ಪೋಸ್ಟ್‌ ಮಾಡಿ ನ್ಯಾಯ ಸಲ್ಲಿಸಿದ್ದೇವೆ ಎಂದು ಹೇಳಿದೆ.