ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ್​ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ಭಾರತದ ನಡೆಯನ್ನು 'ವಿಶ್ವಸಂಸ್ಥೆಯ ಚಾರ್ಟರ್‌ನ ಸ್ಪಷ್ಟ ಉಲ್ಲಂಘನೆ' ಎಂದ ಪಾಕ್

'ಪಾಕಿಸ್ತಾನದ ಸರ್ಕಾರ, ಸಶಸ್ತ್ರ ಪಡೆಗಳು ಮತ್ತು ಜನರು ಭಾರತದ ಆಕ್ರಮಣವನ್ನು ಎದುರಿಸಲು ಒಗ್ಗಟ್ಟಿನಿಂದ ನಿಲ್ಲುತ್ತಾರೆ. ಪಾಕಿಸ್ತಾನದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಅವರು ಯಾವಾಗಲೂ ದೃಢನಿಶ್ಚಯದಿಂದ ಕಾರ್ಯನಿರ್ವಹಿಸುತ್ತಾರೆ' ಎಂದು ಪಾಕ್‌ ತಿಳಿಸಿದೆ.

ಭಾರತದ ನಡೆಯನ್ನು 'ವಿಶ್ವಸಂಸ್ಥೆಯ ಚಾರ್ಟರ್‌ನ ಸ್ಪಷ್ಟ ಉಲ್ಲಂಘನೆ' ಎಂದ ಪಾಕ್

Profile Abhilash BC May 7, 2025 4:36 AM

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ 'ಆಪರೇಷನ್ ಸಿಂಧೂರ್‌'(Operation Sindoo) ಎಂಬ ಸೇನಾ ಕಾರ್ಯಾಚರಣೆಯ ಮೂಲಕ ಬುಧವಾರ ಬೆಳಗ್ಗಿನ ಜಾವ ಪಾಕ್‌ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಒಂಬತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಈ ದಾಳಿಯನ್ನು ಖಂಡಿಸಿರುವ ಪಾಕಿಸ್ತಾನ, ಇದು ವಿಶ್ವಸಂಸ್ಥೆಯ ಚಾರ್ಟರ್, ಅಂತಾರಾಷ್ಟ್ರೀಯ ಕಾನೂನು ಮತ್ತು ಅಂತರರಾಜ್ಯ ಸಂಬಂಧಗಳ ಸ್ಥಾಪಿತ ಮಾನದಂಡಗಳ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ಜತೆಗೆ ಭಾರತಕ್ಕೆ ನಾವು ಪ್ರತ್ಯುತ್ತರ ನೀಡುತ್ತೇವೆ ಎಂದು ಪಾಕ್‌ ಪ್ರಧಾನಿ ಶೆಹಬಾಜ್‌ ಶರೀಫ್(Pakistan PM Shehbaz Sharif) ಹೇಳಿದ್ದಾರೆ.

ದಾಳಿಯ ಬಳಿಕ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ, ʼಅಂತರರಾಜ್ಯ ಸಂಬಂಧಗಳ ಸ್ಥಾಪಿತ ನಿಯಮಗಳನ್ನು ಭಾರತ ಉಲ್ಲಂಘಿಸಿದೆ. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯುದ್ದಕ್ಕೂ ನಾಗರಿಕರನ್ನು ಗುರಿಯಾಗಿಸಿಕೊಂಡು, ಸ್ಟ್ಯಾಂಡ್‌ಆಫ್ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಭಾರತ ಪಾಕಿಸ್ತಾನದ ಸಾರ್ವಭೌಮತ್ವವನ್ನು ಉಲ್ಲಂಘಿಸಿದೆ. ಭಾರತದ ಆಕ್ರಮಣಕಾರಿ ಕೃತ್ಯವು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ನಾಗರಿಕರ ಹುತಾತ್ಮತೆಗೆ ಕಾರಣವಾಗಿದೆ. ಈ ಆಕ್ರಮಣಕಾರಿ ಕೃತ್ಯವು ವಾಣಿಜ್ಯ ವಾಯು ಸಂಚಾರಕ್ಕೂ ಗಂಭೀರ ಬೆದರಿಕೆಯನ್ನುಂಟುಮಾಡಿದೆ' ಎಂದು ಪಾಕ್‌ ಹೇಳಿದೆ.

'ಪಾಕಿಸ್ತಾನದ ಸರ್ಕಾರ, ಸಶಸ್ತ್ರ ಪಡೆಗಳು ಮತ್ತು ಜನರು ಭಾರತದ ಆಕ್ರಮಣವನ್ನು ಎದುರಿಸಲು ಒಗ್ಗಟ್ಟಿನಿಂದ ನಿಲ್ಲುತ್ತಾರೆ. ಪಾಕಿಸ್ತಾನದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಮತ್ತು ಸಂರಕ್ಷಿಸಲು ಅವರು ಯಾವಾಗಲೂ ದೃಢನಿಶ್ಚಯದಿಂದ ಕಾರ್ಯನಿರ್ವಹಿಸುತ್ತಾರೆ' ಎಂದು ಪಾಕ್‌ ತಿಳಿಸಿದೆ.



ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತ, ಭಯೋತ್ಪಾದನಾ ದಾಳಿಯನ್ನು ಯೋಜಿಸಿ, ಕಾರ್ಯರೂಪಕ್ಕೆ ತಂದ ಭಯೋತ್ಪಾದಕರ ಶಿಬಿರಗಳನ್ನು ನಾಶ ಮಾಡುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ. ದಾಳಿಯು ನಿರ್ದಿಷ್ಟ ಗುರಿ ಕೇಂದ್ರಿತವಾಗಿತ್ತು. ಪಾಕಿಸ್ತಾನದ ಸೇನೆಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿಲ್ಲ ಎಂದು ಎಂದು ತಿಳಿಸಿದೆ.