ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Heavy Rain: ದೆಹಲಿ-ಎನ್‌ಸಿಆರ್‌ನಲ್ಲಿ ಭಾರೀ ಮಳೆ; 100 ಕ್ಕೂ ಹೆಚ್ಚು ವಿಮಾನಗಳ ಸಂಚಾರಕ್ಕೆ ಅಡ್ಡಿ

ಭಾನುವಾರ ಮುಂಜಾನೆ ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಬಿರುಗಾಳಿ (Heavy Rain) ಮತ್ತು ಗುಡುಗು ಸಹಿತ ಭಾರೀ ಮಳೆಯಾಗಿದೆ. ರಾತ್ರಿಯಿಂದಲೇ ಸುರಿಯುತ್ತಿರುವ ಮಳೆಯಿಂದಾಗಿ ನಗರ ರಸ್ತೆಗಳು ಜಲಾವೃತಗೊಂಡಿವೆ. ಭಾರೀ ಮಳೆಯಿಂದಾಗಿ 100 ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

ದೆಹಲಿ-ಎನ್‌ಸಿಆರ್‌ನಲ್ಲಿ ಭಾರೀ ಮಳೆ;  ಮುಳುಗಡೆಗೊಂಡ ರಸ್ತೆಗಳು

Profile Vishakha Bhat May 25, 2025 8:40 AM

ನವದೆಹಲಿ: ಭಾನುವಾರ ಮುಂಜಾನೆ ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಬಿರುಗಾಳಿ (Heavy Rain) ಮತ್ತು ಗುಡುಗು ಸಹಿತ ಭಾರೀ ಮಳೆಯಾಗಿದೆ. ರಾತ್ರಿಯಿಂದಲೇ ಸುರಿಯುತ್ತಿರುವ ಮಳೆಯಿಂದಾಗಿ ನಗರ ರಸ್ತೆಗಳು ಜಲಾವೃತಗೊಂಡಿವೆ. ಮೋತಿ ಬಾಗ್, ಮಿಂಟೋ ರಸ್ತೆ ಮತ್ತು ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಬಳಿ ರಸ್ತೆ ಮುಚ್ಚಿಹೋಗಿದೆ. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಬಿರುಗಾಳಿ ಮತ್ತು ಭಾರೀ ಮಳೆಯಿಂದಾಗಿ 100 ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಚಂಡಮಾರುತದ ಸಮಯದಲ್ಲಿ 25 ಕ್ಕೂ ಹೆಚ್ಚು ವಿಮಾನಗಳ ಸಂಚಾರವನ್ನು ಬೇರೆಡೆಗೆ ತಿರುಗಿಸಲಾಗಿದೆ.

ವಿಮಾನದ ಅಡಚಣೆಯ ಕುರಿತು ವಿಮಾನ ನಿಲ್ದಾಣ ಟ್ವೀಟ್‌ ಮಾಡಿ ತಿಳಿಸಿದ್ದು, ಪ್ರಯಾಣಿಕರು ಸಹಕರಿಸುವಂತೆ ಕೋರಿದೆ. ಭಾರತ ಹವಾಮಾನ ಇಲಾಖೆ (ಐಎಂಡಿ) ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ರೆಡ್ ಅಲರ್ಟ್ ನೀಡಿದೆ. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ದೆಹಲಿಯನ್ನು ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮುಖ್ಯ ಅಂಡರ್‌ಪಾಸ್‌ನಲ್ಲಿ ತೀವ್ರ ನೀರು ನಿಂತಿತು. ಇದರ ಪರಿಣಾಮವಾಗಿ ವಾಹನ ಸವಾರರು ಪರೆದಾಡಿದ್ದಾರೆ.



ಈ ಸುದ್ದಿಯನ್ನೂ ಓದಿ: Rain News: ಮಳೆ ಅಬ್ಬರಕ್ಕೆ ಕೊಚ್ಚಿಹೋದ ಹೆದ್ದಾರಿ, ಕುಮಟಾ- ಶಿರಸಿ ಸಂಪರ್ಕ ಬಂದ್

ಪಶ್ಚಿಮ/ವಾಯುವ್ಯದಿಂದ ದೆಹಲಿ ಮತ್ತು ಪಕ್ಕದ ಪ್ರದೇಶಗಳಿಗೆ ಗುಡುಗು ಸಹಿತ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತನ್ನ ಪ್ರಸ್ತುತ ಪ್ರಕಟಣೆಯಲ್ಲಿ ತಿಳಿಸಿದೆ. ಉತ್ತರಾಖಂಡ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿಯೂ ಭಾರಿ ಮಳೆಯಾಗಿದೆ. ಈ ಬಾರಿ ವಾಡಿಕೆಗಿಂತ ಮೊದಲೇ ಮುಂಗಾರು (Monsoon in Kerala) ಪ್ರಾರಂಭವಾಗಲಿದೆ. ಮುಂದಿನ 24 ಗಂಟೆಗಳ ಒಳಗೆ ಕೇರಳಕ್ಕೆ ಮಾನ್ಸೂನ್ ಆಗಮಿಸಲಿದೆ. 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇರಳದಲ್ಲಿ ಅವಧಿಗಿಂತ ಮೊದಲೇ ಮಾನ್ಸೂನ್ ಪ್ರವೇಶಿಸಲಿದೆ. ಮಹಾರಾಷ್ಟ್ರದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.