ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pakistan Defence Minister: ಸಿಂಧೂ ನದಿ ನೀರನ್ನು ತಿರುಗಿಸಲು ನೋಡಿದರೆ ಆಕ್ರಮಣವನ್ನು ಎದುರಿಸಬೇಕಾಗುತ್ತದೆ; ಪಾಕ್‌ ರಕ್ಷಣಾ ಸಚಿವನಿಂದ ಭಾರತಕ್ಕೆ ಬೆದರಿಕೆ

ಪಾಕಿಸ್ತಾನ ಹಾಗೂ ಭಾರತದ ನಡುವೆ ಉದ್ವಿಗ್ನತೆ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ಭಾರತ ಪಾಕಿಸ್ತಾನಕ್ಕೆ ರಾಜತಾಂತ್ರಿಕತೆಯ ಮೂಲಕ ಬಿಸಿ ಮುಟ್ಟಿಸಿದೆ. 1960 ರಲ್ಲಿ ನಡೆದಿದ್ದ ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಿದೆ. ಇದೀಗ ಪಾಕಿಸ್ತಾನದ ರಕ್ಷಣಾ ಮಂತ್ರಿ ಭಾರತಕ್ಕೆ ಬೆದರಿಕೆ ಹಾಕಿದ್ದಾನೆ.

ಭಾರತಕ್ಕೆ ಬೆದರಿಕೆ ಹಾಕಿದ ಪಾಕ್‌ ರಕ್ಷಣಾ ಸಚಿವ!

Profile Vishakha Bhat May 3, 2025 3:53 PM

ಇಸ್ಲಾಮಾಬಾದ್‌: ಪಾಕಿಸ್ತಾನ ಹಾಗೂ ಭಾರತದ ನಡುವೆ ಉದ್ವಿಗ್ನತೆ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ಭಾರತ ಪಾಕಿಸ್ತಾನಕ್ಕೆ ರಾಜತಾಂತ್ರಿಕತೆಯ ಮೂಲಕ ಬಿಸಿ (Pakistan Defence Minister) ಮುಟ್ಟಿಸಿದೆ. 1960 ರಲ್ಲಿ ನಡೆದಿದ್ದ ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಿದೆ. ಇದೀಗ ಪಾಕಿಸ್ತಾನದ ರಕ್ಷಣಾ ಮಂತ್ರಿ ಭಾರತಕ್ಕೆ ಬೆದರಿಕೆ ಹಾಕಿದ್ದಾನೆ. ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಭಾರತವು ಸಿಂಧೂ ಒಪ್ಪಂದದಡಿಯಲ್ಲಿ ದೇಶದ ಪಾಲಿನ ನೀರನ್ನು ಬೇರೆಡೆಗೆ ತಿರುಗಿಸಲು ಬೇರೆ ಯಾವುದೇ ರೀತಿಯ ಪ್ರಯತ್ನವನ್ನು ಮಾಡಿದರೆ ಅದನ್ನು ಧ್ವಂಸಗೊಳಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಹೆಚ್ಚಿದ ಉದ್ವಿಗ್ನತೆಯ ನಡುವೆಯೂ ಮತ್ತೆ ಯುದ್ಧದ ಬಗ್ಗೆ ಅವರು ಮಾತನಾಡಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪಾಕಿಸ್ತಾನದ 80% ಕೃಷಿ ಭೂಮಿಗೆ ನೀರನ್ನು ಒದಗಿಸುವ ಸಿಂಧೂ ನದಿ ನೀರಿನ ಒಪ್ಪಂದವನ್ನು ಭಾರತ ರದ್ದುಗೊಳಿಸಿದೆ. ಸಂದರ್ಶನವೊಂದರಲ್ಲಿ, ಪ್ರಚೋದನಕಾರಿ ಹೇಳಿಕೆಗಳ ಸರಮಾಲೆಯನ್ನು ನೀಡಿರುವ ಪಾಕಿಸ್ತಾನಿ ಸಚಿವರು, ಸಿಂಧೂ ನದಿಯನ್ನು ಬೇರೆಡೆ ತಿರುಗಿಸಲು ಭಾರತ ಪ್ರಯತ್ನಿಸಿದರೆ ಆಕ್ರಮಣ ಮಾಡುತ್ತೇವೆ ಎಂದು ಹೇಳಿದ್ದಾರೆ. ಸಿಂಧೂ ನದಿ ಜಲಾನಯನ ಪ್ರದೇಶದಲ್ಲಿ ಭಾರತ ಅಣೆಕಟ್ಟುಗಳನ್ನು ನಿರ್ಮಿಸಲು ಮುಂದಾದರೆ ಪಾಕಿಸ್ತಾನದ ಪ್ರತಿಕ್ರಿಯೆಯ ಬಗ್ಗೆ ಕೇಳಿದಾಗ, ಆಸಿಫ್, "ಅದು ಪಾಕಿಸ್ತಾನಕ್ಕೆ ಮಾಡುವ ಅನ್ಯಾಯವಾಗಿದೆ. ಇದನ್ನು ಎಂದಿಗೂ ನಾವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಆಸಿಫ್ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಶಹನವಾಜ್ ಹುಸೇನ್ ಪಾಕಿಸ್ತಾನದ ವಿರುದ್ಧ ಕಿಡಿ ಕಾರಿದ್ದಾರೆ. ಇಂತಹ ಟೊಳ್ಳು ಬೆದರಿಕೆಗಳಿಗೆ ಯಾರೂ ಹೆದರುವುದಿಲ್ಲ ಎಂದು ಹೇಳಿದ್ದಾರೆ. ಖವಾಜಾ ಆಸಿಫ್ ಸಂಪೂರ್ಣವಾಗಿ ಭಯಭೀರತಾಗಿದ್ದಾರೆ. ಪಾಕಿಸ್ತಾನದ ರಕ್ಷಣಾ ಸಚಿವರಾಗಿದ್ದರೂ, ಅವರಿಗೆ ಯಾವುದೇ ನಿಯಂತ್ರಣವಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Pahalgam Terror Attack: ಸಿಂಧೂ ನದಿ ನಮ್ಮದು, ನೀರು ಬಿಡದಿದ್ದರೆ ಭಾರತೀಯರ ರಕ್ತ ಹರಿಯುತ್ತದೆ; ನಾಲಗೆ ಹರಿಬಿಟ್ಟ ಪಾಕ್‌ ರಾಜಕಾರಣಿ ಬಿಲಾವಲ್ ಭುಟ್ಟೋ ಝರ್ದಾರಿ

ಸಿಂಧೂ ಜಲ ಒಪ್ಪಂದ ರದ್ದಾದ ನಂತರ ಸಿಂಧೂ ಜಲ ಒಪ್ಪಂದದಡಿಯಲ್ಲಿ ನದಿ ನೀರು ಬಿಡುಗಡೆ ರದ್ದತಿ ಹಾಗೂ ಬೇರೆಡೆಗೆ ತಿರುಗಿಸಲು ಭಾರತ ನಡೆಸುವ ಯಾವುದೇ ಪ್ರಯತ್ನವನ್ನು "ಯುದ್ಧದ ಕೃತ್ಯ" ಎಂದು ಪರಿಗಣಿಸಲಾಗುತ್ತದೆ ಎಂದು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಮಿತಿ ಹೇಳಿತ್ತು. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ಕಾಶ್ಮೀರದಲ್ಲಿ ನಡೆಸಿದ ದಾಳಿಯ ನಂತರ ಭಾರತ ರಾಜತಾಂತ್ರಿಕ ನಡೆಯನ್ನು ಅನುಸರಿಸಿದೆ. ದಾಳಿಯ ನಂತರ, ಭದ್ರತಾ ಕುರಿತ ಸಂಪುಟ ಸಮಿತಿ ಸಭೆ ನಡೆಸಿ ಸಿಂಧೂ ಜಲ ಒಪ್ಪಂದವನ್ನು ರದ್ದು ಮಾಡಲು ಆದೇಶ ನೀಡಲಾಗಿದೆ. 1960 ರಲ್ಲಿ ಸಹಿ ಹಾಕಲ್ಪಟ್ಟ ಮತ್ತು ವಿಶ್ವಬ್ಯಾಂಕ್ ಮಧ್ಯಸ್ಥಿಕೆ ವಹಿಸಿದ ಈ ಒಪ್ಪಂದವು ಭಾರತ ಮತ್ತು ಪಾಕಿಸ್ತಾನದ ನಡುವಿನ ಆರು ನದಿಗಳ ವಿಭಜನೆಯನ್ನು ನಿಯಂತ್ರಿಸುತ್ತದೆ. ಸಿಂಧೂ ನದಿ ಮತ್ತು ಅದರ ಉಪನದಿಗಳಾದ ಝೀಲಂ, ಚೆನಾಬ್, ರಾವಿ, ಬಿಯಾಸ್ ಮತ್ತು ಸಟ್ಲುಜ್‌ಗಳ ನೀರು ಸರಬರಾಜು ಮೇಲೆ ಗಂಭೀರ ಪರಿಣಾಮ ಬೀರಲಿದೆ. ಈ ನದಿಗಳು ಪಾಕಿಸ್ತಾನಕ್ಕೆ ನೀರು ಸರಬರಾಜು ಮಾಡುತ್ತಿದ್ದು ಇದರಿಂದ ಪಾಕಿಸ್ತಾನದ ಲಕ್ಷಾಂತರ ಜನ ಜೀವನ ಅಸ್ತವ್ಯಸ್ತಗೊಳ್ಳಲಿದೆ.