ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ceasefire Across: ಕದನ ವಿರಾಮ ಉಲ್ಲಂಘನೆ; ಪಾಕಿಸ್ತಾನ ಸೇನೆಯಿಂದ LOC ಬಳಿ ನಾಲ್ಕನೆ ದಿನವೂ ಗುಂಡಿನ ದಾಳಿ

ಏಪ್ರಿಲ್ 27-28ರ ರಾತ್ರಿ, ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಪಾಕಿಸ್ತಾನಿ ಸೇನಾ ನೆಲೆಗಳು ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಪೂಂಚ್ ವಲಯದಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘಿಸಿದ್ದು ಇದೇ ಮೊದಲು.

ಪಾಕಿಸ್ತಾನ ಸೇನೆಯಿಂದ LOC ಬಳಿ ನಾಲ್ಕನೆ ದಿನವೂ ಗುಂಡಿನ ದಾಳಿ

Profile Vishakha Bhat Apr 28, 2025 8:38 AM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ದದ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತ ಈಗಾಗಲೇ ಪಾಕಿಸ್ತಾನವನ್ನು ಕಟ್ಟಿಹಾಕಲು ರಾಜತಾಂತ್ರಿಕ ನಡೆಯನ್ನು ಬಳಸಿದ್ದು, ಪಾಕ್‌ಗೆ ಮತ್ತಷ್ಟು ಸಂಕಷ್ಟ ಎದರುಗಾಗಿದೆ. ಇಂತಹ ಸಮಯದಲ್ಲಿ ಪಾಕಿಸ್ತಾನ ಉದ್ಧಟನ ಮೆರೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ)ಯಲ್ಲಿ ಪಾಕಿಸ್ತಾನಿ ಪಡೆಗಳು ಸತತ ನಾಲ್ಕನೇ ರಾತ್ರಿಯೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ ಎಂದು ಅಧಿಕಾರಿಗಳು ಸೋಮವಾರ ಬೆಳಿಗ್ಗೆ ತಿಳಿಸಿವೆ.

ಏಪ್ರಿಲ್ 27-28ರ ರಾತ್ರಿ, ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಪಾಕಿಸ್ತಾನಿ ಸೇನಾ ನೆಲೆಗಳು ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಪೂಂಚ್ ವಲಯದಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮವನ್ನು ಉಲ್ಲಂಘಿಸಿದ್ದು ಇದೇ ಮೊದಲು. ಕಳೆದ ವಾರ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕ್‌ ನಡುವೆ ಉದ್ವಿಗ್ನತೆಯ ಮಧ್ಯೆ, ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದು ಇದು ಸತತ ನಾಲ್ಕನೇ ರಾತ್ರಿ. "ಏಪ್ರಿಲ್ 27-28ರ ರಾತ್ರಿ, ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನಾ ಠಾಣೆಗಳು ಎಲ್‌ಒಸಿಯಾದ್ಯಂತ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆಸಿದವು. ಭಾರತೀಯ ಪಡೆಗಳು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದವು" ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಏಪ್ರಿಲ್ 24 ರಿಂದ ನಾಲ್ಕು ದಿನಗಳಲ್ಲಿ ಒಂಬತ್ತು ರಾಜತಾಂತ್ರಿಕರು ಮತ್ತು ಅಧಿಕಾರಿಗಳು ಸೇರಿದಂತೆ 537 ಪಾಕಿಸ್ತಾನಿ ಪ್ರಜೆಗಳು ಅಟ್ಟಾರಿ-ವಾಘಾ ಗಡಿಯ ಮೂಲಕ ಭಾರತವನ್ನು ತೊರೆದಿದ್ದಾರೆ. ಏತನ್ಮಧ್ಯೆ, ಕಳೆದ ನಾಲ್ಕು ದಿನಗಳಲ್ಲಿ 14 ರಾಜತಾಂತ್ರಿಕರು ಮತ್ತು ಅಧಿಕಾರಿಗಳು ಸೇರಿದಂತೆ ಒಟ್ಟು 850 ಭಾರತೀಯರು ಪಂಜಾಬ್‌ನಲ್ಲಿರುವ ಅಂತರರಾಷ್ಟ್ರೀಯ ಗಡಿ ದಾಟುವಿಕೆಯ ಮೂಲಕ ಪಾಕಿಸ್ತಾನದಿಂದ ಮರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Pahalgam Attack: ಪಹಲ್ಗಾಮ್‌ ದಾಳಿ ನಡೆದ ವಾರದೊಳಗೆ ಮತ್ತೆ ಪ್ರವಾಸಿಗರ ಕಲರವ; ಚಿಗುರಿದ ಭರವಸೆ

ಇನ್ನೊಂದೆಡೆ ಎನ್‌ಐಎ ಉಗ್ರರಿಗಾಗಿ ಬಲೆ ಬೀಸಿದೆ. ಪಹಲ್ಗಾಮ್‌ ಸುತ್ತಲೂ ಕಾರ್ಯಾಚರಣೆ ನಡೆಯುತ್ತಿದೆ. ಈ ವರೆಗೆ ಸುಮಾರು 500 ಕ್ಕೂ ಅಧಿಕ ಸ್ಥಳೀಕಯರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಮಹತ್ವದ ಬೆಳವಣಿಯಲ್ಲಿ, ಭಾರತೀಯ ಸೇನೆ ಕಾಶ್ಮೀರದಲ್ಲಿರುವ 10 ಉಗ್ರರ ಮನೆಯನ್ನು ಧ್ವಂಸಗೊಳಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದೆ.