Pahalgam Terror Attack: ವೈದ್ಯಕೀಯ ವೀಸಾ ಹೊಂದಿದ್ದರೂ 5 ದಿನಗಳೊಳಗೆ ದೇಶ ತೊರೆಯಬೇಕು ; ಪಾಕಿಸ್ತಾನಿಯರಿಗೆ ವಿದೇಶಾಂಗ ಇಲಾಖೆ ಸೂಚನೆ
ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ 26 ಜನರು ಮೃತಪಟ್ಟ ಬಳಿಕ ಭಾರತ ಪಾಕಿಸ್ತಾನದ ಮೇಲೆ ಕ್ರಮ ಜರುಗಿಸಲು ಮುಂದಾಗಿದೆ. ಭಾರತ, ಎಲ್ಲಾ ಪಾಕಿಸ್ತಾನಿಗಳಿಗೆ ನೀಡಲಾಗುವ ವೈದ್ಯಕೀಯ ವೀಸಾಗಳು ಏಪ್ರಿಲ್ 29 ರವರೆಗೆ ಮಾತ್ರ ಮಾನ್ಯವಾಗಿರುತ್ತವೆ.


ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ (Pahalgam Terror Attack) ನಡೆದ ಭಯೋತ್ಪಾದಕ ದಾಳಿಯ ನಂತರ 26 ಜನರು ಮೃತಪಟ್ಟ ಬಳಿಕ ಭಾರತ ಪಾಕಿಸ್ತಾನದ ಮೇಲೆ ಕ್ರಮ ಜರುಗಿಸಲು ಮುಂದಾಗಿದೆ. ಭಾರತ, ಎಲ್ಲಾ ಪಾಕಿಸ್ತಾನಿಗಳಿಗೆ ನೀಡಲಾಗುವ ವೈದ್ಯಕೀಯ ವೀಸಾಗಳು ಏಪ್ರಿಲ್ 29 ರವರೆಗೆ ಮಾತ್ರ ಮಾನ್ಯವಾಗಿರುತ್ತವೆ ಎಂದು ಗುರುವಾರ ಘೋಷಿಸಿದೆ. ಪಾಕಿಸ್ತಾನಿ ಪ್ರಜೆಗಳಿಗೆ ನೀಡುವ ಎಲ್ಲಾ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ವಿದೇಶಾಂಗ ಸಚಿವಾಲಯ (MEA) ಹೇಳಿಕೆಯಲ್ಲಿ ತಿಳಿಸಿದೆ.
ಏಪ್ರಿಲ್ 27 ರಿಂದ ಜಾರಿಗೆ ಬರುವಂತೆ ಭಾರತವು ಪಾಕಿಸ್ತಾನಿ ಪ್ರಜೆಗಳಿಗೆ ನೀಡುವ ಎಲ್ಲಾ ಮಾನ್ಯ ವೀಸಾಗಳನ್ನು ರದ್ದುಗೊಳಿಸಲಾಗಿದೆ. ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗುವ ವೈದ್ಯಕೀಯ ವೀಸಾಗಳು ಏಪ್ರಿಲ್ 29 ರವರೆಗೆ ಮಾತ್ರ ಮಾನ್ಯವಾಗಿರುತ್ತವೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಪ್ರಸ್ತುತ ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು ವೀಸಾಗಳ ಅವಧಿ ಮುಗಿಯುವ ಮೊದಲು ಭಾರತವನ್ನು ತೊರೆಯಬೇಕು ಎಂದು ಆದೇಶ ಹೊರಡಿಸಲಾಗಿದೆ.
ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹೇಯ ಕೃತ್ಯದ ನಂತರ ಭಾರತ ಪಾಕ್ ಮೇಲೆ ಹಲವು ಕ್ರಮಗಳನ್ನು ಜಾರಿ ಮಾಡಿದೆ. ಬುಧವಾರ ನಡೆದ ಸಂಪುಟ ಸಭೆಯಲ್ಲಿ 1960 ರಲ್ಲಿ ಮಾಡಿಕೊಂಡಿದ್ದ ಸಿಂಧೂ ನದಿ ನೀರು ಒಪ್ಪಂದವನ್ನು ಈ ಕೂಡಲೇ ರದ್ದು ಮಾಡಲಾಗುವುದು ಎಂದು ವಿದೇಶಾಂಗ ಇಲಾಖೆ ತಿಳಿಸಿದೆ. ಅಟ್ಟಾರಿ ಗಡಿಯನ್ನು ಬಂದ್ ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಅಲ್ಲಿ ನಡೆಯುತ್ತಿದ್ದ ಎಲ್ಲಾ ಸೇನಾ ಕಾರ್ಯಕ್ರಮಗಳನ್ನು ರದ್ದು ಮಾಡುವಂತೆ ತಿಳಿಸಿದೆ. ಒಪ್ಪಿಗೆಯೊಂದಿಗೆ ಇಲ್ಲಿಂದ ಗಡಿಯನ್ನು ದಾಟಿದವರು ಮೇ 1 ರ ಒಳಗಾಗಿ ಈ ಮಾರ್ಗದ ಮೂಲಕವೇ ವಾಪಾಸಗಬೇಕು ಎಂದು ತಿಳಿಸಲಾಗಿದೆ. ಸಾರ್ಕ್ ವೀಸಾ ವಿನಾಯಿತಿ ಯೋಜನೆಯಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳಿಗೆ ಭಾರತಕ್ಕೆ ಪ್ರಯಾಣಿಸಲು ಇನ್ನುಮುಂದೆ ಅನುಮತಿ ಇರುವುದಿಲ್ಲ.
ಈ ಸುದ್ದಿಯನ್ನೂ ಓದಿ: Pahalgam terror attack: ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿದ ಪಾಕಿಸ್ತಾನಿ ಸೆಲೆಬ್ರಿಟಿಗಳು
ಪಾಕಿಸ್ತಾನಿ ಪ್ರಜೆಗಳಿಗೆ ಹಿಂದೆ ನೀಡಲಾದ ಎಲ್ಲಾ SPES ವೀಸಾಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಪ್ರಸ್ತುತ ಭಾರತದಲ್ಲಿರುವ ಪಾಕಿಸ್ತಾನದವರಿಗೆ ಭಾರತವನ್ನು ತೊರೆಯಲು 48 ಗಂಟೆಗಳ ಗಡುವನ್ನು ನೀಡಲಾಗಿದೆ. ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಲಾಗಿದೆ. ಅವರು ಭಾರತವನ್ನು ಬಿಡಲು ಒಂದು ವಾರ ಕಾಲಾವಕಾಶ ನೀಡಲಾಗಿದೆ.