Pahalgam Terror Attack: ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕ್‌ಗೆ ಹುಟ್ಟಿದ ನಡುಕ; ಕ್ಷಿಪಣಿಗಳ ಪರೀಕ್ಷೆ, ಹೈ ಅಲರ್ಟ್ ಘೋಷಣೆ
ಪಹಲ್ಗಾಮ್‌ನಲ್ಲಿ ಸೋಮವಾರ ನಡೆದ ಉಗ್ರರ ಭೀಕರ ದಾಳಿಗೆ ಈ ವರೆಗೆ 26 ಮಂದಿ ಮೃತಪಟ್ಟಿದ್ದಾರೆ. ದಾಳಿಗೆ ಪ್ರತ್ಯುತ್ತರ ನೀಡಲು ಭಾರತ ಸಜ್ಜಾಗಿದ್ದು, ಈಗಾಗಲೇ ರಾಜತಾಂತ್ರಿಕ ನಡೆಯ ಮೂಲಕ ಪಾಕ್‌ಗೆ ಬಿಸಿ ಮುಟ್ಟಿಸಿದೆ. ಅಷ್ಟೇ ಅಲ್ಲದೆ ವೈರಿ ರಾಷ್ಟ್ರಕ್ಕೆ ಎಚ್ಚರಿಕೆ ನೀಡಿದ್ದು, ಕೃತ್ಯ ಎಸೆಗಿದ ಒಬ್ಬರನ್ನೂ ಬಿಡುವುದಿಲ್ಲ ಎಂದು ಹೇಳಿದೆ.


ಇಸ್ಲಾಮಾಬಾದ್: ಪಹಲ್ಗಾಮ್‌ನಲ್ಲಿ (Pahalgam Terror Attack) ಸೋಮವಾರ ನಡೆದ ಉಗ್ರರ ಭೀಕರ ದಾಳಿಗೆ ಈ ವರೆಗೆ 26 ಮಂದಿ ಮೃತಪಟ್ಟಿದ್ದಾರೆ. ದಾಳಿಗೆ ಪ್ರತ್ಯುತ್ತರ ನೀಡಲು ಭಾರತ ಸಜ್ಜಾಗಿದ್ದು, ಈಗಾಗಲೇ ರಾಜತಾಂತ್ರಿಕ ನಡೆಯ ಮೂಲಕ ಪಾಕ್‌ಗೆ ಬಿಸಿ ಮುಟ್ಟಿಸಿದೆ. ಅಷ್ಟೇ ಅಲ್ಲದೆ ವೈರಿ ರಾಷ್ಟ್ರಕ್ಕೆ ಎಚ್ಚರಿಕೆ ನೀಡಿದ್ದು, ಕೃತ್ಯ ಎಸೆಗಿದ ಒಬ್ಬರನ್ನೂ ಬಿಡುವುದಿಲ್ಲ ಎಂದು ಹೇಳಿದೆ. ಭಾರತದಿಂದ ಈ ಹೇಳಿಕೆ ಬರುತ್ತಲೇ ಪಾಕ್ ಎದೆಯಲ್ಲಿ ನಡುಕ ಹುಟ್ಟಿದ್ದು, ಕಳೆದ ಎರಡು ದಿನದಿಂದ ಪಾಕಿಸ್ತಾನ ಅಲರ್ಟ್ ಘೋಷಣೆ ಮಾಡಿದೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ತನ್ನ ಶಕ್ತಿಯನ್ನು ಪ್ರದರ್ಶಿಸಲು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯಲ್ಲಿ ಪಾಕಿಸ್ತಾನದ ಪಾಲ್ಗೊಳ್ಳುವಿಕೆಯಿಂದ ಜಾಗತಿಕ ಗಮನವನ್ನು ಬೇರೆಡೆಗೆ ಸೆಳೆಯಲು ಯೋಜನೆಯನ್ನು ರೂಪಿಸಿದ್ದಾರೆ.
ಪಾಕಿಸ್ತಾನ ಕ್ಷಿಪಣಿಗಳ ಪರೀಕ್ಷೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಈ ಕ್ಷಿಪಣಿ ಪರೀಕ್ಷೆಯನ್ನು ಭಾರತದ ಆಕ್ರಮಣಶೀಲತೆಯ ವಿರುದ್ಧ ರಕ್ಷಣಾತ್ಮಕ ಕ್ರಮವಾಗಿ ಪ್ರಸ್ತುತಪಡಿಸಲು ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ. ಇಂದು ಬಿಹಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತನಾಡಿ, ಭಯೋತ್ಪಾದಕರು ಅಮಾಯಕ ನಾಗರಿಕರನ್ನು ಕೊಂದ ಕ್ರೂರತೆಯಿಂದ ಇಡೀ ರಾಷ್ಟ್ರವು ದುಃಖಿತವಾಗಿದೆ; ಕೋಟ್ಯಂತರ ನಾಗರಿಕರು ದುಃಖಿತರಾಗಿದ್ದಾರೆ. ಇಡೀ ದೇಶವು ಎಲ್ಲಾ ಸಂತ್ರಸ್ತ ಕುಟುಂಬಗಳ ದುಃಖದಲ್ಲಿ ಜೊತೆಗಿದೆ. 'ಈ ದಾಳಿ ನಿರಾಯುಧ ಪ್ರವಾಸಿಗರ ಮೇಲೆ ಮಾತ್ರ ನಡೆದಿಲ್ಲ, ದೇಶದ ಶತ್ರುಗಳು ಭಾರತದ ನಂಬಿಕೆಯ ಮೇಲೆ ದಾಳಿ ಮಾಡಲು ಧೈರ್ಯ ಮಾಡಿದ್ದಾರೆ ಎಂದು ಹೇಳಿದ ಮೋದಿ, ಈ ದಾಳಿಯನ್ನು ನಡೆಸಿದ ಭಯೋತ್ಪಾದಕರು ಮತ್ತು ಈ ದಾಳಿಗೆ ಸಂಚು ರೂಪಿಸಿದವರಿಗೆ ಅವರು ಊಹಿಸಲಾಗದಷ್ಟು ದೊಡ್ಡ ಶಿಕ್ಷೆಯನ್ನು ನೀಡಲಾಗುವುದು ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. ಈಗ ಭಯೋತ್ಪಾದಕರು ಬಿಟ್ಟಿರುವ ಅಲ್ಪಸ್ವಲ್ಪ ನೆಲವನ್ನು ಕೂಡ ನಾಶಮಾಡುವ ಸಮಯ ಬಂದಿದೆ ಎಂದು ಗುಡುಗಿದ್ದರು.
ಈ ಸುದ್ದಿಯನ್ನೂ ಓದಿ: Pahalgam Terror Attack: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ; ಪಾಕಿಸ್ತಾನ ಹೈಕಮಿಷನ್ ಹೊರಗೆ ಭಾರಿ ಪ್ರತಿಭಟನೆ
ಒಬ್ಬೊಬ್ಬರನ್ನೂ ಹುಡುಕಿ ಹೊಡೆಯುತ್ತೇವೆ ಎಂಬ ಮಾತು ಪಾಕ್‌ಗೆ ನಡುಕ ಹುಟ್ಟಿಸಿದಂತಿದೆ. ಕಳೆದೆರಡು ದಿನಗಳಿಂದ ಪಾಕಿಸ್ತಾನ ಸೈನ್ಯ ಜಾಗೃತರಾಗಿವೆ. ಇತ್ತೀಚೆಗೆ ಪಾಕ್ ಸೇನಾ ಮುಖ್ಯಸ್ಥ ಕಾಶ್ಮೀರ ನಮ್ಮದು. ಅದು ನಮ್ಮ ಕುತ್ತಿಗೆಯ ರಕ್ತನಾಳವಿದ್ದಂತೆ ಎಂದು ಹೇಳಿದ್ದರು. ಅವರ ಹೇಳಿಕೆಯ ಒಂದು ವಾರದ ನಂತರ ಈ ದಾಳಿ ನಡೆದಿದೆ.