PM Kisan 23rd Installment: 9.44 ಕೋಟಿ ರೈತರ ಖಾತೆಗಳಿಗೆ 18,880 ಕೋಟಿ ರುಪಾಯಿ ವಿತರಿಸಿದ ಪ್ರಧಾನಿ ನರೇಂದ್ರ ಮೋದಿ
Narendra Modi: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 23ನೇ ಕಂತು ಬಿಡುಗಡೆಯಾಗಿದೆ. 23ನೇ ಕಂತಿನ ಹಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ (ಜೂನ್ 20) ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಿಡುಗಡೆ ಮಾಡಿದರು.
ಸಾಂದರ್ಭಿಕ ಚಿತ್ರ -
ಕೋಲ್ಕತಾ, ಜೂ. 20: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhan Mantri Kisan Samman Nidhi) ಫಲಾನುಭವಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಪಿಎಂ ಕಿಸಾನ್ ಸಮ್ಮಾನ್‌ನ 23ನೇ ಕಂತಿನ ಹಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಶನಿವಾರ (ಜೂನ್ 20) ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಿಡುಗಡೆ ಮಾಡಿದರು (PM Kisan 23rd Installment). ಹೂಗ್ಲಿ ಜಿಲ್ಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ಮೋದಿ ಡಿಜಿಟಲ್ ಫ್ಲಾಟ್‌ಫಾರ್ಮ್ ಮೂಲಕ ವಿತರಿಸಿದರು. ಒಟ್ಟು 9.44 ಕೋಟಿ ರೈತರ ಖಾತೆಗಳಿಗೆ 18,880 ಕೋಟಿ ರುಪಾಯಿ ಬಿಡುಗಡೆಗಿದೆ.
ಇನ್ನು ಈ ಯೋಜನೆಯಡಿ ರಾಜ್ಯದ 41,54,160 ಫಲಾನುಭವಿಗಳಿಗೆ ಸುಮಾರು 1,100 ಕೋಟಿ ರುಪಾಯಿ ನೇರ ನದು ವರ್ಗಾವಣೆ ಮೂಲಕ ಜಮೆಯಾಗಲಿದೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೆರವಾಗುವ ಉದ್ದೇಶದಿಂದ 2019ರಲ್ಲಿ ಈ ಯೋಜನೆ ಆರಂಭಿಸಲಾಗಿದೆ. ಈ ಯೋಜನೆ ಪ್ರಕಾರ ರೈತರಿಗೆ 3 ಕಂತುಗಳಲ್ಲಿ 6,000 ರುಪಾಯಿ ವರ್ಗಾಯಿಸಲಾಗುತ್ತಿದೆ. ಪ್ರತಿ ಕಂತನ್ನು ಪ್ರತಿ 4 ತಿಂಗಳಿಗೊಮ್ಮೆ ನೀಡಲಾಗುತ್ತದೆ. 22ನೇ ಕಂತನ್ನು ಮಾರ್ಚ್ 13ರಂದು ಅಸ್ಸಾಂನ ಗುವಾಹಟಿಯಲ್ಲಿ ಬಿಡುಗಡೆ ಮಾಡಲಾಗಿತ್ತು.
ಪ್ರಧಾನಿ ನೃಎಂದ್ರ ಮೋದಿ ಅವರ ಭಾಷಣ:
Delighted to be in Tarakeswar. Addressing a programme on Paschimbanga Divas. Do watch. https://t.co/fh9IHujCpQ
— Narendra Modi (@narendramodi) June 20, 2026
ಕೆವೈಸಿ ಕಡ್ಡಾಯ
ಫಲಾನುಭವಿಗಳಿಗೆ ಕೆವೈಸಿ ಮಾಡುವುದು ಕಡ್ಡಾಯಗೊಳಿಸಲಾಗಿದೆ. ರೈತರು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದರೆ ಮಾತ್ರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಬರುತ್ತದೆ. ಅಲ್ಲದೆ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ. ಜತೆಗೆ ಸರ್ಕಾರದ ಅಗ್ರಿಸ್ಟಾಕ್‌ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳುವುದು ಕೂಡ ಕಡ್ಡಾಯ.
ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅನುದಾನ ಹೆಚ್ಚಳ? ಬಜೆಟ್‌ನಲ್ಲಿ ರೈತರಿಗೆ ಗುಡ್‌ನ್ಯೂಸ್ ನೀಡುತ್ತ ಮೋದಿ ಸರ್ಕಾರ?
ಪಿಎಂ ಕಿಸಾನ್ ಯೋಜನೆಗೆ ಅರ್ಹರೇ ಎನ್ನುವುದು ಪರಿಶೀಲಿಸುವುದು ಹೇಗೆ?
- ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್: pmkisan.gov.inಗೆ ಭೇಟಿ ನೀಡಿ.
- ಹೋಮ್‌ಪೇಜ್‌ನಲ್ಲಿ Beneficiary Status ಆಯ್ಕೆ ಮೇಲೆ ಕ್ಲಿಕ್ ಮಾಡಿ.
- ಇಲ್ಲಿ ನೀವು ಆಧಾರ್ ನಂಬರ್, ಬ್ಯಾಂಕ್ ಅಕೌಂಟ್ ನಂಬರ್ ಅಥವಾ ಮೊಬೈಲ್ ನಂಬರ್ ನಮೂದಿಸಿ.
- ಬಳಿಕ ಅಗತ್ಯ ಮಾಹಿತಿ ನೀಡಬೇಕು. ಕೊನೆಗೆ Get Data ಬಟನ್ ಕ್ಲಿಕ್ ಮಾಡಿ.
- ಈಗ ಸ್ಕ್ರೀನ್ ಮೇಲೆ ವಿವರ ಮೂಡುತ್ತದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಕಂತು ಬಂದಿಲ್ಲವೆ? ಸಮಸ್ಯೆ ಪರಿಹಾರಕ್ಕೆ ಇಲ್ಲಿದೆ ಟಿಪ್ಸ್
ಪಿಎಂ ಕಿಸಾನ್‌ಗೆ ಅರ್ಜಿ ಸಲ್ಲಿಸುವ ವಿಧಾನ
- ಮೊದಲು ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್ pmkisan.gov.inಗೆ ಭೇಟಿ ನೀಡಬೇಕು.
- ಹೊಸ ರೈತರು ನೋಂದಣಿ (New Farmer Registration) ಬಟನ್ ಮೇಲೆ ಕ್ಲಿಕ್ ಮಾಡಿ.
- ನಂತರ ಆಧಾರ್ ಸಂಖ್ಯೆ, ರಾಜ್ಯ, ಜಿಲ್ಲೆ ಮತ್ತು ವೈಯಕ್ತಿಕ ಬ್ಯಾಂಕ್ ಮಾಹಿತಿ ಸೇರಿದಂತೆ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ. ನಂತರ ಫಾರ್ಮ್ ಅನ್ನು ಸಲ್ಲಿಸಿ ಮತ್ತು ಸೇವ್ ಮಾಡಿ ಇಟ್ಟುಕೊಳ್ಳಿ.
- ನಿಮ್ಮ ಅರ್ಜಿ ಸಲ್ಲಿಕೆ ಆದ ನಂತರ ಅನುಮೋದನೆ ನೀಡುವ ಮೊದಲು ಸ್ಥಳೀಯ ಅಧಿಕಾರಿಗಳು ಅದನ್ನು ಪರಿಶೀಲಿಸುತ್ತಾರೆ.
- ಅರ್ಜಿಯ ಸ್ಥಿತಿಯನ್ನು ಹೀಗೆ ಪರಿಶೀಲಿಸಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ-pmkisan.gov.in
- ಈಗ ಪುಟದ ಬಲಭಾಗದಲ್ಲಿರುವ ‘ನಿಮ್ಮ ಸ್ಥಿತಿಯನ್ನು ತಿಳಿದುಕೊಳ್ಳಿ (Know Your Status) ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾ ಕೋಡ್ ಅನ್ನು ಭರ್ತಿ ಮಾಡಿ ಮತ್ತು ಡೇಟಾ ಪಡೆಯಿರಿ ಆಯ್ಕೆಯನ್ನು ಆರಿಸಿ ನಿಮ್ಮ ಫಲಾನುಭವಿ ಸ್ಥಿತಿ ಸ್ಕ್ರೀನ್ ಮೇಲೆ ಮೂಡಿ ಬರುತ್ತದೆ.
ದೇಶದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.