Narendra Modi: ಪ್ರತೀಕಾರ ತೀರಿಸಿಕೊಳ್ಳಲು ರೆಡಿ ಆಯ್ತಾ ಭಾರತ? ವಾಯುಸೇನೆ ಮುಖ್ಯಸ್ಥರ ಜೊತೆ ಮೋದಿ ಮಾತುಕತೆ
ಏಪ್ರಿಲ್ 22 ರಂದು 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ.


ನವದೆಹಲಿ: ಏಪ್ರಿಲ್ 22 ರಂದು 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ (Pahalgam Terror Attack) ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ. ಭಾನುವಾರ , ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಎಪಿ ಸಿಂಗ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಪ್ರಧಾನ ಮಂತ್ರಿ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರ ಜೊತೆ ಸಭೆ ನಡೆಸಿ 24 ಗಂಟೆಗಳು ಕಳೆಯುವ ಮೊದಲು ವಾಯುಪಡೆ ಮುಖ್ಯಸ್ಥರ ಜೊತೆ ಈ ಸಭೆ ನಡೆದಿದೆ. ಕಳೆದ ವಾರ ಪ್ರಧಾನಿಯವರು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಭೇಟಿ ಮಾಡಿದ್ದರು.
ಸಭೆಯ ಅಧಿಕೃತ ವರದಿ ಇನ್ನೂ ಹೊರಬಿದ್ದಿಲ್ಲವಾದರೂ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ಕೃತ್ಯಗಳ ಕುರಿತು ನಡೆದ ಸಭೆಯಾಗಿದೆ ಎಂದು ತಿಳಿದು ಬಂದಿದೆ. ಈ ವಾರದ ಆರಂಭದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ಮೋದಿ, ಮೂರು ಸೇನಾಪಡೆಗಳಿಗೆ ಸಂಪೂರ್ಣ ಅಧಿಕಾರವನ್ನು ನೀಡಿದ್ದರು. ಸಮಯ, ಸ್ಥಳ ನೋಡಿ ಕ್ರಮ ಕೈಗೊಳ್ಳಿ ಎಂದು ಹೇಳಿದ್ದರು. ಹಿಂದಿನ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮತ್ತು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರು ಉಪಸ್ಥಿತರಿದ್ದರು.
ಪಹಲ್ಗಾಮ್ ಹತ್ಯಾಕಾಂಡದ ಎರಡು ದಿನಗಳ ನಂತರ ಮೋದಿ ಉಗ್ರರನ್ನು ಬೇಟೆಯಾಡುವುದಾಗಿ ಅವರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬ ಸದಸ್ಯರೊಂದಿಗೆ ನಾವಿದ್ದೇವೆ ಎಂದು ಹೇಳಿದ್ದರು. ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಾಕಿಸ್ತಾನದ ಹೆಸರನ್ನು ಹೇಳದೆ, "ಭಾರತ ಸರ್ಕಾರವು ಅಗತ್ಯ ಮತ್ತು ಸೂಕ್ತವಾದ ಪ್ರತಿಯೊಂದು ಹೆಜ್ಜೆಯನ್ನು ತೆಗೆದುಕೊಳ್ಳುತ್ತದೆ. ಈ ಘಟನೆಯನ್ನು ನಡೆಸಿದವರನ್ನು ನಾವು ಸುಮ್ಮನೇ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Omar Abdullah: ಪಹಲ್ಗಾಮ್ ದಾಳಿ ಬಳಿಕ ಮೊದಲ ಬಾರಿಗೆ ಮೋದಿ ಭೇಟಿ ಮಾಡಿದ ಒಮರ್ ಅಬ್ದುಲ್ಲಾ
ಏಪ್ರಿಲ್ 22 ರಂದು 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ. ಭಾನುವಾರ , ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಎಪಿ ಸಿಂಗ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಪ್ರಧಾನ ಮಂತ್ರಿ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರ ಜೊತೆ ಸಭೆ ನಡೆಸಿ 24 ಗಂಟೆಗಳು ಕಳೆಯುವ ಮೊದಲು ವಾಯುಪಡೆ ಮುಖ್ಯಸ್ಥರ ಜೊತೆ ಈ ಸಭೆ ನಡೆದಿದೆ. ಕಳೆದ ವಾರ ಪ್ರಧಾನಿಯವರು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಭೇಟಿ ಮಾಡಿದ್ದರು.