ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಫ್ಲೈದುಬೈ ವಿಮಾನದಲ್ಲಿ ಇರಿತಕ್ಕೊಳಗಾದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ನೊಂದಿಗೆ ಪ್ರಧಾನಿ ಮೋದಿ ಮಾತುಕತೆ

PM Modi speaks to pilot: ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ರಕ್ತದ ಮಡುವಿನಲ್ಲೂ ಅವರು ತೋರಿದ ಧೈರ್ಯವನ್ನು ಮೋದಿ ಶ್ಲಾಘಿಸಿದರು. ಸಂಭಾಷಣೆಯ ವೇಳೆ ಮಚ್ಚಾರ್ ಅವರು ಘಟನೆಯ ಸಂದರ್ಭದಲ್ಲಿ ತಮಗಾದ ಅನುಭವ ಹಾಗೂ ಅಪಾಯದ ನಡುವೆಯೂ ಧೈರ್ಯವಾಗಿ ಪ್ರತಿಕ್ರಿಯಿಸಲು ತಮಗೆ ಸ್ಫೂರ್ತಿ ನೀಡಿದ ವಿಚಾರಗಳ ಬಗ್ಗೆ ಪ್ರಧಾನಿಗೆ ವಿವರಿಸಿದರು.

ಸ್ಮಿತ್ ಮಚ್ಚಾರ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಸಾಂದರ್ಭಿಕ ಚಿತ್ರ -

Priyanka P
Priyanka P Oct 2, 2026 11:48 AM

ನವದೆಹಲಿ, ಅ.2: ದುಬೈನಿಂದ ಟೆಲ್ ಅವೀವ್‌ಗೆ ಹಾರುತ್ತಿದ್ದ ಫ್ಲೈದುಬೈ ವಿಮಾನದ ಸಹ ಪೈಲಟ್‌ನಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್ (Smith Machchhar) ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಾತನಾಡಿದರು. ರಕ್ತದ ಮಡುವಿನಲ್ಲೂ ಅವರು ತೋರಿದ ಧೈರ್ಯವನ್ನು ಮೋದಿ ಶ್ಲಾಘಿಸಿದರು.

ಸಂಭಾಷಣೆಯ ವೇಳೆ ಮಚ್ಚಾರ್ ಅವರು ಘಟನೆಯ ಸಂದರ್ಭದಲ್ಲಿ ತಮಗಾದ ಅನುಭವ ಹಾಗೂ ಅಪಾಯದ ನಡುವೆಯೂ ಧೈರ್ಯವಾಗಿ ಪ್ರತಿಕ್ರಿಯಿಸಲು ತಮಗೆ ಸ್ಫೂರ್ತಿ ನೀಡಿದ ವಿಚಾರಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿವರಿಸಿದರು. ಈ ವೇಳೆ ಪ್ರಧಾನಿ ಮೋದಿಯು ಪೈಲಟ್‌ನ ಧೈರ್ಯವನ್ನು ಶ್ಲಾಘಿಸಿ, ಅವರ ಶೀಘ್ರ ಚೇತರಿಕೆಗೆ ಹಾರೈಸಿದರು.

ಪೋಸ್ಟ್ ಇಲ್ಲಿದೆ:



“ಹನುಮಾನ್ ಚಾಲೀಸಾ ಧೈರ್ಯ ತುಂಬಿತು”

ತಾವು ಕಷ್ಟದಲ್ಲಿದ್ದಾಗಲೆಲ್ಲಾ ಹನುಮಾನ್ ಚಾಲೀಸಾ ಪಠಿಸುವುದಾಗಿ ವಿಡಿಯೊ ಕರೆಯ ಸಮಯದಲ್ಲಿ, ಮಚ್ಚಾರ್ ಮೋದಿಗೆ ತಿಳಿಸಿದರು. ಫ್ಲೈದುಬೈ ವಿಮಾನದಲ್ಲಿ ಪ್ರಯಾಣಿಸುವಾಗ ಕಷ್ಟದ ಕ್ಷಣಗಳಲ್ಲಿ ಹನುಮಾನ್ ಚಾಲೀಸಾ ಪಠಿಸುತ್ತಿರುವುದಾಗಿ ಅವರು ಹೇಳಿದರು.

ಸ್ಮಿತ್‌ ಮಚ್ಚಾರ್‌ ಜತೆ ಮೋದಿ ಮಾತುಕತೆ:



ಪ್ರಧಾನಿಯವರ ಕರೆ ಸ್ವೀಕರಿಸಿದ್ದು ತಮಗೆ ತುಂಬಾ ಹೆಮ್ಮೆ ತಂದಿದೆ. ಮೋದಿ ಅವರೊಂದಿಗೆ ಮಾತನಾಡಲು ಅವಕಾಶ ಸಿಗುತ್ತದೆ ಎಂದು ತಾವು ಎಂದಿಗೂ ಊಹಿಸಿರಲಿಲ್ಲ ಎಂದು ಮಚ್ಚಾರ್ ಹೇಳಿದರು. ಮಚ್ಚಾರ್ ಅವರ ತಾಯಿ ಗೀತಾ ಬೆನ್ ಬಗ್ಗೆಯೂ ಮಾತನಾಡಿದ ಮೋದಿ, ಅವರು ಭಗವದ್ಗೀತೆಯ ಮೌಲ್ಯಗಳು ಮತ್ತು ಬೋಧನೆಗಳೊಂದಿಗೆ ಅವರನ್ನು ಬೆಳೆಸಿದ್ದಾರೆ ಎಂದು ಹೇಳಿದರು.

ಹೈಜಾಕ್‌ ಆತಂಕದ ನಡುವೆಯೂ ನೂರಾರು ಜನರ ಜೀವ ಉಳಿಸಿದ ಭಾರತೀಯ ಪೈಲಟ್; ಸ್ಮಿತ್ ಮಚ್ಚರ್‌ಗೆ ಕಾರ್ಯಕ್ಕೆ ಮೋದಿ ಮೆಚ್ಚುಗೆ

ಬುಧವಾರ (ಸೆ.30) ಮಚ್ಚಾರ್ ಅವರ ಮೇಲೆ ಮಾರಣಾಂತಿಕ ದಾಳಿ ನಡೆದಿದೆ. ಅವರು ಅಬುದಾಭಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದರು.

ಗುರುವಾರ (ಅ.1) ಪ್ರಧಾನಿ ನರೇಂದ್ರ ಮೋದಿ ಅವರು ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ ಅವರ ಪತ್ನಿ ಮತ್ತು ಪೋಷಕರೊಂದಿಗೆ ಮಾತನಾಡಿದ್ದರು. ಫ್ಲೈದುಬೈ ವಿಮಾನದಲ್ಲಿ ಇಸ್ರೇಲ್‌ನ ಟೆಲ್ ಅವೀವ್‌ಗೆ ಪ್ರಯಾಣಿಸುತ್ತಿದ್ದ ನೂರಾರು ಪ್ರಯಾಣಿಕರ ಜೀವಗಳನ್ನು ಉಳಿಸಲು ಸಹಾಯ ಮಾಡಿದ ಅವರ ಧೈರ್ಯವನ್ನು ಶ್ಲಾಘಿಸಿದ್ದರು.

ಮಚ್ಚಾರ್‌ ಕುಟುಂಬದೊಂದಿಗೆ ಮಾತನಾಡಿದ ಪ್ರಧಾನಿ ಪೈಲಟ್ ಧೈರ್ಯ ಮತ್ತು ಸಮಯಪ್ರಜ್ಞೆಯನ್ನು ಶ್ಲಾಘಿಸಿದರು. ಜತೆಗೆ, ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿಗೆ ಅಗತ್ಯವಿರುವ ಎಲ್ಲ ರೀತಿಯ ನೆರವನ್ನು ಭಾರತೀಯ ರಾಯಭಾರ ಕಚೇರಿಗಳು ಒದಗಿಸುತ್ತಿವೆ ಎಂದು ಒತ್ತಿ ಹೇಳಿದ್ದರು.

ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ ಸಾಹಸ ಶ್ಲಾಘಿಸಿದ ಇಸ್ರೇಲ್‌ನ ದಕ್ಷಿಣ ಭಾರತದ ಕಾನ್ಸುಲೇಟ್‌ ಜನರಲ್‌

“ಭಾರತದ ಪೈಲಟ್ ಸ್ಮಿತ್‌ ತಮ್ಮ ಸಮಯಪ್ರಜ್ಞೆ ಮತ್ತು ಧೈರ್ಯವನ್ನು ಪ್ರದರ್ಶಿಸಿದ್ದಾರೆ. ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕೂಡ, ಒಬ್ಬ ಭಾರತೀಯ 9/11 ರೀತಿಯ ದಾಳಿಯನ್ನು ತಡೆಯಲು ಸಹಾಯ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕ್ಯಾಪ್ಟನ್‌ ಸ್ಮಿತ್‌ ಬಗ್ಗೆ ನಮಗೆ ಹೆಮ್ಮೆ ಇದೆ. ನಾನು ಅವರ ತಂದೆ-ತಾಯಿ ಮತ್ತು ಪತ್ನಿಯೊಂದಿಗೆ ಮಾತನಾಡಿದ್ದೇನೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಡೀ ಜಗತ್ತು ಅವರ ಬಗ್ಗೆ ಹೆಮ್ಮೆಪಡುತ್ತಿದೆ. ಸ್ಮಿತ್‌ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇಶದ ಜನರು ಪ್ರಾರ್ಥಿಸಬೇಕು ಎಂದು ನಾನು ಮನವಿ ಮಾಡುತ್ತೇನೆ” ಎಂಬುದಾಗಿ ಪ್ರಧಾನಿ ಹೇಳಿದರು.

ಸ್ಮಿತ್‌ ಮಚ್ಚಾರ್‌ ಸೌದಿ ಅರೇಬಿಯಾದಿಂದ ಅಬುಧಾಬಿಗೆ ಏರ್‌ಲಿಫ್ಟ್‌

ಸಹ-ಪೈಲಟ್‌ನ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪೈಲಟ್ ಸ್ಮಿತ್ ಮಚ್ಚಾರ್ ಅವರನ್ನು ಸೌದಿ ಅರೇಬಿಯಾದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಟೋಬರ್ 1 ರಂದು ಅವರನ್ನು ಚಿಕಿತ್ಸೆಗಾಗಿ ಸೌದಿ ಅರೇಬಿಯಾದಿಂದ ಅಬುಧಾಬಿಗೆ ಏರ್‌ಲಿಫ್ಟ್‌ ಮಾಡಲಾಗಿದೆ. ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ ಎಂದು ಸೌದಿ ಅರೇಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ದಾಳಿಯಿಂದ ಗಂಭೀರವಾಗಿ ಗಾಯಗೊಂಡು ರಕ್ತಸಿಕ್ತರಾಗಿದ್ದರೂ ಕ್ಯಾಪ್ಟನ್ ಸ್ಮಿತ್ ಮಚ್ಚಾರ್‌ ಧೈರ್ಯ ಕಳೆದುಕೊಳ್ಳದೆ ಕಾಕ್‌ಪಿಟ್ ಬಾಗಿಲು ತೆರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಪ್ರಯಾಣಿಕರು ಮತ್ತು ಸಿಬ್ಬಂದಿ ಕಾಕ್‌ಪಿಟ್‌ಗೆ ತೆರಳಿ ಸಹ ಪೈಲಟ್‌ನನ್ನು ನಿಯಂತ್ರಿಸಲು ಸಾಧ್ಯವಾಯಿತು.