ಬಿರುಸಿನ ಪ್ರಚಾರದ ನಡುವೆಯೇ ಬಂಗಾಳದ ರಸ್ತೆ ಬದಿ ಮಂಡಕ್ಕಿ ಸವಿದ ಪ್ರಧಾನಿ ಮೋದಿ!
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ರಾಜಕೀಯ ಪಕ್ಷಗಳು ಬಂಗಾಳದಾದ್ಯಂತ ಭರ್ಜರಿ ಪ್ರಚಾರ ನಡೆಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಬಂಗಾಳದಾದ್ಯಂತ ರ್ಯಾಲಿ ನಡೆಸುತ್ತಿದ್ದಾರೆ. ಇದೀಗ ಪ್ರಧಾನಿ ರಸ್ತೆ ಬದಿ ನಿಂತು ಮಂಡಕ್ಕಿ ಸವಿಯುತ್ತಿರುವ ಫೋಟೋಗಳು ಎಲ್ಲೆಡೆ ವೈರಲ್ ಆಗಿವೆ
ಸಂಗ್ರಹ ಚಿತ್ರ -
ಕೊಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ರಾಜಕೀಯ ಪಕ್ಷಗಳು ಬಂಗಾಳದಾದ್ಯಂತ ಭರ್ಜರಿ ಪ್ರಚಾರ ನಡೆಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಬಂಗಾಳದಾದ್ಯಂತ ರ್ಯಾಲಿ ನಡೆಸುತ್ತಿದ್ದಾರೆ. ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಸ್ತೆಬದಿಯ ಅಂಗಡಿಯೊಂದರಲ್ಲಿ ಜಲ್ಮುರಿ ಸವಿದು ಸುದ್ದಿಯಾಗಿದ್ದಾರೆ.
ಜಾರ್‌ಗ್ರಾಮ್‌ನಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಭಾಗವಹಿಸಲು ಹೋಗುತ್ತಿದ್ದ ಸಂದರ್ಭದಲ್ಲಿ, ಪ್ರಧಾನಿ ಮೋದಿಯವರು ತಮ್ಮ ವಾಹನವನ್ನು ನಿಲ್ಲಿಸಲು ಹೇಳಿದ್ದಾರೆ. ತಮ್ಮ ವಾಹನದಿಂದ ಕೆಳಗಿಳಿದ ಮೋದಿ ಅವರು ಅನಿರಿಕ್ಷಿತವಾಗಿ ರಸ್ತೆ ಬದಿಯಿದ್ದ ಅಂಗಡಿಗೆ ಭೇಟಿ ನೀಡಿದ್ದಾರೆ. ಅಂಗಡಿಯವರ ಬಳಿ ಖಾರವಾಗಿರುವ ಜಲ್ಮುರಿ (ಮಂಡಕ್ಕಿ) ತಯಾರಿಸಲು ಹೇಳಿದ್ದಾರೆ. ಇದಕ್ಕೆ ವ್ಯಾಪಾರಿ 10 ರೂ. ಆಗುತ್ತದೆ ಎಂದು ತಿಳಿಸಿದ್ದಾರೆ. ಮೋದಿ ಅವರು ಹಣ ನೀಡಲು ಮುಂದಾದಾಗ ವ್ಯಾಪಾರಿ ಹಣವನ್ನು ಪಡೆಯಲು ನಿರಾಕರಿಸಿದ್ದಾರೆ. ಆದರೆ ಮೋದಿಯವರು ಹಣವನ್ನು ತೆಗೆದಕೊಳ್ಳಬೇಕು ಎಂದು ಒತ್ತಾಯಿಸಿ 10 ರೂ. ನೀಡಿದ್ದಾರೆ. ಜಲ್ಮುರಿ ತಿನ್ನುತ್ತಲೇ ಮೋದಿ ಅಲ್ಲಿ ನೆರೆದಿದ್ದವರೊಂದಿಗೆ ಮಾತನಾಡಿದರು. ಪ್ರಧಾನಿ ಮೋದಿ ಸ್ಥಳೀಯರೊಂದಿಗೆ ಸಂವಾದ ನಡೆಸುತ್ತಿದ್ದಾಗ ಅಲ್ಲಿದ್ದ ಜನ ಜೈ ಶ್ರೀ ರಾಮ್, ನರೇಂದ್ರ ಮೋದಿ ಜಿಂದಾಬಾದ್ ಮತ್ತು ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳು ಮೊಳಗುತ್ತಿದ್ದವು.
ব্যস্ত রবিবারে পশ্চিমবঙ্গ জুড়ে চারটি জনসভার ফাঁকে, ঝাড়গ্রামে সুস্বাদু ঝালমুড়ি খেলাম। pic.twitter.com/VqIrc0zrmR
— Narendra Modi (@narendramodi) April 19, 2026
ಬಂಗಾಳದಲ್ಲಿ ಮೋದಿ ಅಬ್ಬರ
ಬಂಗಾಳದಲ್ಲಿ ಭಾನುವಾರ ಪ್ರಧಾನಿ ಮೋದಿ ನಾಲ್ಕು ರ‍್ಯಾಲಿಗಳಲ್ಲಿ ಭಾಗವಹಿಸಿದ್ದಾರೆ. ಮೇದಿನಿಪುರ, ಬಿಷ್ಣುಪುರಗಳಲ್ಲಿ ವಿಜಯ ಸಂಕಲ್ಪ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ವ್ಯಾಪಕ ಭ್ರಷ್ಟಾಚಾರ ಮತ್ತು ಕಳಪೆ ಆಡಳಿತವನ್ನು ಹೊಂದಿದೆ ಎಂದು ವಾಗ್ದಾಳಿ ನಡೆಸಿದರು. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಅಡ್ಡಿಪಡಿಸಿದ ವಿಚಾರವಾಗಿ ಮಾತನಾಡಿದ ಅವರು, ಬಂಗಾಳದ ತಾಯಂದಿರಿಗೆ ಟಿಎಂಸಿ ಮೋದಿ ಕಿಡಿ ಕಾರಿದರು. ಟಿಎಂಸಿ ಸರ್ಕಾರವು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುತ್ತಿದೆ ಮತ್ತು ನುಸುಳುಕೋರರಿಗೆ ರಾಜ್ಯದ ಬಾಗಿಲು ತೆರೆದಿದೆ ಎಂದು ಅವರು ಆರೋಪಿಸಿದರು.