ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಆಗಸ್ಟ್‌ 1 ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ; 'ವಿವೇಕ ಸ್ಮಾರಕ' ಲೋಕಾರ್ಪಣೆ

PM Narendra Modi: ಆಗಸ್ಟ್‌ 1 ರಂದು ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಮೈಸೂರು ನಗರದ ರಾಮಕೃಷ್ಣ ಆಶ್ರಮದಲ್ಲಿ ನಿರ್ಮಿಸಲಾದ ವಿವೇಕ ಸ್ಮಾರಕವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮೂರು ತಿಂಗಳ ಹಿಂದೆ ಆರ್ಟ್‌ ಆಫ್‌ ಲಿವಿಂಗ್‌ ಕಾರ್ಯಕ್ರಮಕ್ಕೆ ಮೇ ಮೊದಲ ವಾರದ ಬೆಂಗಳೂರಿಗೆ ಆಗಮಿಸಿದ್ದರು.

ಆಗಸ್ಟ್‌ 1 ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jul 26, 2026 11:24 AM

ಮೈಸೂರು: ಆಗಸ್ಟ್‌ 1 ರಂದು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಮೈಸೂರು ನಗರದ ರಾಮಕೃಷ್ಣ ಆಶ್ರಮದಲ್ಲಿ ನಿರ್ಮಿಸಲಾದ ವಿವೇಕ ಸ್ಮಾರಕವನ್ನು (Vivek Smarak) ಲೋಕಾರ್ಪಣೆ ಮಾಡಲಿದ್ದಾರೆ. ಮೂರು ತಿಂಗಳ ಹಿಂದೆ ಆರ್ಟ್‌ ಆಫ್‌ ಲಿವಿಂಗ್‌ ಕಾರ್ಯಕ್ರಮಕ್ಕೆ ಮೇ ಮೊದಲ ವಾರದ ಬೆಂಗಳೂರಿಗೆ ಆಗಮಿಸಿದ್ದರು. ಆಗಸ್ಟ್ 1ರ ಮಧ್ಯಾಹ್ನ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಹೊರಡಲಿರುವ ಪ್ರಧಾನಿ ಮೋದಿ, ಮಧ್ಯಾಹ್ನ 2.55ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ತಲುಪಲಿದ್ದಾರೆ.

ಅಲ್ಲಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 3.15ಕ್ಕೆ ನಗರದ ಓವಲ್ ಮೈದಾನಕ್ಕೆ ತಲುಪಿ, ಬಳಿಕ ಮಧ್ಯಾಹ್ನ 3.25ಕ್ಕೆ ರಸ್ತೆ ಮಾರ್ಗವಾಗಿ ನೇರವಾಗಿ ವಿವೇಕ ಸ್ಮಾರಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ನಂತರ ಮಧ್ಯಾಹ್ನ 3.30 ರಿಂದ ಸಂಜೆ 5.15 ರವರೆಗೆ ರಾಮಕೃಷ್ಣ ಆಶ್ರಮದಲ್ಲಿ ಆಯೋಜಿಸಲಾಗಿರುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿಯವರು ಭಾಗವಹಿಸಲಿದ್ದಾರೆ. ಇದೇ ಶುಭ ಸಂದರ್ಭದಲ್ಲಿ ಅವರು 'ವಿವೇಕ ಸ್ಮಾರಕ'ವನ್ನು ಅಧಿಕೃತವಾಗಿ ಉದ್ಘಾಟಿಸಿ ನಾಡಿಗೆ ಸಮರ್ಪಿಸಲಿದ್ದಾರೆ. ಕಾರ್ಯಕ್ರಮದ ಮುಕ್ತಾಯದ ನಂತರ, ಸಂಜೆ 5.20ಕ್ಕೆ ರಾಮಕೃಷ್ಣ ಆಶ್ರಮದ ಶಾಲೆಗೆ ಹ್ರಸ್ವ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಸಂಜೆ 5.30ಕ್ಕೆ ಮತ್ತೆ ಓವಲ್ ಮೈದಾನಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮೂಲಕ ಮೈಸೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಂತಿಮವಾಗಿ ಸಂಜೆ 5.55ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ನವದೆಹಲಿಗೆ ವಾಪಸ್ ಆಗಲಿದ್ದಾರೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಶನಿವಾರ ಪ್ರಧಾನಿಯವರ ಸಂಚಾರ ಮಾರ್ಗ ಹಾಗೂ ಕಾರ್ಯಕ್ರಮ ಸ್ಥಳಗಳ ಪರಿಶೀಲನೆ ನಡೆಸಿತು. ನಾರಾಯಣ ಶಾಸ್ತ್ರೀ ರಸ್ತೆಯ ಮಹಾರಾಣಿ ಪಿಯು ಕಾಲೇಜು ಎದುರಿನ ನಿರಂಜನ ಮಠದಲ್ಲಿ 1892 ರಲ್ಲಿ ಸ್ವಾಮಿ ವಿವೇಕಾನಂದರು ಕೆಲವು ದಿನಗಳ ಕಾಲ ತಂಗಿದ್ದ ಸ್ಮರಣಾರ್ಥವಾಗಿ ರಾಮಕೃಷ್ಣ ಆಶ್ರಮವು ವಿವೇಕ ಸ್ಮಾರಕವನ್ನು ನಿರ್ಮಿಸಿದೆ.

ಜಪಾನ್ ಪ್ರಧಾನಿಯನ್ನು ಸಹೋದರಿ ಎಂದು ಕರೆದ ಪ್ರಧಾನಿ ಮೋದಿ: ಉಭಯ ನಾಯಕರ ಆತ್ಮೀಯ ಸಂಭಾಷಣೆ

ಪ್ರಧಾನಿಯವರ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಭದ್ರತಾ ಪಡೆ (ಎಸ್‌ಪಿಜಿ) ಅಧಿಕಾರಿಗಳು ಮುಂದಿನ ವಾರ ಮೈಸೂರಿಗೆ ಆಗಮಿಸಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ. ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.