ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವೈದ್ಯರ ಮೇಲೆ ಹಲ್ಲೆ ನಡೆಸುವ ರಾಜಕಾರಣಿಗಳನ್ನು ತಕ್ಷಣ ವಶಕ್ಕೆ ಪಡೆಯಿರಿ: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ

Supreme Court: ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ ನಡೆಸುವ ರಾಜಕಾರಣಿಗಳನ್ನು ತಕ್ಷಣವೇ ವಶಕ್ಕೆ ಪಡೆದು ಜೈಲಿಗೆ ಅಟ್ಟಬೇಕು ಎಂದು ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಕಟ್ಟುನಿಟ್ಟಿನ ಆದೇಶ ನೀಡಿದೆ. ವೈದ್ಯಕೀಯ ಸಿಬ್ಬಂದಿಯ ಮೇಲಿನ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದಿರುವ ನ್ಯಾಯಪೀಠ, ಇಂತಹ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ವೈದ್ಯರ ಮೇಲೆ ಹಲ್ಲೆ ಮಾಡುವ ರಾಜಕಾರಣಿಗಳನ್ನು ವಶಕ್ಕೆ ಪಡೆಯಿರಿ: ಸುಪ್ರೀಂ

ಸಾಂದರ್ಭಿಕ ಚಿತ್ರ ಮತ್ತು ಚಾಟ್‌ಜಿಪಿಟಿ ರಚಿತ ಚಿತ್ರ -

Ramesh Ballamoole
Ramesh Ballamoole Sep 7, 2026 10:03 PM

ನವದೆಹಲಿ, ಸೆ. 7: ಆಸ್ಪತ್ರೆಗಳು ಜೀವ ಉಳಿಸುವ ತಾಣಗಳು ಹೊರತು, ಹಿಂಸಾಚಾರದ ಯುದ್ಧಭೂಮಿಗಳಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ಜನರ ಆರೋಗ್ಯ ರಕ್ಷಣೆ ಹಾಗೂ ಸೇವೆಗಾಗಿ ಕಾರ್ಯನಿರ್ವಹಿಸುವ ವೈದ್ಯರ ಮೇಲೆ ಜನಪ್ರತಿನಿಧಿಗಳು, ಪುಡಾರಿಗಳು ಹಲ್ಲೆ ನಡೆಸುವುದನ್ನು ತಡಯಲು ಸುಪ್ರೀಂ ಕೋರ್ಟ್‌ (Supreme Court) ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇಂತಹ ಕೃತ್ಯಗಳಲ್ಲಿ ಭಾಗಿಯಾದವರನ್ನು ತಕ್ಷಣವೇ ವಶಕ್ಕೆ ಪಡೆಯಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಈ ಮಹತ್ವದ ಆದೇಶವನ್ನು ನೀಡಿದೆ.

ಇತ್ತೀಚಿಗಷ್ಟೇ ಮಹಾರಾಷ್ಟ್ರದ ಪಾಲಗಡ್‌ ಜಿಲ್ಲೆಯ ದಹಿ ದಂಡಿ ಉತ್ಸವದ ವೇಳೆ ಗಾಯಗೊಂಡಿದ್ದ ವ್ಯಕ್ತಿಯೊಬ್ಬರ ಡಿಸ್‌ಚಾರ್ಜ್‌ ವಿಚಾರಕ್ಕೆ ಸಂಬಂಧಿಸಿದಂತೆ ಶೀವಸೇನೆ ಪಕ್ಷದ ಪುಡಾರಿಗಳು ವೈದ್ಯರ ಹಾಗೂ ಸಿಬ್ಬಂ ಮೇಲೆ ಹಲ್ಲೆ ನಡೆಸಿದ್ದರು. ತುರ್ತು ವಿಭಾಗಕ್ಕೆ ನುಗ್ಗಿ ವೈದ್ಯರೊಂದಿಗೆ ಗಲಾಟೆ ನಡೆಸಿದ್ದ, ಸುದ್ದಿ ಬಹಳ ವೈರಲ್‌ ಆಗಿತ್ತು. ಈ ಘಟನೆಯು ವೈದ್ಯಕೀಯ ವಲಯದಲ್ಲಿ ಭದ್ರತೆಯ ಕೊರತೆಯನ್ನು ಎತ್ತಿ ತೋರಿಸಿತ್ತು. ಈ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ವೈದ್ಯರ ಸುರಕ್ಷತೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ‌ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಇಂತಹ ಘಟನೆಗಳು ಮರುಕಳಿಸಬಾರದೆಂಬ ಉದ್ದೇಶದಿಂದ ಈ ಮಹತ್ವದ ತೀರ್ಪು ನೀಡಿದೆ.

ಕೊಲೆ ಆರೋಪ ಹೊತ್ತ 105 ವರ್ಷದ ವೃದ್ಧನನ್ನು ಶಾಶ್ವತವಾಗಿ ಬಿಡುಗಡೆಗೊಳಿಸಿದ ಸುಪ್ರೀಂ ಕೋರ್ಟ್‌

ಆಸ್ಪತ್ರೆಯ ನೌಕರರು ನೀಡಿದ ದೂರಿನ ಆಧಾರದ ಮೇಲೆ ಪಾಲ್ಘರ್ ಪೊಲೀಸರು ಶಿವಸೇನೆಯ ಜಿಲ್ಲಾಧ್ಯಕ್ಷ ಕುಂದನ್ ಸಂಖೆ, ನಗರ ಅಧ್ಯಕ್ಷ ರಾಹುಲ್ ಘರಾಟ್ ಸೇರಿ ಕನಿಷ್ಠ 17 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಜಕೀಯ ವ್ಯಕ್ತಿಗಳು ವೈದ್ಯಕೀಯ ಸಿಬ್ಬಂದಿಯ ಮೇಲೆ ನಡೆಸುತ್ತಿರುವ ಸಾಲು ಸಾಲು ದಾಳಿಗಳು ಸಾರ್ವಜನಿಕವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಶಿವಸೇನೆಯ ಕಾರ್ಪೊರೇಟರ್ ರಮೇಶ್ ಮ್ಹಾತ್ರೆಗೆ ಜಾಮೀನು ಮಂಜೂರಾಗಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠವು ಆಕ್ರೋಶ ವ್ಯಕ್ತಪಡಿಸಿತು. ವೈದ್ಯಕೀಯ ಕ್ಷೇತ್ರದವರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಗಂಭೀರ ಹಾಗೂ ಸ್ಪಷ್ಟ ಸಂದೇಶ ರವಾನೆಯಾಗಬೇಕಿದೆ ಎಂದು ನ್ಯಾಯಪೀಠ ಹೇಳಿದೆ.

ಭಾರತವನ್ನು ಕೆಟ್ಟದಾಗಿ ಚಿತ್ರಿಸಲಾಗಿದೆ; ಬೀದಿ ನಾಯಿಗಳ ಪ್ರಕರಣದ ಬಗ್ಗೆ ತರಾಟೆ ತೆಗೆದುಕೊಂಡ ಸುಪ್ರೀಂ

ಕಾನೂನಿನ ಮುಂದೆ ಎಲ್ಲರೂ ಸಮಾನರು

ಜನಪ್ರತಿನಿಧಿಗಳು ಅಥವಾ ರಾಜಕಾರಣಿಗಳಾಗಿದ್ದರು ಯಾರು ಕೂಡ ಕಾನೂನಿ ಮುಂದೆ ದೊಡ್ಡವರಲ್ಲ. ಸಾರ್ವಜನಿಕ ಕೇಂದ್ರವಾದ ಆಸ್ಪತ್ರೆಗಳಿಗೆ ನುಗ್ಗಿ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಅಥವಾ ಕರ್ತವ್ಯಕ್ಕೆ ಅಡ್ಡಿ ಪಡಿಸುವ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಇಂತಹ ಪ್ರಕರಣಗಳಲ್ಲಿ ಎಫ್‌ಐಆರ್‌ ದಾಖಲಾದ ಅರೋಪಿಗಳನ್ನು ತಕ್ಷಣವೇ ವಶಕ್ಕೆ ಪಡೆದು ಕಾನೂನು ಪ್ರಕ್ರಿಯೆಗೆ ಒಳಪಡಿಸಬೇಕು. ಯಾವುದೇ ರೀತಿ ರಾಜಕೀಯ ಒತ್ತಡ ಹಾಗೂ ಪ್ರಭಾವಗಳಿಗೆ ಮಣಿಯದೇ ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೋರ್ಟ್‌ ಆದೇಶದಲ್ಲಿ ತಿಳಿಸಿದೆ.

ದೇಶದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.