ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್: ಸೀಶೆಲ್ಸ್‌ನ ಅತ್ಯುನ್ನತ ಗೌರವ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೀಶೆಲ್ಸ್‌ನ ಅತ್ಯುನ್ನತ ಪ್ರಶಸ್ತಿ 'ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್' ನೀಡಿ ಗೌರವಿಸಲಾಯಿತು. ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ನಾಯಕತ್ವಕ್ಕಾಗಿ ಅವರಿಗೆ ಈ ಪ್ರಶಸ್ತಿ ಲಭಿಸಿದೆ. ಪ್ರಧಾನಿ ಮೋದಿ ಅವರು ಈ ಪ್ರಶಸ್ತಿಯು ಭಾರತದ ಜನರಿಗೆ ಸಲ್ಲಿಸಿದ ಗೌರವವಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ  ಸೀಶೆಲ್ಸ್‌ನ ಅತ್ಯುನ್ನತ ಗೌರವ

ಸಂಗ್ರಹ ಚಿತ್ರ -

ನವದೆಹಲಿ: ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರಿಗೆ ಸೀಶೆಲ್ಸ್‌ನ (Seychelles) ಅತ್ಯುನ್ನತ ಪ್ರಶಸ್ತಿ 'ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್' (Guardian of the Blue Horizon) ಅನ್ನು ನೀಡಿ ಗೌರವಿಸಲಾಯಿತು. ನೈಸರ್ಗಿಕ ಸಂಪನ್ಮೂಲಗಳು ಮತ್ತು ಆರ್ಥಿಕ ಪ್ರಗತಿಯ ನಡುವೆ ಸಮತೋಲನ, ಪರಿಸರ ಸಂರಕ್ಷಣೆ ಮತ್ತು ನೀಲಿ ಆರ್ಥಿಕತೆಗೆ ಪ್ರಧಾನಿ ಮೋದಿ ಅವರ ದೀರ್ಘಕಾಲದ ಬದ್ಧತೆಯನ್ನು ಈ ಮೂಲಕ ಗುರುತಿಸಲಾಗಿದೆ. ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ ಅವರು ಈ ಪ್ರಶಸ್ತಿಯು ಭಾರತದ ಜನರಿಗೆ ಸಲ್ಲಿಸಿದ ಗೌರವವಾಗಿದೆ ಎಂದು ತಿಳಿಸಿದ್ದಾರೆ.

ಭಾರತ ಮತ್ತು ಸೀಶೆಲ್ಸ್ ನಡುವಿನ ಆಳವಾದ ಪಾಲುದಾರಿಕೆಯನ್ನು ಎತ್ತಿ ತೋರಿಸುವ ಈ ಪ್ರಶಸ್ತಿಯು ಸಣ್ಣ ದ್ವೀಪದಲ್ಲಿ ಅಭಿವೃದ್ಧಿ, ಹವಾಮಾನ ವೈಪರೀತ್ಯದ ಪರಿಣಾಮವನ್ನು ಎದುರಿಸಲು ಅಂತಾರಾಷ್ಟ್ರೀಯ ಸಹಕಾರ ಮತ್ತು ಸಾಗರ ಸಂಪನ್ಮೂಲಗಳ ಜವಾಬ್ದಾರಿಯುತ ನಿರ್ವಹಣೆಗೆ ಪ್ರಧಾನಿ ಮೋದಿ ಮತ್ತು ಸೀಶೆಲ್ಸ್ ನಡುವಿನ ಸಹಕಾರ, ಪಾಲುದಾರಿಕೆಯನ್ನು ಇದು ಗುರುತಿಸುತ್ತದೆ.

Sharmistha Mukherjee: ʼʼಆಗಾಗ ಬಂದು ಹೋಗುವುದು ರಾಜಕೀಯವಲ್ಲ, ಇದು 24 ಗಂಟೆಯ ಕೆಲಸʼʼ; ರಾಹುಲ್‌ ಗಾಂಧಿ ವಿರುದ್ಧ ಪ್ರಣಬ್ ಮುಖರ್ಜಿ ಪುತ್ರಿ ಟೀಕೆ

ಪ್ರಶಸ್ತಿ ಸ್ವೀಕರಿಸಿದ ಬಳಿಕ ಈ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಎಕ್ಸ್ ನಲ್ಲಿ ಬರೆದಿರುವ ಪ್ರಧಾನಿ ನರೇಂದ್ರ ಮೋದಿ ಅವರು, 'ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್' ಪ್ರಶಸ್ತಿ ಸ್ವೀಕರಿಸಲು ಸಂತೋಷವಾಗಿದೆ. ಹವಾಮಾನ ಬದಲಾವಣೆಯ ಸವಾಲುಗಳ ವಿರುದ್ಧ ಹೋರಾಡುತ್ತಿರುವ ಮತ್ತು ಪರಿಸರದ ರಕ್ಷಣೆಯನ್ನು ಭವಿಷ್ಯದ ಪೀಳಿಗೆಗೆ ತಮ್ಮ ಜವಾಬ್ದಾರಿ ಎಂದು ಪರಿಗಣಿಸುವ ಎಲ್ಲಾ ದೇಶಗಳಿಗೆ ನಾನು ಈ ಪ್ರಶಸ್ತಿಯನ್ನು ಅರ್ಪಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

shesel1

ಹವಾಮಾನ ಕ್ರಮ, ಸುಸ್ಥಿರ ಅಭಿವೃದ್ಧಿ ಮತ್ತು ಹಸಿರು ಬೆಳವಣಿಗೆಗೆ ಪ್ರಧಾನಿ ಮೋದಿಯವರ ಕೊಡುಗೆಗಾಗಿ ಜಾಗತಿಕ ಮನ್ನಣೆಗಳ ಸರಣಿಯಲ್ಲಿ ಅವರಿಗೆ ಕಳೆದ ಮೇ ತಿಂಗಳಲ್ಲಿ ಅಗ್ರಿಕೋಲಾ ಪದಕ ನೀಡಿ ಗೌರವಿಸಲಾಗಿತ್ತು. ಈ ಸಂದರ್ಭದಲ್ಲಿ ಆಹಾರ ಮತ್ತು ಕೃಷಿ ಸಂಸ್ಥೆಯು ಆಹಾರ ಭದ್ರತೆಯನ್ನು ಬಲಪಡಿಸುವುದು, ಕೃಷಿಯನ್ನು ಪರಿವರ್ತಿಸುವುದು ಮತ್ತು ಸುಸ್ಥಿರ ಕೃಷಿಯನ್ನು ಉತ್ತೇಜಿಸುವುದಕ್ಕಾಗಿ ಅವರಿಗೆ ಈ ಗೌರವವನ್ನು ಸಲ್ಲಿಸಿತ್ತು.

ಮನ್ ಕಿ ಬಾತ್: ರಾಷ್ಟ್ರೀಯ ಭದ್ರತೆ, ಸ್ವಾವಲಂಬನೆ ಕ್ಷೇತ್ರಗಳಲ್ಲಿ ಭಾರತದ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ

ಇದಕ್ಕೂ ಮೊದಲು 2018 ರಲ್ಲಿ ಸುಸ್ಥಿರ ಆರ್ಥಿಕ ಬೆಳವಣಿಗೆ, ಜಾಗತಿಕ ಸಹಕಾರ ಮತ್ತು ಸಮಗ್ರ ಅಭಿವೃದ್ಧಿಯ ನಾಯಕತ್ವ ವಹಿಸಿದ್ದಕ್ಕಾಗಿ ಸಿಯೋಲ್ ಶಾಂತಿ ಪ್ರಶಸ್ತಿಯನ್ನು ಅವರು ಸ್ವೀಕರಿಸಿದ್ದರು. ಇದರೊಂದಿಗೆ ವಿಶ್ವಸಂಸ್ಥೆಯು ಅವರಿಗೆ ಸಂಸ್ಥೆಯ ಅತ್ಯುನ್ನತ ಪರಿಸರ ಗೌರವವಾದ ಚಾಂಪಿಯನ್ಸ್ ಆಫ್ ದಿ ಅರ್ಥ್ ಪ್ರಶಸ್ತಿಯನ್ನು ಪ್ರದಾನ ಮಾಡಿತ್ತು.