ದೇಶದ ಯುವಜನತೆಗೆ ಪ್ರಧಾನಿ ಸಂದೇಶ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಮೋದಿ ಹೇಳಿದ್ದೇನು?
Prime Minister's message: ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಸಂಸತ್ತಿನಲ್ಲಿ ನಡೆದ ಗದ್ದಲದ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಇಂದು (ಗುರುವಾರ, ಜು.23) ಬೆಳಗ್ಗೆ ದೇಶದ ಯುವಜನರಿಗೆ ಒಂದು ದೊಡ್ಡ ಸಂದೇಶವನ್ನು ರವಾನಿಸಿದ್ದಾರೆ. ನಮ್ಮ ಯುವಕರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಬೇರೇನೂ ಮುಖ್ಯವಲ್ಲ ಎಂದು ಪ್ರಧಾನಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) -
ನವದೆಹಲಿ, ಜು.23: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಸಂಸತ್ತಿನಲ್ಲಿ ನಡೆದ ಗದ್ದಲದ ಮಧ್ಯೆ, ನೀಟ್ ವಿವಾದ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗೆ ಸರ್ಕಾರ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಅವರು ಹೇಳಿದರು.
“ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ ವಿಧಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ” ಎಂದು ಅವರು ಹೇಳಿದರು. ಪ್ರಧಾನಮಂತ್ರಿಯವರು, ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರನ್ನು ಕಾನೂನಿನ ಮುಂದೆ ತಂದು ಶಿಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಹಲವು ಕ್ರಮಗಳ ಸರಣಿಯ ಭಾಗ ಇದಾಗಿದೆ ಎಂದು ತಿಳಿಸಿದ್ದಾರೆ.
ಇಲ್ಲಿದೆ ಪ್ರಧಾನಿ ಪೋಸ್ಟ್:
Nothing is more important than the welfare and future of our youth!
— Narendra Modi (@narendramodi) July 23, 2026
We have decided to set up fast-track courts to ensure swift and stringent punishment for those involved in paper leaks. Have directed the concerned authorities and officials to take all necessary steps in this…
“ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ನಮ್ಮ ಯುವಕರ ಭವಿಷ್ಯಕ್ಕೆ ಹಾನಿ ಮಾಡಲು ಪ್ರಯತ್ನಿಸುವವರನ್ನು ಬಿಡುವುದಿಲ್ಲ” ಎಂದು ಪ್ರಧಾನಿ ಭರವಸೆ ನೀಡಿದರು. ಸಾಮಾಜಿಕ ಮಾಧ್ಯಮ ವೇದಿಕೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿರೋಧ ಪಕ್ಷಗಳ ಪ್ರತಿಭಟನೆಗಳು ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡುವಂತೆ ಬೇಡಿಕೆಗಳ ಮಧ್ಯೆ ಪ್ರಧಾನಿ ಮೋದಿಯವರ ಈ ಘೋಷಣೆ ಹೊರಬಿದ್ದಿದೆ.
ಕೊನೆಗೂ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ಮುಂದಾದ ಸೋನಮ್ ವಾಂಗ್ಚುಕ್; ಕೇಂದ್ರ ಸರ್ಕಾರ ಕಂಡಿಷನ್ಸ್ ಒಪ್ಲೇ ಬೇಕು
ಇನ್ನು ಪ್ರಧಾನಿಯ ಈ ಹೇಳಿಕೆ ಹೊರಬಂದ ಕೆಲವೇ ನಿಮಿಷಗಳಲ್ಲಿ, ಮೋದಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿಯುಂಟು ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದರು. “ನಮ್ಮ ಯುವಜನರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವವರು ನೀವೇ. ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ವಶಪಡಿಸಿಕೊಂಡು ನಾಶಪಡಿಸಲು ನೀವು ಅವಕಾಶ ನೀಡಿದ್ದೀರಿ ಮತ್ತು ಅದನ್ನು ಉತ್ತೇಜಿಸಿದ್ದೀರಿ. ಇದಕ್ಕೆ ಹೊಣೆಗಾರರಾದ ಪ್ರತಿಯೊಬ್ಬರನ್ನೂ ನೀವು ರಕ್ಷಿಸಿದ್ದೀರಿ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ರಾಹುಲ್ ಗಾಂಧಿ ಕೂಡ ವಿದ್ಯಾರ್ಥಿಗಳ ಬೇಡಿಕೆಗಳನ್ನು ಪುನರುಚ್ಚರಿಸಿದರು.
ಇಲ್ಲಿದೆ ರಾಹುಲ್ ಗಾಂಧಿ, ಸಿಜೆಪಿ ಪೋಸ್ಟ್:
You are the one who has harmed the future of our youth the most.
— Rahul Gandhi (@RahulGandhi) July 23, 2026
You allowed and encouraged the total capture and destruction of our education system - and protected every person responsible for it.
The students’ demands are clear:
1. Sack Dharmendra Pradhan.
2. Apologise to… https://t.co/0MK4wPMNiK
Dharmendra Pradhan Must Resign
— Cockroach is Back (@Cockroachisback) July 23, 2026
धर्मेंद्र प्रधान को इस्तीफ़ा देना होगा https://t.co/0XShqJ6FVG
“ವಿದ್ಯಾರ್ಥಿಗಳ ಬೇಡಿಕೆಗಳು ಸ್ಪಷ್ಟವಾಗಿವೆ:
1. ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸಿ.
2. ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿ.
3. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಕಳೆದ 10 ವರ್ಷಗಳಲ್ಲಿ 150ಕ್ಕೂ ಹೆಚ್ಚು ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದರು. ಆದರೆ ಈ ಪ್ರಕರಣಗಳಲ್ಲಿ ಒಂದೇ ಒಂದು ಶಿಕ್ಷೆಯಾಗಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತ್ವರಿತ ಶಿಕ್ಷೆ ವಿಧಿಸುವುದನ್ನು ಖಚಿತಪಡಿಸಿಕೊಳ್ಳಲು ಪ್ರಧಾನಿಯವರು ಈಗ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಪ್ರಧಾನ ಮಂತ್ರಿಯವರ ಘೋಷಣೆಗೆ ಪ್ರತಿಕ್ರಿಯಿಸಿದ ಸಿಜೆಪಿ, ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ತನ್ನ ಬೇಡಿಕೆಯನ್ನು ಪುನರುಚ್ಚರಿಸಿತು.