ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Narendra Modi: ಭಯೋತ್ಪಾದಕರಿಗೆ ಸರಿಯಾದ ಶಿಕ್ಷೆಯನ್ನು ನೀಡಿ; ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ರಷ್ಯಾ ಅಧ್ಯಕ್ಷ ಪುಟಿನ್

ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿರುವಾಗ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರೊಡನೆ ಫೋನ್‌ ಕರೆ ಮೂಲಕ ಮಾತನಾಡಿದ್ದಾರೆ. ಪುಟಿನ್‌ (Vladimir Putin) ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ರಷ್ಯಾ ಅಧ್ಯಕ್ಷ ಪುಟಿನ್

Profile Vishakha Bhat May 5, 2025 5:20 PM

ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿರುವಾಗ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೊಡನೆ ಫೋನ್‌ ಕರೆ ಮೂಲಕ ಮಾತನಾಡಿದ್ದಾರೆ. ಪುಟಿನ್‌ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಹೇಯ ಕೃತ್ಯಗಳನ್ನು ಮಾಡಿದವರ ವಿರುದ್ಧ ಕಠಿಣ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ದಾಳಿಯಲ್ಲಿ ನಾವು ಪಾಲ್ಗೊಂಡಿಲ್ಲ. ಈ ಕುರಿತು ಚೀನಾ ಹಾಗೂ ರಷ್ಯಾ ತನಿಖೆ ನಡೆಸಬೇಕು ಎಂದು ಪಾಕಿಸ್ತಾನ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ಪುಟಿನ್‌ ಅವರಿಂದ ಕರೆ ಬಂದಿದೆ.

ಭಯೋತ್ಪಾದನಾ ದಾಳಿಯಲ್ಲಿ ಮಡಿದವರಿಗೆ ರಷ್ಯಾ ಅಧ್ಯಕ್ಷ ತೀವೃ ಸಂತಾಪ ಸೂಚಿಸಿದ್ದಾರೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಘೋರ ದಾಳಿ ನಡೆಸಿದ ದುಷ್ಕರ್ಮಿಗಳು ಮತ್ತು ಅವರ ಬೆಂಬಲಿಗರನ್ನು ಕಾನೂನು ಕ್ರಮಕ್ಕೆ ತರಬೇಕು ಎಂದು ಅವರು ಒತ್ತಿ ಹೇಳಿದ್ದಾರೆ. ಪಹಲ್ಗಾಮ್ ದಾಳಿಯ ಅಪರಾಧಿಗಳು ಮತ್ತು ಅವರ ಬೆಂಬಲಿಗರನ್ನು ಶಿಕ್ಷಿಸಬೇಕು ಎಂದು ರಷ್ಯಾದ ಅಧ್ಯಕ್ಷರು ಒತ್ತಿ ಹೇಳಿದ್ದಾರೆ. ಭಾರತ-ರಷ್ಯಾ ನಡುವಿನ ವಿಶೇಷ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸಲು ಇಬ್ಬರೂ ನಾಯಕರು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.



ಈ ಸುದ್ದಿಯನ್ನೂ ಓದಿ: Pahalgam Terror Attack: ಪಹಲ್ಗಾಮ್ ಉಗ್ರ ದಾಳಿಯ ಮತ್ತೊಂದು ವಿಡಿಯೊ ವೈರಲ್-ಏನಿದೆ ಅದ್ರಲ್ಲಿ?

ರಷ್ಯಾ ಈ ಬಾರಿ 80 ನೇ ವಿಜಯೋತ್ಸವ ಆಚರಿಸಿಕೊಳ್ಳುತ್ತಿದೆ. ಈ ಕುರಿತು ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷರಿಗೆ ಶುಭಾಷಯಗಳನ್ನು ತಿಳಿಸಿದ್ದಾರೆ. ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ ವಾರ್ಷಿಕ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ಆಹ್ವಾನಿಸಿದರು. ಪುಟಿನ್ ಭಾರತಕ್ಕೆ ಆಗಮಿಸಲು ಒಪ್ಪಿದ್ದಾರೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.ಇದಕ್ಕೂ ಮೊದಲು ರಷ್ಯಾದ ಮಾಸ್ಕೋದಲ್ಲಿರುವ ಪಾಕಿಸ್ತಾನ ರಾಯಭಾರಿ ಮೊಹಮ್ಮದ್ ಖಾಲಿದ್ ಜಮಾಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯನ್ನು ಶಮನಗೊಳಿಸಲು ರಷ್ಯಾದ ಸಹಾಯವನ್ನು ಕೋರಿದ್ದರು. ಪಾಕಿಸ್ತಾನದ ಪ್ರಧಾನಿ ಕೂಡ ರಷ್ಯಾ ಹಾಗೂ ಚೀನಾ ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲಿ ಎಂದು ಅಭಿಪ್ರಾಯ ಪಟ್ಟಿದ್ದರು.