ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಟಿಎಂಸಿ ಚಿಹ್ನೆ ವಿವಾದ: ಮಮತಾ ಬ್ಯಾನರ್ಜಿಗೆ ರಾಹುಲ್ ಗಾಂಧಿ ಬೆಂಬಲ, ಕೇಂದ್ರದ ವಿರುದ್ಧ ಒಗ್ಗಟ್ಟಿನ ಹೋರಾಟದ ಶಪಥ

Rahul Gandhi Support to Mamata Banerjee: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬೆಂಬಲ ಸೂಚಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಒಟ್ಟಾಗಿ ಕೆಲಸ ಮಾಡಲು ಮಮತಾ ಬ್ಯಾನರ್ಜಿ ಜೊತೆ ಕಾಂಗ್ರೆಸ್ ಸಿದ್ಧವಾಗಿದೆ ಎಂದು ರಾಹುಲ್ ಹೇಳಿದರು.

ಟಿಎಂಸಿ ಚಿಹ್ನೆ ವಿವಾದ: ಮಮತಾ ಬ್ಯಾನರ್ಜಿಗೆ ರಾಹುಲ್ ಗಾಂಧಿ ಬೆಂಬಲ

(ಸಂಗ್ರಹ ಚಿತ್ರ) -

Priyanka P
Priyanka P Sep 18, 2026 7:32 PM

ಕೋಲ್ಕತ್ತಾ, ಸೆ.18: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಬೆಂಬಲ ಸೂಚಿಸಿದ್ದಾರೆ. ಬ್ಯಾನರ್ಜಿ ಸ್ಥಾಪಿಸಿದ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಬಳಸದಂತೆ ಭಾರತೀಯ ಚುನಾವಣಾ ಆಯೋಗ ನಿಷೇಧಿಸಿದ ನಂತರ ರಾಹುಲ್ ಗಾಂಧಿ ಅದನ್ನು ತರಾಟೆಗೆ ತೆಗೆದುಕೊಂಡರು. ಈ ಸಂಬಂಧ ಮಮತಾ ಬ್ಯಾನರ್ಜಿ ಬ್ಯಾನರ್ಜಿ ಅವರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ ಒಗ್ಗಟ್ಟನ್ನು ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಒಟ್ಟಾಗಿ ಕೆಲಸ ಮಾಡಲು ಮಮತಾ ಬ್ಯಾನರ್ಜಿ ಜೊತೆ ಕಾಂಗ್ರೆಸ್ ಸಿದ್ಧವಾಗಿದೆ ಎಂದು ರಾಹುಲ್ ಹೇಳಿದರು. ರಾಹುಲ್ ಗಾಂಧಿ ಅವರೊಂದಿಗೆ ನಡೆದ ಮಾತುಕತೆಯನ್ನು ಉಲ್ಲೇಖಿಸಿ, “ನಾವಿಬ್ಬರೂ ಒಟ್ಟಾಗಿದ್ದೇವೆ. ಬಿಜೆಪಿಯನ್ನು ಅಧಿಕಾರದಿಂದ ತೆಗೆದುಹಾಕಲು ನಾವು ಬಯಸುತ್ತೇವೆ” ಎಂದು ಬ್ಯಾನರ್ಜಿ ಹೇಳಿದ್ದಾರೆ.

ಇದರ ಜೊತೆಗೆ, ಅಕ್ಟೋಬರ್ 6ರಂದು ನಡೆಯಲಿರುವ ನಂದಿಗ್ರಾಮ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ತಮ್ಮ ಪಕ್ಷ ಬೆಂಬಲಿಸಲಿದೆ ಎಂದು ಅವರು ಘೋಷಿಸಿದರು. ಮಮತಾ ಬಣದ ಅಭ್ಯರ್ಥಿಯಾಗಿದ್ದ ಸಂಚಿತಾ ಪ್ರಧಾನ ದೇ ಅವರು ತಮ್ಮ ನಾಮಪತ್ರವನ್ನು ಹಿಂಪಡೆದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮಮತಾ ಬ್ಯಾನರ್ಜಿ ಬಣದಿಂದ ಹೊಸ ಪಕ್ಷದ ಹೆಸರು ಪ್ರಸ್ತಾಪ: ಫುಟ್‌ಬಾಲ್, ಕ್ರಿಕೆಟ್ ಬ್ಯಾಟ್ ಚಿಹ್ನೆಗಳಿಗೂ ಬೇಡಿಕೆ

ರಾಹುಲ್ ಗಾಂಧಿ ಅವರು ಮಮತಾ ಬ್ಯಾನರ್ಜಿಗೆ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ಕಾಂಗ್ರೆಸ್ ಸಿದ್ಧವಿದೆ ಎಂದು ತಿಳಿಸಿದ್ದರು ಎನ್ನಲಾಗಿದೆ. ನಂತರ, ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದರು.

ಅಂದಹಾಗೆ, ರಾಹುಲ್ ಗಾಂಧಿ ಅವರು ಶಿವಸೇನೆ, ಎನ್‌ಸಿಪಿ ಮತ್ತು ಈಗ ಟಿಎಂಸಿ ಪಕ್ಷಗಳಲ್ಲಿನ ಬೆಳವಣಿಗೆಗಳನ್ನು ಹೋಲಿಕೆ ಮಾಡಿದ್ದಾರೆ. ಅವರ ಆರೋಪದ ಪ್ರಕಾರ, ಈ ಪಕ್ಷಗಳಲ್ಲಿ ಆಂತರಿಕ ಬಣಗಳಾಗಿ ವಿಭಜನೆಯಾದಾಗ ಬಿಜೆಪಿ ಮತ್ತು ಚುನಾವಣಾ ಆಯೋಗ ಒಟ್ಟಾಗಿ ಕೆಲಸ ಮಾಡುತ್ತಿವೆ. ನಂತರ ಪಕ್ಷದ ಮೂಲ ಚುನಾವಣಾ ಚಿಹ್ನೆಯನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇಡೀ ಪಕ್ಷವನ್ನು ಕದಿಯಬಹುದಾದರೆ, ಲಕ್ಷಾಂತರ ಭಾರತೀಯರ ಮತಗಳನ್ನು ಸಹ ಕದಿಯಬಹುದು ಎಂಬುದರಲ್ಲಿ ಆಶ್ಚರ್ಯವೇನಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಜನರ ತೀರ್ಪನ್ನು ರಕ್ಷಿಸುವುದು ಚುನಾವಣಾ ಆಯೋಗದ ಸಾಂವಿಧಾನಿಕ ಜವಾಬ್ದಾರಿಯಾಗಿದೆ. ಆದರೆ ಆಯೋಗವು ಜನರ ತೀರ್ಪನ್ನು ಬದಲಿಸಲು ಪ್ರಯತ್ನಿಸುವ ಶಕ್ತಿಗಳಿಗೆ ಸಹಾಯ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಬಯಸುವ ಪ್ರತಿಯೊಂದು ರಾಜಕೀಯ ಪಕ್ಷ ಮತ್ತು ಮತದಾರರ ಹೋರಾಟ ಇದಾಗಿದೆ ಎಂದು ಅವರು ಹೇಳಿದ್ದಾರೆ.

ಈ ಬೆಳವಣಿಗೆಯಿಂದ ಮಮತಾ ಬ್ಯಾನರ್ಜಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಸಹಕಾರದ ಹೊಸ ಬೆಳವಣಿಗೆ ಕಂಡುಬಂದಿದೆ. ಕಾಂಗ್ರೆಸ್ ಮತ್ತು ತಮ್ಮ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಒಟ್ಟಾಗಿ ಕೆಲಸ ಮಾಡಲು ಸಿದ್ಧವಿದೆ ಎಂದು ಮಮತಾ ಹೇಳಿದ್ದಾರೆ. ಒಟ್ಟಿನಲ್ಲಿ ಟಿಎಂಸಿಯ ಆಂತರಿಕ ವಿವಾದದ ಸಂದರ್ಭದಲ್ಲಿ ಮಮತಾ ಬಣಕ್ಕೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ.