Rekha Gupta: ದೆಹಲಿ ಸಿಎಂ ರೇಖಾ ಗುಪ್ತಾ ಕಾರ್ಯಕ್ರಮದಲ್ಲಿ ವ್ಯಕ್ತಿಯ ಹೈಡ್ರಾಮಾ; ವಿಡಿಯೋ ವೈರಲ್
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ (Rekha Gupta) ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮತ್ತೆ ಗಲಾಟೆಗಳು ನಡೆದಿದೆ. ಮೊನ್ನೆ ರೇಖಾ ಗುಪ್ತ ಅವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದ. ಅದಾದ ಬಳಿಕ ಇಂದು ಅವರು ಮೊದಲ ಬಾರಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ (Rekha Gupta) ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮತ್ತೆ ಗಲಾಟೆಗಳು ನಡೆದಿದೆ. ಮೊನ್ನೆ ರೇಖಾ ಗುಪ್ತ ಅವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದ. ಅದಾದ ಬಳಿಕ ಇಂದು ಅವರು ಮೊದಲ ಬಾರಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ ಇಂದೂ ಕೂಡ ಭದ್ರತಾ ವೈಫಲ್ಯ ಸಂಭವಿಸಿದೆ. ವ್ಯಕ್ತಿಯೊಬ್ಬ ಸಿಎಂ ವಿರುದ್ಧ ಘೋಷಣೆಯನ್ನು ಕೂಗಿದ್ದಾನೆ. ಸ್ಥಳದಲ್ಲಿ ಕೆಲ ಕಾಲ ಗೊಂದಲದ ಪರಿಸ್ಥಿತಿ ಉಂಟಾಗಿತ್ತು. ಈ ಕಾರ್ಯಕ್ರಮ ದೆಹಲಿಯ ಗಾಂಧಿನಗರದಲ್ಲಿ ನಡೆದಿತ್ತು.
ಕಾರ್ಯಕ್ರಮದ ವೇದಿಕೆಯಲ್ಲಿ ರೇಖಾ ಗುಪ್ತ ಅವರೊಂದಿಗೆ ಗಾಂಧಿನಗರ ಶಾಸಕ ಅರವಿಂದ್ ಸಿಂಗ್ ಲವ್ಲಿ ಕೂಡ ಉಪಸ್ಥಿತರಿದ್ದರು. ಘೋಷಣೆ ಕೂಗಿದ ವ್ಯಕ್ತಿಯನ್ನು ಪೊಲೀಸರು ಕೂಡಲೇ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ವ್ಯಕ್ತಿಯನ್ನು ವಿಚಾರಣೆ ನಡೆಸಲಾಗುತ್ತಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾರ್ಯಕ್ರಮದಲ್ಲಿದ್ದ ವ್ಯಕ್ತಿಯೊಬ್ಬರು ಸ್ಥಳೀಯ ವ್ಯಾಪಾರಿಗಳೊಂದಿಗೆ ನಡೆದ ತೀವ್ರ ವಾಗ್ವಾದದ ನಂತರ ಮುಖ್ಯಮಂತ್ರಿಯ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಳ್ಳದಂತೆ ತಡೆಯಲು ಪೊಲೀಸ್ ಸಿಬ್ಬಂದಿ ಕ್ಷಿಪ್ರವಾಗಿ ಕಾರ್ಯನಿರ್ವಹಿಸಿ ವ್ಯಕ್ತಿಯನ್ನು ಸ್ಥಳದಿಂದ ಹೊರಗೆ ಕರೆದೊಯ್ದರು.
#WATCH | Delhi | Police have caught two separate individuals who were suspected of creating a ruckus near the venue of an event being attended by Delhi CM Rekha Gupta in Gandhi Nagar pic.twitter.com/Iw2BFpJHFR
— ANI (@ANI) August 22, 2025
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾಗವಹಿಸಿದ್ದ ಕಾರ್ಯಕ್ರಮ ಸ್ಥಳದ ಬಳಿ ಅವ್ಯವಸ್ಥೆ ಸೃಷ್ಟಿಸಿದ ಶಂಕೆಯ ಮೇಲೆ ಇಬ್ಬರು ಪ್ರತ್ಯೇಕ ವ್ಯಕ್ತಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಗಾಂಧಿನಗರದಲ್ಲಿ ಸಗಟು ಸಿದ್ಧ ಉಡುಪು ವ್ಯಾಪಾರಿಗಳ ಸಂಘ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಹಾಜರಾಗಿದ್ದರು.
ಈ ಸುದ್ದಿಯನ್ನೂ ಓದಿ: Delhi CM: ದೆಹಲಿ ಸಿಎಂ ಹಲ್ಲೆ ಪ್ರಕರಣ; ಒಂದು ದಿನ ಮೊದಲು ರೇಖಾ ಗುಪ್ತಾ ಮೇಲೆ ಮನೆ ಬಳಿ ವಿಡಿಯೊ ಚಿತ್ರೀಕರಿಸಿದ್ದ ಆರೋಪಿ
ಕಳೆದ ಬುಧವಾರ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ಬುಧವಾರ ಬೆಳಿಗ್ಗೆ ಅವರ ನಿವಾಸದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆ ನಡೆಯುತ್ತಿದ್ದಾಗ ಹಲ್ಲೆ ನಡೆದಿದೆ. 35 ವರ್ಷದ ವ್ಯಕ್ತಿಯೊಬ್ಬ ದಾಖಲೆಗಳೊಂದಿಗೆ ಬಂದು ಮಾತನಾಡುತ್ತಾ ಇದ್ದಕ್ಕಿದ್ದಂತೆ ಮುಖ್ಯಮಂತ್ರಿಗಳಿಗೆ ಕಪಾಳಕ್ಕೆ ಹೊಡೆದಿದ್ದ. ರೇಖಾ ಗುಪ್ತಾ ಅವರ ನಿವಾಸದ ಆವರಣದಲ್ಲಿ 'ಜನ್ ಸುನ್ವಾಯಿ' ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ದೂರು ನೀಡಲು ಬಂದ 40 ವರ್ಷದ ವ್ಯಕ್ತಿಯೊಬ್ಬರು ಸಿಎಂ ರೇಖಾ ಗುಪ್ತಾ ಅವರ ಕಪಾಳಕ್ಕೆ ಬಾರಿಸಿ, ಕೂದಲು ಎಳೆದಾಡಿದ್ದಾನೆ. ಸ್ಥಳದಲ್ಲೇ ಇದ್ದ ಮುಖ್ಯಮಂತ್ರಿಗಳ ಭದ್ರತಾ ಸಿಬ್ಬಂದಿ ತಕ್ಷಣವೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.