ಹೈಜಾಕ್ ಆತಂಕದ ನಡುವೆಯೂ ನೂರಾರು ಜನರ ಜೀವ ಉಳಿಸಿದ ಭಾರತೀಯ ಪೈಲಟ್; ಸ್ಮಿತ್ ಮಚ್ಚರ್‌ಗೆ ಕಾರ್ಯಕ್ಕೆ ಮೋದಿ ಮೆಚ್ಚುಗೆ
ದುಬೈನಿಂದ ಟೆಲ್ ಅವಿವ್‌ಗೆ 174 ಪ್ರಯಾಣಿಕರೊಂದಿಗೆ ಸಾಗುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಓಮನ್ ಮೂಲದ ಸಹ-ಪೈಲಟ್ ವಿಮಾನವನ್ನು ಅಪಘಾತಕ್ಕೀಡು ಮಾಡಲು ಯತ್ನಿಸಿದಾಗ ಸಹ-ಪೈಲಟ್ ವಿರುದ್ಧ ಹೋರಾಡಿ ವಿಮಾನವನ್ನು ರಕ್ಷಿಸಿದ ಪೈಲೆಟ್ ಅವರನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
ಸಂಗ್ರಹ ಚಿತ್ರ -
ರಿಹಾದ್: ದುಬೈನಿಂದ ಟೆಲ್ ಅವಿವ್‌ಗೆ 174 ಪ್ರಯಾಣಿಕರೊಂದಿಗೆ ಸಾಗುತ್ತಿದ್ದ ಫ್ಲೈದುಬೈ (fly dubai) ವಿಮಾನದಲ್ಲಿ (Flight FZ1073), ಓಮನ್ ಮೂಲದ ಸಹ-ಪೈಲಟ್ ವಿಮಾನವನ್ನು ಅಪಘಾತಕ್ಕೀಡು ಮಾಡಲು ಯತ್ನಿಸಿದಾಗ ಸಹ-ಪೈಲಟ್ ವಿರುದ್ಧ ಹೋರಾಡಿ ವಿಮಾನವನ್ನು ರಕ್ಷಿಸಿದ “ಹೀರೋ” ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶ್ಲಾಘಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, "ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರು ನಿಜವಾದ ಹೀರೋ. ಅತ್ಯಂತ ಭೀಕರ ಅಪಾಯದ ಸಂದರ್ಭದಲ್ಲಿ ಮತ್ತು ಸ್ವತಃ ತೀವ್ರವಾಗಿ ಗಾಯಗೊಂಡಿದ್ದರೂ ಸಹ, ಅವರು ಅಪಾರ ಧೈರ್ಯ ಹಾಗೂ ಇತರರ ಜೀವ ರಕ್ಷಿಸುವ ಅಚಲ ಸಂಕಲ್ಪವನ್ನು ಪ್ರದರ್ಶಿಸಿದ್ದಾರೆ" ಎಂದು ಹೇಳಿದ್ದಾರೆ. ಅವರ ಈ ಸಾಹಸವು ದೊಡ್ಡ ದುರಂತವನ್ನು ತಪ್ಪಿಸಿದೆ ಎಂದಿರುವ ಮೋದಿ, ಕ್ಯಾಪ್ಟನ್ ಸ್ಮಿತ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
Captain Smit Machchhar is a HERO.
— Narendra Modi (@narendramodi) October 1, 2026
In the face of the gravest danger and despite being seriously injured, he showed immense courage and an unwavering resolve to protect the lives of others.
His valour helped save hundreds of lives and avert a great tragedy.
India is proud of…
ಫ್ಲೈದುಬೈ ವಿಮಾನದಲ್ಲಿ ನಡೆದ ಘಟನೆಯ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ಸಾಹಸವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹಾಗೂ ವಿಡಿಯೋ ಸಂದೇಶವನ್ನು ಹಂಚಿಕೊಂಡ ಅವರು, "ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ಅಸಾಧಾರಣ ಶೌರ್ಯಕ್ಕೆ ನನ್ನ ಸಲಾಂ. ಚಾಕುವಿನಿಂದ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರೂ ಸಹ, ಅವರು ಧೈರ್ಯದಿಂದ ಹೋರಾಡಿದ್ದಾರೆ, ದಾಳಿಕೋರನನ್ನು ಪ್ರತಿರೋಧಿಸಿದ್ದಾರೆ. ಅಲ್ಲದೆ ಕಾಕ್‌ಪಿಟ್ ಬಾಗಿಲನ್ನು ತೆರೆದು ಪ್ರಯಾಣಿಕರು ಮತ್ತು ಸಿಬ್ಬಂದಿ ದಾಳಿಕೋರನನ್ನು ನಿಯಂತ್ರಿಸಲು ನೆರವಾಗಿದ್ದಾರೆ" ಎಂದು ನೆತನ್ಯಾಹು ಹೇಳಿದ್ದಾರೆ.
ಪ್ರಧಾನಿ ಮೋದಿ ವಿಮಾನಕ್ಕೆ ಯುಎಇಯಲ್ಲಿ ಎಫ್- 16 ಯುದ್ಧ ವಿಮಾನಗಳಿಂದ ಭದ್ರತೆ; ಕಾರಣವೇನು?
ಏನಿದು ಘಟನೆ?
(Flight FZ1073), ಓಮನ್ ಮೂಲದ ಸಹ-ಪೈಲಟ್ ವಿಮಾನವನ್ನು ಅಪಘಾತಕ್ಕೀಡುಮಾಡಲು ಅಥವಾ ಹೈಜಾಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಆತ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದರೂ ಧೈರ್ಯ ಕಳೆದುಕೊಳ್ಳದ ಸ್ಮಿತ್, ಸಹ-ಪೈಲಟ್ ವಿರುದ್ಧ ಮರುಹೋರಾಟ ನಡೆಸಿ ಆತನನ್ನು ತಡೆದಿದ್ದಾರೆ. ಅಲ್ಲದೆ, ಕಾಕ್‌ಪಿಟ್ ಬಾಗಿಲನ್ನು ತೆರೆದು ಇತರ ಸಿಬ್ಬಂದಿ ಹಾಗೂ ಪ್ರಯಾಣಿಕರು ದಾಳಿಕೋರನನ್ನು ನಿಯಂತ್ರಿಸಲು ನೆರವಾಗಿದ್ದಾರೆ. ನಂತರ ವಿಮಾನವನ್ನು ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿಸಿ ನೂರಾರು ಪ್ರಯಾಣಿಕರ ಜೀವವನ್ನು ರಕ್ಷಿಸಿದ್ದಾರೆ.