ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಹಿರಿಯ ನಾಯಕ ಜಾರ್ಜ್ ಕುರಿಯನ್
George Kurien: ರಾಜ್ಯಸಭಾ ಅಧಿಕಾರಾವಧಿ ಮುಗಿದಿದ್ದರಿಂದ ಸಚಿವ ಸ್ಥಾನಕ್ಕೆ ಬಿಜೆಪಿ ಹಿರಿಯ ನಾಯಕ ಜಾರ್ಜ್ ಕುರಿಯನ್ ರಾಜೀನಾಮೆ ನೀಡಿದರು. ಕುರಿಯನ್ ಅವರ ರಾಜ್ಯಸಭಾ ಅವಧಿ ಜೂನ್ 21ರಂದು ಮುಕ್ತಾಯಗೊಂಡಿದ್ದರಿಂದ ಅವರ ರಾಜಿನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಮಂಗಳವಾರ ತಿಳಿಸಿದೆ.
ಸಂಗ್ರಹ ಚಿತ್ರ -
ನವದೆಹಲಿ: ಭಾರತೀಯ ಜನತಾ ಪಕ್ಷದ (BJP) ಹಿರಿಯ ನಾಯಕ ಜಾರ್ಜ್ ಕುರಿಯನ್ (George Kurien) ಅವರು ಮಂಗಳವಾರ ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಮೀನುಗಾರಿಕೆ ಖಾತೆ ರಾಜ್ಯ ಸಚಿವ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಆರು ವರ್ಷಗಳ ರಾಜ್ಯಸಭಾ ಅಧಿಕಾರ ಅವಧಿ ಮುಗಿದಿದ್ದರಿಂದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರಿಗೆ ರಾಜಿನಾಮೆಯನ್ನು ಸಲ್ಲಿಸಿದ್ದು, ಅವರು ಅದನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಮಂಗಳವಾರ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ ಜಾರ್ಜ್ ಕುರಿಯನ್ ಅವರ ರಾಜೀನಾಮೆಯನ್ನು ಸಂವಿಧಾನದ 75 ನೇ ವಿಧಿಯ ಷರತ್ತು (2) ರ ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಹೇಳಿಕೆಯಲ್ಲಿ ತಿಳಿಸಿದೆ.
ಉದ್ಧವ್ ಬಣಕ್ಕೆ ಭಾರಿ ಶಾಕ್: ಏಕನಾಥ್ ಶಿಂದೆ ಪಾಳಯ ಸೇರಿದ 6 ಬಂಡಾಯ ಸಂಸದರು
ರಾಜೀನಾಮೆಯ ಕುರಿತು ಈ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ಬರೆದಿರುವ ಕುರಿಯನ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿ, ಅವರಿಂದಾಗಿ ನನಗೆ ಸಚಿವನಾಗಲು ಅವಕಾಶ ಸಿಕ್ಕಿತು ಎಂದು ಹೇಳಿದ್ದಾರೆ.
ಕುರಿಯನ್ ಅವರಿಗೂ ಮೊದಲು ರವನೀತ್ ಸಿಂಗ್ ಬಿಟ್ಟು ಅವರ ಅಧಿಕಾರಾವಧಿ ಜೂನ್ 18ರಂದು ಕೊನೆಗೊಂಡಿದ್ದು, ಅವರ ಮರುನಾಮಕರಣ ಮಾಡಲಾಗಿಲ್ಲ.
ಜಾರ್ಜ್ ಕುರಿಯನ್ ಯಾರು?
ಬಿಜೆಪಿ ಹಿರಿಯ ನಾಯಕರಾಗಿರುವ 65 ವರ್ಷದ ಜಾರ್ಜ್ ಕುರಿಯನ್ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯ ಸಚಿವರಾಗಿದ್ದರು. 1980ರಲ್ಲಿ ಬಿಜೆಪಿ ಸ್ಥಾಪನೆಯಾದಾಗಿನಿಂದ ಪಕ್ಷದ ಸದಸ್ಯರಾಗಿರುವ ಅವರು ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿದ್ದರು.
1960ರ ಕುರಿಯನ್ ಸೆಪ್ಟೆಂಬರ್ 20ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಎಟ್ಟುಮನೂರ್ ಪುರಸಭೆಯ ನಂಬಿಯಕುಲಂನಲ್ಲಿ ಜನಿಸಿದ ಕುರಿಯನ್ ತಮ್ಮ ತವರೂರಿನಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ಬಳಿಕ ಕಾನೂನಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಗಳಿಸಿದ ಅವರು 2024ರ ಜೂನ್ 9ರಂದು ಕೇಂದ್ರ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. 2024ರ ಜೂನ್ 11ರಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಇದಕ್ಕೂ ಮೊದಲು ಕುರಿಯನ್ ಅವರು ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಉಪಾಧ್ಯಕ್ಷರಾಗಿದ್ದರು.
ಮಮತಾ ಬ್ಯಾನರ್ಜಿ ಹಿಡಿತದಿಂದ ಜಾರುತ್ತಿದೆ ಟಿಎಂಸಿ; ಬಂಡಾಯ ಶಾಸಕರಿಂದ ಅಧ್ಯಕ್ಷರಾಗಿ ಅರೂಪ್ ರಾಯ್ ನೇಮಕ
ರಾಜೀನಾಮೆ ಬಳಿಕ ಅವರು ರಾಜ್ಯಸಭಾ ಅವಧಿ ಮುಗಿದ ಮೇಲೆ ಜೂನ್ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದೇನೆ. ಸಚಿವನಾಗಿ ಕಾರ್ಯನಿರ್ವಹಿಸಲು ಅವಕಾಶ ಕೊಟ್ಟ ಅವರಿಗೆ ಕೃತಜ್ಞತೆ ಸಲ್ಲಿಸಿದ್ದೇನೆ. ತಾವು ಸಚಿವ ಹುದ್ದೆಯನ್ನು ಅಲಂಕರಿಸುತ್ತೇವೆ ಎಂದು ಎಂದಿಗೂ ಊಹಿಸಿರಲಿಲ್ಲ. ಮೋದಿಯವರು ಪ್ರಧಾನಿಯಾಗಿದ್ದರಿಂದಲೇ ನನಗೆ ಈ ಅವಕಾಶ ಸಿಕ್ಕಿತು. ಅದಕ್ಕಾಗಿ ಅವರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.