ಹಿಮಾಚಲ ಪ್ರದೇಶದಲ್ಲಿ ಕಂದಕಕ್ಕೆ ಬಿದ್ದ ಬಸ್: ಏಳು ಮಂದಿ ಪ್ರಯಾಣಿಕರು ಸಾವು
Bus accident in Chamba: ಮೃತಪಟ್ಟ ಏಳು ಮಂದಿಯಲ್ಲಿ ನಾಲ್ವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್ ಚಾಲಕ ಮತ್ತು ಕಂಡಕ್ಟರ್ ಕೂಡ ಸೇರಿದ್ದಾರೆ ಎಂದು ವರದಿಯಾಗಿದೆ. ಅಪಘಾತಕ್ಕೆ ಕಾರಣವಾದ ನಿಖರವಾದ ಸಂದರ್ಭಗಳು ಇನ್ನೂ ತಿಳಿದಿಲ್ಲ.
Bus accident in Chamba -
ಶಿಮ್ಲಾ, ಆ.8: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ತಿಸ್ಸಾ-ಬೈರಾಗರ್ ರಸ್ತೆಯ ಚಲುಜ್ ಮೋರ್ ಬಳಿ ಶನಿವಾರ ಬೆಳಗ್ಗೆ ಪ್ರಯಾಣಿಕರ ಬಸ್ ಅಪಘಾತಕ್ಕೀಡಾಗಿದ್ದು, ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ ಬೈರಾಗರ್ ನಿಂದ ಚಂಬಾ ಜಿಲ್ಲೆಯ ಕಡೆಗೆ ಪ್ರಯಾಣಿಸುತ್ತಿದ್ದಾಗ ಚಾಲುಜ್ ಮೋರ್ ಬಳಿ ಅಪಘಾತ ಸಂಭವಿಸಿದೆ. ಘಟನೆಯ ವೇಳೆ ಬಸ್‌ನಲ್ಲಿ ಸುಮಾರು 15 ರಿಂದ 20 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.
🚨 HIMACHAL PRADESH | BUS ACCIDENT
— contentkikamii (@contentkikamii) August 8, 2026
A private Sharma bus met with an accident on the Tissa–Bairagarh road in Chamba district, Himachal Pradesh.
The bus reportedly met with an accident while travelling on the route leaving 3 people dead and several others injured. Rescue and… pic.twitter.com/kaSHq4i2oa
ಮೃತಪಟ್ಟ ಏಳು ಮಂದಿಯಲ್ಲಿ ನಾಲ್ವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಬಸ್ ಚಾಲಕ ಮತ್ತು ಕಂಡಕ್ಟರ್ ಕೂಡ ಸೇರಿದ್ದಾರೆ ಎಂದು ವರದಿಯಾಗಿದೆ. ಅಪಘಾತಕ್ಕೆ ಕಾರಣವಾದ ನಿಖರವಾದ ಸಂದರ್ಭಗಳು ಇನ್ನೂ ತಿಳಿದಿಲ್ಲ.
ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ತಿಸ್ಸಾದ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಮಾಹಿತಿ ಮೇರೆಗೆ ಸ್ಥಳೀಯ ನಿವಾಸಿಗಳು ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.