ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CJI Gavai: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದಿಢೀರ್‌ ಅಸ್ವಸ್ಥ- ಆಸ್ಪತ್ರೆಗೆ ದಾಖಲು

ತೀವ್ರವಾದ ಸೋಂಕಿನಿಂದ ಬಳಲುತ್ತಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಅರ್. ಗವಾಯಿ (Chief Justice of India BR Gavai) ಅವರನ್ನು ದೆಹಲಿಯ (Delhi) ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಶೀಘ್ರದಲ್ಲೇ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿ ತಮ್ಮ ದೈನಂದಿನ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.

ಸುಪ್ರೀಂ ಕೋರ್ಟ್‌ ಸಿಜೆಐ ದಿಢೀರ್‌ ಅಸ್ವಸ್ಥ- ಆಸ್ಪತ್ರೆಗೆ ದಾಖಲು

ನವದೆಹಲಿ: ತೀವ್ರವಾದ ಸೋಂಕಿನಿಂದ ಬಳಲುತ್ತಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಅರ್. ಗವಾಯಿ (Chief Justice of India BR Gavai) ಅವರನ್ನು ದೆಹಲಿಯ (Delhi) ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಶೀಘ್ರದಲ್ಲೇ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿ ತಮ್ಮ ದೈನಂದಿನ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ. ಇತ್ತೀಚೆಗೆ ಅವರು ಹೈದರಾಬಾದ್‌ಗೆ ( Hyderabad ) ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ ತೀವ್ರ ಸೋಂಕಿನಿಂದ ಅವರು ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನ್ಯಾಯಮೂರ್ತಿ ಗವಾಯಿ ಅವರು ಜುಲೈ 12ರಂದು ನಲ್ಸರ್ ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲು ಹೈದರಾಬಾದ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ಅವರು ಬಾಬಾಸಾಹೇಬ್ ಡಾ.ಬಿ. ಆರ್> ಅಂಬೇಡ್ಕರ್ - ಸಂವಿಧಾನ ಸಭೆ - ಭಾರತದ ಸಂವಿಧಾನ" ಎಂಬ ಶೀರ್ಷಿಕೆಯ ವಿಶೇಷ ಅಂಚೆ ಕವರ್ ಅನ್ನು ಬಿಡುಗಡೆ ಮಾಡಿದರು. ಹಿರಿಯ ನ್ಯಾಯಾಂಗ ಮತ್ತು ಅಂಚೆ ಅಧಿಕಾರಿಗಳ ಸಮ್ಮುಖದಲ್ಲಿ ಭಾರತದ ಸಂವಿಧಾನದಲ್ಲಿ ಕಲೆ ಮತ್ತು ಕ್ಯಾಲಿಗ್ರಫಿಯ ಚಿತ್ರ ಪೋಸ್ಟ್‌ಕಾರ್ಡ್‌ಗಳನ್ನು ಅನಾವರಣಗೊಳಿಸಿದ್ದರು.

ಬಳಿಕ ಮಾತನಾಡಿದ ಅವರು, ಭಾರತದ ನ್ಯಾಯ ವ್ಯವಸ್ಥೆಯು ವಿಶಿಷ್ಟ ಸವಾಲುಗಳನ್ನು ಎದುರಿಸುತ್ತಿದೆ. ಇದರಿಂದ ಹಲವು ವಿಚಾರಣಾಧೀನ ಕೈದಿಗಳು ಜೈಲಿನಲ್ಲಿದ್ದಾರೆ ಎಂದು ಹೇಳಿದರು. ಅನಂತರ ಅವರು ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಭಾರತೀಯ ಸಂವಿಧಾನ ರಚನೆಯಲ್ಲಿ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರ ಪಾತ್ರದ ಕುರಿತು ಉಪನ್ಯಾಸ ನೀಡಿದ್ದು, ಈ ವೇಳೆ ಅವರು ಭಾರತ ಸಂವಿಧಾನದ ಏಕೀಕರಣ ಶಕ್ತಿಯ ಬಗ್ಗೆ ಮಾತನಾಡಿದರು.

ಇದನ್ನೂ ಓದಿ: IND vs ENG: ರಿಷಭ್‌ ಪಂತ್‌ ಬಗ್ಗೆ ಆಸಕ್ತದಾಯಕ ಸಂಗತಿ ರಿವೀಲ್‌ ಮಾಡಿದ ಆರ್‌ ಅಶ್ವಿನ್‌!

ಕಳೆದ 75 ವರ್ಷಗಳಲ್ಲಿ ಅನೇಕ ಬಾಹ್ಯ ಆಕ್ರಮಣಗಳು, ಅನೇಕ ಆಂತರಿಕ ತೊಂದರೆಗಳು ಇದ್ದರೂ ಭಾರತ ಯಾವಾಗಲೂ ಬಲಿಷ್ಠ ಮತ್ತು ಒಗ್ಗಟ್ಟಿನಿಂದ ನಿಂತಿದೆ ಎಂದು ಹೇಳಿದರು. ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಒಂದೆರಡು ದಿನಗಳಲ್ಲಿ ತಮ್ಮ ಅಧಿಕೃತ ಕರ್ತವ್ಯವನ್ನು ಪುನರಾರಂಭಿಸುವ ನಿರೀಕ್ಷೆಯಿದೆ ಎಂದು ಅಧಿಕೃತ ಮೂಲ ಮಾಧ್ಯಮವೊಂದಕ್ಕೆ ತಿಳಿಸಿದೆ.