ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

"ಮಗನ ಶಿಕ್ಷಣಕ್ಕಾಗಿ ಜಮೀನು ಮಾರಿದೆ"; ಏರ್ ಆ್ಯಂಬುಲೆನ್ಸ್ ದುರಂತದಲ್ಲಿ ಮಡಿದ ವೈದ್ಯನ ತಂದೆ ಹೇಳಿದ್ದೇನು?

ಜಾರ್ಖಂಡ್‌ನ ಚಾತ್ರಾ ಜಿಲ್ಲೆಯಲ್ಲಿ ಏರ್ ಆ್ಯಂಬುಲೆನ್ಸ್ ಪತನಗೊಂಡು ಏಳು ಮಂದಿ ಮೃತಪಟ್ಟಿದ್ದಾರೆ. ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ನಡೆಸುತ್ತಿದ್ದ ಬೀಚ್‌ಕ್ರಾಫ್ಟ್ ಸಿ90 ಏರ್ ಆಂಬುಲೆನ್ಸ್ ನಿನ್ನೆ ಸಂಜೆ ರಾಂಚಿಯಿಂದ ದೆಹಲಿಗೆ ತೆರಳುವ ಮಾರ್ಗದಲ್ಲಿ ಚಾತ್ರಾ ಜಿಲ್ಲೆಯಲ್ಲಿ ಪತನಗೊಂಡಿತ್ತು.

ಏರ್ ಆ್ಯಂಬುಲೆನ್ಸ್ ದುರಂತದಲ್ಲಿ ಮಡಿದ  ವೈದ್ಯನ ತಂದೆ ಹೇಳಿದ್ದೇನು?

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Feb 24, 2026 3:51 PM

ರಾಂಚಿ: ಜಾರ್ಖಂಡ್‌ನ ಚಾತ್ರಾ ಜಿಲ್ಲೆಯಲ್ಲಿ ಏರ್ ಆ್ಯಂಬುಲೆನ್ಸ್ ಪತನಗೊಂಡು ಏಳು ಮಂದಿ ಮೃತಪಟ್ಟಿದ್ದಾರೆ. ರೆಡ್‌ಬರ್ಡ್ ಏರ್‌ವೇಸ್ ( Air ambulance Crash) ಪ್ರೈವೇಟ್ ಲಿಮಿಟೆಡ್ ಸಂಸ್ಥೆ ನಡೆಸುತ್ತಿದ್ದ ಬೀಚ್‌ಕ್ರಾಫ್ಟ್ ಸಿ90 ಏರ್ ಆಂಬುಲೆನ್ಸ್ ನಿನ್ನೆ ಸಂಜೆ ರಾಂಚಿಯಿಂದ ದೆಹಲಿಗೆ ತೆರಳುವ ಮಾರ್ಗದಲ್ಲಿ ಚಾತ್ರಾ ಜಿಲ್ಲೆಯಲ್ಲಿ ಪತನಗೊಂಡಿತ್ತು. ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳನ್ನು ಒಳಗೊಂಡಂತೆ ಎಲ್ಲಾ ಏಳು ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ಮೃತ ವೈದ್ಯನ ತಂದೆ ವಿಕಾಶ್ ಕುಮಾರ್ ಗುಪ್ತಾ ತಮ್ಮ ಮಗನನ್ನು ಕಳೆದುಕೊಂಡ ನೋವನ್ನು ತೋಡಿಕೊಂಡಿದ್ದಾರೆ. ಅವರು ತಮ್ಮ ಮಗನಿಗೆ ಶಿಕ್ಷಣ ನೀಡಲು ಮಾಡಿದ ತ್ಯಾಗಗಳ ಬಗ್ಗೆ ಮಾತನಾಡಿದ್ದಾರೆ. ನನ್ನ ಹಿರಿಯ ಮಗನನ್ನು ರಾಂಚಿಯ ಸದರ್ ಆಸ್ಪತ್ರೆಯಲ್ಲಿ ನಿಯೋಜಿಸಲಾಗಿತ್ತು. ಇಲ್ಲಿ ಸರಿಯಾದ ಆರೋಗ್ಯ ಸೌಲಭ್ಯಗಳಿದ್ದರೆ, ಅವರು ಚಿಕಿತ್ಸೆಗಾಗಿ ದೆಹಲಿಗೆ ಏಕೆ ಹೋಗುತ್ತಿದ್ದರು? ನಾನು ಅವನ ಶಿಕ್ಷಣಕ್ಕಾಗಿ ನನ್ನ ಕೃಷಿ ಭೂಮಿ ಮತ್ತು ಇತರ ವಸ್ತುಗಳನ್ನು ಮಾರಿದ್ದೆ" ಎಂದು ಅವರು ಹೇಳಿದ್ದಾರೆ.

ಸುಟ್ಟ ಗಾಯಗಳಿಂದ ದೆಹಲಿಗೆ ಸಾಗಿಸಲಾಗುತ್ತಿದ್ದ ಸಂಜಯ್ ಪ್ರಸಾದ್ ಅವರ ಸಂಬಂಧಿಕರು, ರಾಂಚಿಯಲ್ಲಿ ಚಿಕಿತ್ಸೆ ನೀಡಿದರೂ ಅವರ ಸ್ಥಿತಿ ಸುಧಾರಿಸದ ನಂತರವೇ ಏರ್ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಸಂಜಯ್ ಪ್ರಸಾದ್ ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ಸಮಯದಲ್ಲಿ ಅವರ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ, ಆದ್ದರಿಂದ ನಾವು ಅವರನ್ನು ದೆಹಲಿಗೆ ಸ್ಥಳಾಂತರಿಸಲು ಬಯಸಿದ್ದೆವು. ಆ ಪ್ರಕ್ರಿಯೆಯಲ್ಲಿ, ನಾವು ಖಾಸಗಿ ಜೆಟ್ ವ್ಯವಸ್ಥೆ ಮಾಡಿದೆವು, ಆದರೆ ಅದು ಅಪಘಾತಕ್ಕೀಡಾಯಿತು" ಎಂದು ಕುಟುಂಬದ ಸದಸ್ಯರೊಬ್ಬರು ತಿಳಿಸಿದರು.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ತನ್ನ ಪ್ರಕಟಣೆಯಲ್ಲಿ, ವಿಟಿ-ಎಜೆವಿ ನೋಂದಣಿಯ ವಿಮಾನವು ರಾಂಚಿ–ದೆಹಲಿ ಮಾರ್ಗದಲ್ಲಿ ವೈದ್ಯಕೀಯ ತುರ್ತು ಸ್ಥಳಾಂತರ ಸೇವೆ ನಡೆಸುತ್ತಿತ್ತು. ಸಂಜೆ 7.34ಕ್ಕೆ ಕೋಲ್ಕತ್ತಾ ಏರ್ ಟ್ರಾಫಿಕ್ ಕಂಟ್ರೋಲ್‌ನೊಂದಿಗೆ ಸಂಪರ್ಕ ಸಾಧಿಸಿದ ನಂತರ, ವಾರಾಣಸಿಯಿಂದ ದಕ್ಷಿಣ–ಪೂರ್ವಕ್ಕೆ ಸುಮಾರು 100 ನಾಟಿಕಲ್ ಮೈಲು ದೂರದಲ್ಲಿ ಸಂವಹನ ಮತ್ತು ರಾಡಾರ್ ಸಂಪರ್ಕ ಕಳೆದುಕೊಂಡಿತು. ವಿಮಾನ ಅಪಘಾತದ ಕಾರಣವನ್ನು ಪತ್ತೆಹಚ್ಚಲು ಏರ್‌ಕ್ರಾಫ್ಟ್ ಅಪಘಾತ ತನಿಖಾ ಬ್ಯೂರೋ (AAIB) ತಂಡವನ್ನು ಅಪಘಾತ ಸ್ಥಳಕ್ಕೆ ಕಳುಹಿಸಲಾಗಿದೆ.