ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಆಸ್ಪತ್ರೆಯಲ್ಲಿ ಅಕ್ರಮವಾಗಿ ಸೋನಮ್ ವಾಂಗ್‌ಚುಕ್ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಗೀತಾಂಜಲಿ

ಸೋನಮ್ ವಾಂಗ್‌ಚುಕ್ ಅವರನ್ನು ಆಸ್ಪತ್ರೆಯಲ್ಲಿ ಅಕ್ರಮವಾಗಿ ಬಂಧಿಸಿಡಲಾಗಿದೆ. ಅವರ ಚಿಕಿತ್ಸೆಯಲ್ಲಿ ಪಾರದರ್ಶಕತೆ ಇಲ್ಲ ಎಂದು ಆರೋಪಿಸಿ ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಮ್ ವಾಂಗ್‌ಚುಕ್ ಅವರ ಬಿಡುಗಡೆ ಕುರಿತು ತುರ್ತು ವಿಚಾರಣೆ ನಡೆಸುವಂತೆ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಆಸ್ಪತ್ರೆಯಿಂದ ಸೋನಮ್ ವಾಂಗ್‌ಚುಕ್ ಬಿಡುಗಡೆಗೆ ಪತ್ನಿ ಗೀತಾಂಜಲಿ ಆಗ್ರಹ

ಸಂಗ್ರಹ ಚಿತ್ರ -

ನವದೆಹಲಿ: ಹವಾಮಾನ ಕಾರ್ಯಕರ್ತ, ಶಿಕ್ಷಕ ಮತ್ತು ಸಾಮಾಜಿಕ ಹೋರಾಟಗಾರ (Activist) ಸೋನಮ್ ವಾಂಗ್‌ಚುಕ್ (Sonam Wangchuk) ಅವರನ್ನು ತಕ್ಷಣ ಆಸ್ಪತ್ರೆಯಿಂದ ಬಿಡುಗಡೆ ಮಾಡುವಂತೆ ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ (Gitanjali Angmo ) ಹೈಕೋರ್ಟ್ (dehli high court) ಮೆಟ್ಟಿಲೇರಿದ್ದಾರೆ. ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್ (delhi Jantar Mantar) ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್‌ಚುಕ್ ಅವರನ್ನು ಶನಿವಾರ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಚಿಕಿತ್ಸಾ ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರಿಗೆ ನೀಡುತ್ತಿರುವ ಚಿಕಿತ್ಸೆಯಲ್ಲಿ ಪಾರದರ್ಶಕತೆ ಇಲ್ಲ ಎಂದು ಅವರು ಆರೋಪಿಸಿದ್ದಾರೆ.

ಸೋನಮ್ ವಾಂಗ್‌ಚುಕ್ ಅವರನ್ನು ಸರ್ಕಾರಿ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಬಂಧನದಲ್ಲಿ ಇರಿಸಲಾಗಿದೆ. ಈ ಕುರಿತು ದೆಹಲಿ ಹೈಕೋರ್ಟ್ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿರುವ ಗೀತಾಂಜಲಿ, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗಳಿಗಾಗಿ ಅವರು ಹಲವು ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದರಿಂದ ಅವರ ಆರೋಗ್ಯ ಹದಗೆಟ್ಟಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಅವಕಾಶ ಮಾಡಿಕೊಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಸೋನಂ ವಾಂಗ್ಚುಕ್‌ ಅನುಪಸ್ಥಿತಿಯಲ್ಲಿ ಪತ್ನಿ ಗೀತಾಂಜಲಿ ನೇತೃತ್ವದಲ್ಲಿ ಜುಲೈ 20ರಂದು ಸಂಸತ್ತಿನತ್ತ ನಡಿಗೆ; ಹೋರಾಟ ಯಾವ ಕಾರಣಕ್ಕೂ ಕೈ ಬಿಡುವುದಿಲ್ಲ ಎಂದು ಘೋಷಣೆ

ಗೀತಾಂಜಲಿ ಜೆ ಆಂಗ್ಮೋ ಅವರು ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಸೋನಮ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಸಂಪರ್ಕಿಸಲು ಮುಕ್ತ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲಿ ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್‌ಚುಕ್ ಅವರನ್ನು ಶನಿವಾರ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಬೆಳಗ್ಗೆ ಅನಿರೀಕ್ಷಿತವಾಗಿ ನಾಗರಿಕ ಉಡುಪಿನಲ್ಲಿ ಬಂದ ಪೊಲೀಸರು ಅವರನ್ನು ಶಾಂತಿಯುತವಾಗಿ ಸ್ಥಳದಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದರು. ಬಳಿಕ ಗೀತಾಂಜಲಿಯವರು ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದು, ಸೋನಮ್ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸಿದ್ದಾರೆ ಎಂದು ಹೇಳಿದ್ದಾರೆ. ಆದರೆ ಅವರಿಗೆ ನೀಡುತ್ತಿರುವ ಚಿಕಿತ್ಸೆಯಲ್ಲಿ ಪಾರದರ್ಶಕತೆಯ ಕೊರತೆ ಇದೆ ಎಂದು ಆರೋಪಿಸಿದ್ದರು.

gev

ಇದರ ಬಳಿಕ ಸೋನಮ್ ವಾಂಗ್‌ಚುಕ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುವಂತೆ ಕೋರಿ ಅವರು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಸೋನಮ್ ಅವರ ಆರೋಗ್ಯದಲ್ಲಿ ನಿರ್ಜಲೀಕರಣದ ಲಕ್ಷಣಗಳಿವೆ. ಆದರೆ ಅವರು ಸ್ಥಿರವಾಗಿದ್ದಾರೆ ಮತ್ತು ಚಿಕಿತ್ಸೆಯನ್ನು ನಿರಾಕರಿಸಿದ್ದಾರೆ ಎಂದು ಗೀತಾಂಜಲಿ ತಿಳಿಸಿದ್ದಾರೆ.

ಸಫ್ದರ್ಜಂಗ್ ಸರ್ಕಾರಿ ಆಸ್ಪತ್ರೆ ಮೇಲೆ ನನಗೆ ನಂಬಿಕೆ ಇಲ್ಲ. ವಾಂಗ್‌ಚುಕ್ ಅವರ ಪೊಟ್ಯಾಸಿಯಮ್ 2.9 ಕ್ಕೆ ಇಳಿದಿದೆ. ಇದು ಆತಂಕಕಾರಿ ಮತ್ತು ಜೀವಕ್ಕೆ ಅಪಾಯಕಾರಿ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ. ಆದರೆ ಬೇರೆ ಪ್ರಯೋಗಾಲಯದ ವರದಿಯಲ್ಲಿ ಅವರ ಪೊಟ್ಯಾಸಿಯಮ್ ಮಟ್ಟ 3.5 ಎಂದು ಹೇಳಿದ್ದು, ಇದು ಸಾಮಾನ್ಯ ಎಂದು ತಿಳಿಸಿದೆ. ಸಾಕಷ್ಟು ಮನವಿ ಮಾಡಿದರೂ ಸೋನಮ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಅಥವಾ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಸಫ್ದರ್ಜಂಗ್ ಆಸ್ಪತ್ರೆ ನಿರಾಕರಿಸಿದೆ ಎಂದು ಅವರು ಆರೋಪಿಸಿದ್ದಾರೆ.

ವಾಂಗ್‌ಚುಕ್ ಅವರ ಚಲನವಲನದ ಮೇಲೆ ಸಂಪೂರ್ಣ ನಿಗಾ ಇಡಲಾಗಿದೆ. ಅವರು ದಾಖಲಾಗಿರುವ ಮಹಡಿಯಲ್ಲಿ 30 ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯಲ್ಲಿ ನೂರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಇದು ವೈದ್ಯಕೀಯ ಆರೈಕೆಯಲ್ಲ. ಕಾನೂನುಬಾಹಿರ ಬಂಧನವಾಗಿದೆ ಎಂದು ಗೀತಾಂಜಲಿ ಅವರು ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ಸೋನಂ ವಾಂಗ್ಚುಕ್‌ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಿಜೆಪಿ ಸ್ಥಾಪಕ ಅಭಿಜಿತ್‌ ದೀಪ್ಕೆ; ಮುಂದುವರಿದ ಹೋರಾಟ

ಸೋನಮ್ ಅವರ ಆರೋಗ್ಯ ಇನ್ನಷ್ಟು ಹದಗೆಡುವ ಮುನ್ನ ಅವರನ್ನು ಬೇರೆಡೆಗೆ ಸ್ಥಳಾಂತರಿಸಲು ಅನುಮತಿ ನೀಡುವಂತೆ ತುರ್ತು ಹೈಕೋರ್ಟ್ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದೇನೆ. ಯಾವುದೇ ಕುಟುಂಬವು ತಮ್ಮ ಪ್ರೀತಿಪಾತ್ರರಿಗೆ ವೈದ್ಯಕೀಯ ಆರೈಕೆ ಎಲ್ಲಿ ನೀಡಬೇಕು ಎಂಬುದನ್ನು ಆಯ್ಕೆ ಮಾಡಲು ವ್ಯವಸ್ಥೆಯ ವಿರುದ್ಧ ಹೋರಾಡಬೇಕಾಗಿಲ್ಲ ಎಂದು ಅವರು ತಿಳಿಸಿದ್ದಾರೆ.