ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿವಾದದ ನಡುವೆ ಭೋಜಶಾಲಾ ದೇವಾಲಯದ ಸಮೀಪ ನಮಾಜ್‌ಗೆ ಸುಪ್ರೀಂ ಕೋರ್ಟ್ ಅನುಮತಿ

ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ ದೇವಾಲಯದಲ್ಲಿ ಶುಕ್ರವಾರದ ನಮಾಜ್‌ಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಭೋಜಶಾಲಾ ಕಮಲ್ ಮೌಲಾ ಮಸೀದಿ ಸಂಕೀರ್ಣವನ್ನು ದೇವಾಲಯವೆಂದು ಘೋಷಿಸುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ತಡೆಹಿಡಿಯಲು ನಿರಾಕರಿಸಿರುವ ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮುಸ್ಲಿಂ ಸಮುದಾಯದ ಮೇಲ್ಮನವಿ ಅರ್ಜಿಯನ್ನು ಆಲಿಸಲು ಕೂಡ ಒಪ್ಪಿಕೊಂಡಿದೆ.

ವಿವಾದಿತ ಭೋಜಶಾಲಾ ದೇವಾಲಯ ಸಮೀಪ ನಮಾಜ್‌ಗೆ  ಅನುಮತಿ

ಸಂಗ್ರಹ ಚಿತ್ರ -

ನವದೆಹಲಿ: ಮಧ್ಯಪ್ರದೇಶದ (Madhya Pradesh) ಧಾರ್ ಜಿಲ್ಲೆಯ ( Dhar district) ಭೋಜಶಾಲಾ ಕಮಲ್ ಮೌಲಾ ಮಸೀದಿ (Bhojshala Kamal Maula mosque) ಸಂಕೀರ್ಣ ಸರಸ್ವತಿ ದೇವಿಗೆ (saraswati devi temple) ಮೀಸಲಾಗಿರುವ ದೇವಾಲಯ ಎಂದು ಮಧ್ಯಪ್ರದೇಶ ಹೈಕೋರ್ಟ್ (Madhya Pradesh high court) ನೀಡಿದ್ದ ತೀರ್ಪನ್ನು ತಡೆ ಹಿಡಿಯಲು ನಿರಾಕರಿಸಿರುವ ಸುಪ್ರೀಂ ಕೋರ್ಟ್ (Supreme Court) ಭೋಜಶಾಲಾ ದೇವಾಲಯದ ವಿವಾದಿತ (Bhojshala temple dispute) ಸ್ಥಳದ ಬಳಿ ಶುಕ್ರವಾರ ನಮಾಜ್‌ (namaz) ಮಾಡಲು ಮುಸ್ಲಿಂ ಸಮುದಾಯಕ್ಕೆ ಅನುಮತಿಯನ್ನು ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಮುಸ್ಲಿಂ ಸಮುದಾಯ ಸಲ್ಲಿಸಿದ ಮೇಲ್ಮನವಿ ಅರ್ಜಿಯ ವಿಚಾರಣೆ ವೇಳೆ ಶುಕ್ರವಾರ ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ಮುಸ್ಲಿಮರು ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದೆ.

ಭೋಜಶಾಲಾ ದೇವಾಲಯ ವಿವಾದ: ಮುಸ್ಲಿಂ ಸಮುದಾಯದ ವಾದ ಆಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

ಇದು ಅತ್ಯಂತ ಸೂಕ್ಷ್ಮ ವಿಷಯ. ಸ್ಥಳದಲ್ಲಿ ಯಾವುದೇ ರೀತಿಯ ಉದ್ವಿಗ್ನತೆ ಉಂಟು ಮಾಡಬಾರದು. ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಯಾವುದೇ ಆದೇಶವನ್ನು ನಾವು ಹೊರಡಿಸಬಾರದು. ಹೀಗಾಗಿ ವಿಷಯದ ಕುರಿತು ಸಂಪೂರ್ಣ ವಿಚಾರಣೆ ನಡೆಯುವವರೆಗೆ ಸ್ಥಳದಲ್ಲಿ ನಮಾಜ್ ಗೆ ಅನುಮತಿ ನೀಡಲಾಗುತ್ತಿದೆ. ಮೂರು ವಾರಗಳಲ್ಲಿ ಅಂತಿಮ ವಿಚಾರಣೆಗೆ ದಿನ ನಿಗದಿಪಡಿಸಲಾಗುವುದು ಎಂದು ಪೀಠ ತಿಳಿಸಿದೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ಸ್ಮಾರಕದಲ್ಲಿ ಯಾವುದೇ ರಚನಾತ್ಮಕ ಬದಲಾವಣೆಗಳನ್ನು ಮಾಡುವಂತಿಲ್ಲ ಎಂದು ಹೇಳಿರುವ ನ್ಯಾಯಪೀಠವು, ಮಧ್ಯಪ್ರದೇಶ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಮುಖಂಡರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಲು ಸೋಮವಾರ ಒಪ್ಪಿಕೊಂಡಿತ್ತು.

ಭೋಜಶಾಲಾ ಕಮಲ್ ಮೌಲಾ ಮಸೀದಿಗೆ ಸಂಬಂಧಿಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ದಶಕದ ಹಿಂದೆ ನೀಡಿದ್ದ ಆದೇಶವನ್ನು ಮಧ್ಯಪ್ರದೇಶ ಹೈಕೋರ್ಟ್ ರದ್ದುಗೊಳಿಸಿತ್ತು. ಇದರಿಂದಾಗಿ ಮುಸ್ಲಿಂ ಸಮುದಾಯಕ್ಕೆ ಶುಕ್ರವಾರದ ಪ್ರಾರ್ಥನೆಗೆ ಅಡ್ಡಿಯಾಯಿತು. ಹೀಗಾಗಿ ಮುಸ್ಲಿಂ ಮುಖಂಡರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಏನು ಈ ವಿವಾದ ?

ಭೋಜಶಾಲಾ ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಅರ್ಪಿತವಾದ ದೇವಾಲಯ ಎಂದು ಹಿಂದೂಗಳು ಸಮರ್ಥಿಸಿಕೊಂಡಿದ್ದು, ಮುಸ್ಲಿಮರು ಇದನ್ನು ಕಮಲ್ ಮೌಲಾ ಮಸೀದಿ ಎನ್ನುತ್ತಿದ್ದಾರೆ. ಇದರಿಂದ ಇಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನೀಡಿದ ವರದಿ ಆಧಾರದಲ್ಲಿ ಕಳೆದ ಮೇ 15ರಂದು ಮಧ್ಯಪ್ರದೇಶ ಹೈಕೋರ್ಟ್ ಆ ಸ್ಥಳವು ದೇವಾಲಯವಾಗಿದೆ ಎಂದು ಹೇಳಿ 2003ರಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿತ್ತು. ಈ ಆದೇಶದಲ್ಲಿ ಹಿಂದೂ ಮತ್ತು ಮುಸ್ಲಿಮರಿಗೆ ವಿಭಿನ್ನ ದಿನಗಳಲ್ಲಿ ಆ ಸ್ಥಳದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.

“ಹಿಂದೂ ರಾಷ್ಟ್ರದ ಕಲ್ಪನೆಗೆ ಭಯಪಡುವ ಅಗತ್ಯವಿಲ್ಲ”: ಮತ್ತೊಂದು ವಿವಾದದ ಕಿಡಿ ಹೊತ್ತಿಸಿದ ಯೋಗ ಗುರು ಬಾಬಾ ರಾಮ್‌ದೇವ್

ಸಾಹಿತ್ಯ ಮತ್ತು ಪುರಾತತ್ತ್ವ ಶಾಸ್ತ್ರದ ಉಲ್ಲೇಖಗಳನ್ನು ಪರಿಗಣಿಸಿ ಈ ಸ್ಥಳ ದೇವಾಲಯವಾಗಿದ್ದು, ಸಂಸ್ಕೃತ ಕಲಿಕೆಯ ಕೇಂದ್ರವಾಗಿತ್ತು ಎಂದು ಹೇಳಿದ್ದ ಹೈಕೋರ್ಟ್, ಇಲ್ಲಿಂದ ಮಸೀದಿ ತೆರವುಗೊಳಿಸಿ ಬೇರೆಡೆ ನಿರ್ಮಾಣ ಮಾಡಲು ಸ್ಥಳವನ್ನು ಮಂಜೂರು ಮಾಡಲು ಅವಕಾಶ ನೀಡಿತ್ತು. ಇದನ್ನು ಕೂಡ ಮುಸ್ಲಿಂ ಮುಖಂಡರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.