ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಅರವಾಳಿ ವಿವಾದ; ಪ್ರಕರಣದ ಸ್ವಯಂ ತನಿಖೆ ಕೈಗೆತ್ತಿಕೊಂಡ ಸುಪ್ರೀಂ

Aravalli Row: ಅರಾವಳಿ ಬೆಟ್ಟಗಳು ಮತ್ತು ಶ್ರೇಣಿಗಳ ವ್ಯಾಖ್ಯಾನದ ಕುರಿತು ಇತ್ತೀಚೆಗೆ ಘೋಷಿಸಲಾದ ಹೊಸ ನಿಯಮಗಳ ವಿವಾದದ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಸ್ವಯಂ ಕೈಗೆತ್ತಿಕೊಂಡಿದೆ. ಅದಕ್ಕೆ ಸಂಬಂಧಿಸಿದ ಇತರ ವಿಷಯಗಳ ಕುರಿತಾದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

ಅರವಾಳಿ ವಿವಾದ; ಸ್ವಯಂ ತನಿಖೆ ಕೈಗೆತ್ತಿಕೊಂಡ ಸುಪ್ರೀಂ

ಅರಾವಳಿ ಬೆಟ್ಟಗಳು -

Vishakha Bhat
Vishakha Bhat Dec 28, 2025 8:41 AM

ನವದೆಹಲಿ: ಅರಾವಳಿ ಬೆಟ್ಟಗಳು ಮತ್ತು ಶ್ರೇಣಿಗಳ (Aravalli Row) ವ್ಯಾಖ್ಯಾನದ ಕುರಿತು ಇತ್ತೀಚೆಗೆ ಘೋಷಿಸಲಾದ ಹೊಸ ನಿಯಮಗಳ ವಿವಾದದ ಪ್ರಕರಣವನ್ನು ಸುಪ್ರೀಂ ಕೋರ್ಟ್‌ (Supreme Court) ಸ್ವಯಂ ಕೈಗೆತ್ತಿಕೊಂಡಿದೆ. ಅದಕ್ಕೆ ಸಂಬಂಧಿಸಿದ ಇತರ ವಿಷಯಗಳ ಕುರಿತಾದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. ಅರಾವಳಿ ಬೆಟ್ಟಗಳು ಮತ್ತು ಪರ್ವತ ಶ್ರೇಣಿಗಳ ವ್ಯಾಖ್ಯಾನ ಮತ್ತು ಸಂಬಂಧಿತ ಸಮಸ್ಯೆಗಳು' ಎಂದು ಪಟ್ಟಿ ಮಾಡಲಾದ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠವು ವಿಚಾರಣೆ ನಡೆಸಲಿದೆ.

100 ಮೀಟರ್‌ಗಿಂತ ಕಡಿಮೆ ಎತ್ತರ ಹೊಂದಿರುವ ಅರಾವಳಿ ಪ್ರದೇಶದ ಪರ್ವತಗಳನ್ನು ಅರಣ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬ ಆದೇಶದ ಬಳಿಕ ಜನರು ಭಾರೀ ಆಕ್ರೋಶವನ್ನು ಹೊರ ಹಾಕಿದ್ದಾರು. ಇದಾದ ಬಳಿಕ ಕೇಂದ್ರ ಸರ್ಕಾರ ಅರಾವಳಿ ಪರ್ವತಗಳ ಸಾಲಿನಲ್ಲಿ ಹೊಸದಾಗಿ ಗಣಿಗಾರಿಕೆ ಗುತ್ತಿಗೆಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಆದೇಶ ಹೊರಡಿಸಿದೆ. ಸುಸ್ಥಿರ ಗಣಿಗಾರಿಕೆಗಾಗಿ ಸಮಗ್ರ ನಿರ್ವಹಣಾ ಯೋಜನೆಯನ್ನು ಸಿದ್ಧಪಡಿಸುವವರೆಗೆ ಸುಪ್ರೀಂಕೋರ್ಟ್, ಹೊಸ ಗಣಿಗಾರಿಕೆ ಗುತ್ತಿಗೆಗಳನ್ನು ಸ್ಥಗಿತಗೊಳಿಸಿದ ಕೆಲವು ದಿನಗಳ ನಂತರ ಈ ಆದೇಶ ಬಂದಿದೆ.

ದೆಹಲಿಯಿಂದ ಗುಜರಾತ್‌ವರೆಗೆ ವ್ಯಾಪಿಸಿರುವ ಸಂಪೂರ್ಣ ಅರಾವಳಿ ಶ್ರೇಣಿಯ ಸಂರಕ್ಷಣೆ ಮತ್ತು ರಕ್ಷಣೆಯತ್ತ ಒಂದು ಪ್ರಮುಖ ಹೆಜ್ಜೆಯಾಗಿ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಅರಾವಳಿ ಶ್ರೇಣಿಯಲ್ಲಿ ಯಾವುದೇ ಹೊಸ ಗಣಿಗಾರಿಕೆ ಗುತ್ತಿಗೆಗಳನ್ನು ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲು ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡಿದೆ" ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉನ್ನಾವೊ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗರ್ ಜೈಲು ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂನಲ್ಲಿ ಸಿಬಿಐ ಅರ್ಜಿ

ಪರಿಸರ, ಭೂವೈಜ್ಞಾನಿಕ ಮತ್ತು ಭೂದೃಶ್ಯ ಮಟ್ಟದ ಪರಿಗಣನೆಗಳ ಆಧಾರದ ಮೇಲೆ, ಕೇಂದ್ರವು ಈಗಾಗಲೇ ಗಣಿಗಾರಿಕೆಗೆ ನಿಷೇಧಿಸಿರುವ ಪ್ರದೇಶಗಳ ಜೊತೆಗೆ, ಇಡೀ ಅರಾವಳ್ಳಿಯಲ್ಲಿ ಗಣಿಗಾರಿಕೆಯನ್ನು ನಿಷೇಧಿಸಬೇಕಾದ ಹೆಚ್ಚುವರಿ ಪ್ರದೇಶಗಳು ಮತ್ತು ವಲಯಗಳನ್ನು ಗುರುತಿಸುವಂತೆ ಸರ್ಕಾರ ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿಗೆ (ICFRE) ತಿಳಿಸಿದೆ.