Terrorist Arrest: ಹೈದರಾಬಾದ್‌ನಲ್ಲಿ ಭಾರೀ ಸ್ಪೋಟಕ್ಕೆ ಸಂಚು ; ಇಬ್ಬರು ಶಂಕಿತರ ಬಂಧನ
ತೆಲಂಗಾಣದಲ್ಲಿ ಭಾರೀ ಸ್ಪೋಟಕ್ಕೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ಭಾನುವಾರ ಹೈದರಾಬಾದ್‌ನಲ್ಲಿ ಬಂಧಿಸಿದ್ದಾರೆ. ಇಬ್ಬರು ಆರೋಪಿಗಳಾದ ಸಿರಾಜ್ ಉರ್ ರೆಹಮಾನ್ (29) ಮತ್ತು ಸೈಯದ್ ಸಮೀರ್ (28) ಸೌದಿ ಅರೇಬಿಯಾದಲ್ಲಿ ಐಸಿಸ್ ಘಟಕದೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಶಂಕಿಸಲಾಗಿದೆ.


ಹೈದರಾಬಾದ್: ತೆಲಂಗಾಣದಲ್ಲಿ ಭಾರೀ ಸ್ಪೋಟಕ್ಕೆ (Terrorist Arrest) ಸಂಚು ರೂಪಿಸಿದ್ದ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ಭಾನುವಾರ ಹೈದರಾಬಾದ್‌ನಲ್ಲಿ (Hyderabad) ಬಂಧಿಸಿದ್ದಾರೆ. ಇಬ್ಬರು ಆರೋಪಿಗಳಾದ ಸಿರಾಜ್ ಉರ್ ರೆಹಮಾನ್ (29) ಮತ್ತು ಸೈಯದ್ ಸಮೀರ್ (28) ಸೌದಿ ಅರೇಬಿಯಾದಲ್ಲಿ ಐಸಿಸ್ ಘಟಕದೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಶಂಕಿಸಲಾಗಿದೆ. ಆಂಧ್ರಪ್ರದೇಶದ ಗುಪ್ತಚರ ವಿಭಾಗ ಮತ್ತು ತೆಲಂಗಾಣ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಆಂಧ್ರಪ್ರದೇಶದ ವಿಜಯನಗರಂನಲ್ಲಿ ರೆಹಮಾನ್ ಎಂಬಾತನನ್ನು ಬಂಧಿಸಲಾಗಿದೆ.
ಬಂಧಿತ ರೆಹಮಾನ್ ಪೊಲೀಸರಿಗೆ ವಿವರಗಳನ್ನು ಬಹಿರಂಗಪಡಿಸಿದ್ದು, ಎರಡನೇ ಶಂಕಿತ ಹೈದರಾಬಾದ್‌ನ ಸಮೀರ್‌ನನ್ನು ಬಂಧಿಸಲಾಗಿದೆ. ಶಂಕಿತರ ಮನೆಯಿಂದ ಅಮೋನಿಯಾ, ಸಲ್ಫರ್ ಮತ್ತು ಅಲ್ಯೂಮಿನಿಯಂ ಪುಡಿ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಶೀಘ್ರದಲ್ಲೇ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳು ಉಗ್ರಗಾಮಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಊಹಿಸಲಾಗಿದೆ.
ಪ್ರತ್ಯೇಕ ಪ್ರಕರಣದಲ್ಲಿ ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ಯೂಟ್ಯೂಬರ್ ಜ್ಯೋತಿ ಬಂಧನ ಬಳಿಕ ದೇಶಾದ್ಯಂತ ಬೇಹಾಗಾರಿಕೆ ನಡೆಸುತ್ತಿರುವವರ ಹುಡುಕಾಟ ಜೋರಾಗಿದೆ. ಇದೀಗ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ರಾಂಪುರದಲ್ಲಿ ಉದ್ಯಮಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಗಾಗಿ ಗಡಿಯಾಚೆಗಿನ ಕಳ್ಳಸಾಗಣೆ ಮತ್ತು ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಮಾಹಿತಿಯ ನಂತರ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮೊರಾದಾಬಾದ್‌ನಲ್ಲಿ ಆರೋಪಿ ಶಹಜಾದ್‌ನನ್ನು ಬಂಧಿಸಿದೆ.
ಈ ಸುದ್ದಿಯನ್ನೂ ಓದಿ: ISI Agent: ಪಾಕಿಸ್ತಾನ ಪರ ಬೇಹುಗಾರಿಕೆ ಪ್ರಕರಣ ; ಯೂಟ್ಯೂಬರ್ ಜ್ಯೋತಿ ಬಳಿಕ ಯುಪಿ ಉದ್ಯಮಿ ಬಂಧನ
ಇದಕ್ಕೂ ಮುನ್ನ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಎಂಬಾಕೆಯನ್ನು ಬಂಧಿಸಲಾಗಿತ್ತು. ಆಕೆ ದೆಹಲಿಯ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುವ ಪಾಕ್ ಸಿಬ್ಬಂದಿಯೊಂದಿಗೆ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ. ಜ್ಯೋತಿ ವಾಟ್ಸಪ್, ಟೆಲಿಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಎನ್‌ಕ್ರಿಪ್ಟ್ ಮಾಡಲಾದ ಪ್ಲಾಟ್‌ಫಾರ್ಮ್‌ಗಳಲ್ಲಿ ಶಕೀರ್ ಅಲಿಯಾಸ್ ರಾಣಾ ಶಹಬಾಜ್ ಸೇರಿದಂತೆ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದಳು ಎಂಬುದು ಬಯಲಾಗಿದೆ. ಈಕೆ ಟ್ರಾವೆಲ್ ವ್ಲಾಗ್ಗರ್ ಆಗಿದ್ದು, ‘ಟ್ರಾವೆಲ್ ವಿತ್ ಜೋ’ (Travel with JO) ಎಂಬ ಹೆಸರಿನಲ್ಲಿ ಖಾತೆ ಹೊಂದಿದ್ದಾಳೆ. ಈಕೆಯ ಯೂಟ್ಯೂಬ್ ಚಾನೆಲ್ಗೆ 3.77 ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ 1.31 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾಳೆ.