ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Terror Links: ಲಷ್ಕರ್-ಎ-ತೈಬಾ ಜೊತೆ ಸಂಪರ್ಕ: ಇಬ್ಬರು ಸರ್ಕಾರಿ ನೌಕರರು ವಜಾ

ಭಯೋತ್ಪಾದಕರೊಂದಿಗೆ ಸಂಪರ್ಕ (Terror Links) ಹೊಂದಿರುವ ಆರೋಪದಲ್ಲಿ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಲಾಗಿದೆ. ಇವರು ಶಸ್ತ್ರಾಸ್ತ್ರ ಕಳ್ಳಸಾಗಣೆ ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸರ್ಕಾರಿ ನೌಕರ ಹುದ್ದೆಯಿಂದ ವಜಾಗೊಳಿಸಿ ಆದೇಶಿಸಿದ್ದಾರೆ.

ಎಲ್‌ಇಟಿ ಜೊತೆ ನಂಟು: ಇಬ್ಬರು ನೌಕರರು ವಜಾ

ಶ್ರೀನಗರ: ಭಯೋತ್ಪಾದಕರೊಂದಿಗೆ ಸಂಪರ್ಕ(Terror Link) ಹೊಂದಿರುವ ಆರೋಪದಲ್ಲಿ ಇಬ್ಬರು ಸರ್ಕಾರಿ ನೌಕರರನ್ನು (Government Employees) ವಜಾಗೊಳಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ. ಕುಪ್ವಾರಾ ಜಿಲ್ಲೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುವ ಇಬ್ಬರು ಸರ್ಕಾರಿ ನೌಕರರು ಶಸ್ತ್ರಾಸ್ತ್ರ ಕಳ್ಳಸಾಗಣೆ (arms smuggling) ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (Lashkar-e-Taiba) ಜೊತೆ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ. ಇವರನ್ನು ವಜಾಗೊಳಿಸಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆದೇಶ ಹೊರಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಸರ್ಕಾರಿ ನೌಕರರಾಗಿರುವ ಶಿಕ್ಷಕ ಖುರ್ಷೀದ್ ಅಹ್ಮದ್ ರಾಥರ್ ಮತ್ತು ಕುರಿ ಸಾಕಾಣಿಕೆ ಇಲಾಖೆಯ ಉದ್ಯೋಗಿ ಸಿಯಾದ್ ಅಹ್ಮದ್ ಖಾನ್ ಎಂಬವರನ್ನು ವಜಾಗೊಳಿಸಲಾಗಿದೆ. ಇವರಿಬ್ಬರು ದೇಶದ ಗಡಿ ನಿಯಂತ್ರಣ ರೇಖೆಯ ಬಳಿಯ ಕರ್ನಾ ಮತ್ತು ಕೆರಾನ್ ಪ್ರದೇಶಗಳ ನಿವಾಸಿಗಳು . ಇವರಿಬ್ಬರೂ ಶಸ್ತ್ರಾಸ್ತ್ರ ಕಳ್ಳಸಾಗಣೆ ಆರೋಪ ಎದುರಿಸುತ್ತಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ ರಾಥರ್, ವಿಧ್ವಂಸಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮತ್ತು ಎಲ್‌ಇಟಿ ರೂಪಿಸಿದ ವಿವಿಧ ಭಯೋತ್ಪಾದಕ ಚಟುವಟಿಕೆಗಳಿಗೆ ಮಾರ್ಗದರ್ಶಕನಾಗಿದ್ದ ಎನ್ನಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಅನೇಕ ದಾಳಿಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಲ್‌ಇಟಿ ಸಂಘಟನೆಗೆ ಮಾರ್ಗದರ್ಶನ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಇದನ್ನೂ ಓದಿ: KMC Hospital Mangalore: ವೆಂಟ್ರಿಕ್ಯುಲರ್ ಸೆಪ್ಟಲ್‌ ರಪ್ಚರ್ ಸಮಸ್ಯೆ - ಕೆಎಂಸಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ!

2024ರ ಡಿಸೆಂಬರ್ 1ರಂದು ಬಂಧಿಸಲ್ಪಟ್ಟದ್ದ ಖಾನ್ ಪ್ರಸ್ತುತ ಕುಪ್ವಾರಾದ ಜಿಲ್ಲಾ ಜೈಲಿನಲ್ಲಿದ್ದಾನೆ. ಇವನು ಕೂಡ ನಿಷೇಧಿತ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾದ ಭಯೋತ್ಪಾದಕ ಸಹಚರ ಮತ್ತು ಭೂಗತ ಕೆಲಸಗಾರನಾಗಿ ಕೆಲಸ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ದೇಶವಿರೋಧಿ ಚಟುವಟಿಕೆಗಳ ಭಾಗಿಯಾಗಿರುವ ಆರೋಪದ ಮೇರೆಗೆ ಕೇಂದ್ರಾಡಳಿತ ಪ್ರದೇಶದಲ್ಲಿ 12ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ.