Pahalgam Terror Attack: ಉಗ್ರರ ದಾಳಿ ಕೇಸ್; ಬುಲೆಟ್ ಪ್ರೂಫ್ ಜಾಕೆಟ್ ಧರಿಸಿ ಓಡಾಡುತ್ತಿದ್ದ ಶಂಕಿತ ಅರೆಸ್ಟ್
ಜಮ್ಮು ಕಾಶ್ಮೀರದ ಪಹಲ್ಗಾಂನಲ್ಲಿ ಕಳೆದ ಏಪ್ರಿಲ್ 22ರಂದು ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ಇಡೀ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಭದ್ರತಾ ಪಡೆಗಳು ಉಗ್ರರಿಗಾಗಿ ಶೋಧ ನಡೆಸುತ್ತಿದ್ದಾರೆ. ಇದೀಗ ಘಟನೆ ನಡೆದ ಸ್ಥಳದಲ್ಲಿ ಬುಲೆಟ್ ಪ್ರೂಫ್ ಜಾಕೆಟ್ ಧರಿಸಿ ಶಂಕಿತನೊಬ್ಬ ಓಡಾಡುತ್ತಿದ್ದ ಎಂದು ತಿಳಿದು ಬಂದಿದೆ.


ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಂನಲ್ಲಿ (Pahalgam Terror Attack) ಕಳೆದ ಏಪ್ರಿಲ್ 22ರಂದು ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ಇಡೀ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಭದ್ರತಾ ಪಡೆಗಳು ಉಗ್ರರಿಗಾಗಿ ಶೋಧ ನಡೆಸುತ್ತಿದ್ದಾರೆ. ಇದೀಗ ಘಟನೆ ನಡೆದ ಸ್ಥಳದಲ್ಲಿ ಬುಲೆಟ್ ಪ್ರೂಫ್ ಜಾಕೆಟ್ ಧರಿಸಿ ಶಂಕಿತನೊಬ್ಬ ಓಡಾಡುತ್ತಿದ್ದ. ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪಹಲ್ಗಾಮ್ ದಾಳಿಯ ತನಿಖೆಯನ್ನು ಎನ್‌ಐಎ ಅಧಿಕಾರಿಗಳು ವಹಿಸಿಕೊಂಡಿದ್ದಾರೆ. ಉಗ್ರರ ಜಾಡು ಹಿಡಿದು ಹೊರಟಿರುವ ತನಿಖಾಧಿಕಾರಿಗಳಿಗೆ ಮಹತ್ವದ ಸುಳಿವುಗಳು ದೊರಕುತ್ತಿವೆ.
ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ನಡೆದ ನಾಕಾ-ತಪಾಸಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕ ಸಂಘಟನೆಗೆ (Terrorist Arrest) ಸಹಾಯಕಾಗಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರನ್ನು ಬಂಧಿಸಿವೆ. ಶಂಕಿತರಿಂದ ಒಂದು ಪಿಸ್ತೂಲ್, ಒಂದು ಗ್ರೆನೇಡ್ ಮತ್ತು 15 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.ಕಾಶ್ಮೀರದ ಸುತ್ತಮುತ್ತಲಿನ ಪ್ರದೇಶವನ್ನು ಸೇನೆ ಸುತ್ತವರಿದಿದ್ದು, ಉಗ್ರರಿಗಾಗಿ ಶೋಧ ನಡೆಸಲಾಗುತ್ತಿದೆ. ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್ ನಡೆಸುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದೆ.
ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಲೇ ಇದೆ. ಇದೀಗ ಪಾಕಿಸ್ತಾನಿ ಪ್ರಜೆಯೊಬ್ಬನನ್ನು (Pak Citizen Arrested) ಭಾರತೀಯ ಭದ್ರತಾ ಪಡೆಗಳು ಬಂಧಿಸಿವೆ. ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಭಾರತೀಯ ಸೇನೆಯು ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಇದಕ್ಕೂ ಮೊದಲು, ಪಾಕಿಸ್ತಾನದ ಗಡಿಯನ್ನು ಅಜಾಗರೂಕತೆಯಿಂದ ದಾಟಿದ್ದಕ್ಕಾಗಿ ಬಿಎಸ್‌ಎಫ್ ಕಾನ್‌ಸ್ಟೆಬಲ್‌ನನ್ನು ಪಾಕಿಸ್ತಾನ ವಶಕ್ಕೆ ಪಡೆದ ಕೆಲವು ದಿನಗಳ ನಂತರ, ರಾಜಸ್ಥಾನದಲ್ಲಿ ಪಾಕಿಸ್ತಾನಿ ರೇಂಜರ್‌ನನ್ನು ಬಂಧಿಸಲಾಗಿತ್ತು.
ಈ ಸುದ್ದಿಯನ್ನೂ ಓದಿ: Madhuri Dixit: ಪಾಕಿಸ್ತಾನ ಯುದ್ಧ ಗೆದ್ದರೆ ಮಾಧುರಿ ದೀಕ್ಷಿತ್ ನಮ್ಮವಳು; ಮೌಲ್ವಿಯ ವಿವಾದಾತ್ಮಕ ಹೇಳಿಕೆ ವೈರಲ್
ಏತನ್ಮಧ್ಯೆ LoC ಅಲ್ಲಿ ಪಾಕಿಸ್ತಾನದ ಸೇನೆ ಸತತ 12 ನೇ ದಿನವೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಪೂಂಚ್, ರಾಜೌರಿ, ಮೆಂಧರ್, ನೌಶೇರಾ, ಸುಂದರ್‌ಬಾನಿ ಮತ್ತು ಅಖ್ನೂರ್‌ಗಳ ಎದುರಿನ ಪ್ರದೇಶಗಳಲ್ಲಿ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿಗೆ ಭಾರತೀಯ ಸೇನೆ ಸೂಕ್ತ ಪ್ರತಿಕ್ರಿಯೆ ನೀಡಿದೆ.