ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Terrorist Arrest: ಭಾರೀ ಗುಂಡಿನ ಚಕಮಕಿ- ಮೂವರು ಉಗ್ರರು ಟ್ರ್ಯಾಪ್

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಸಿಂಗ್‌ಪೋರಾ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. 3 ರಿಂದ 4 ಭಯೋತ್ಪಾದಕರಿರುವ ಗುಂಪೊಂದು ಭದ್ರತಾ ಪಡೆಗಳ ಕೈಗೆ ಸಿಕ್ಕಿ ಬಿದ್ದಿದೆ ಎಂದು ತಿಳಿದು ಬಂದಿದೆ.

ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ-ಉಗ್ರರು ಸೆರೆ

Profile Vishakha Bhat May 22, 2025 8:31 AM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಸಿಂಗ್‌ಪೋರಾ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಭದ್ರತಾ ಪಡೆ ಮತ್ತು ಭಯೋತ್ಪಾದಕರ (Terrorist Encounter) ನಡುವೆ ಗುಂಡಿನ ಚಕಮಕಿ ನಡೆದಿದೆ. 3 ರಿಂದ 4 ಭಯೋತ್ಪಾದಕರಿರುವ ಗುಂಪೊಂದು ಭದ್ರತಾ ಪಡೆಗಳ ಕೈಗೆ ಸಿಕ್ಕಿ ಬಿದ್ದಿದೆ ಎಂದು ತಿಳಿದು ಬಂದಿದೆ. ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಮುಂದುವರಿಯುತ್ತಿದೆ. ಭದ್ರತಾ ಪಡೆಗಳು ಸುತ್ತಲಿನ ಪ್ರದೇಶವನ್ನು ಸುತ್ತುವರಿದಿವೆ ಎಂದು ಹೇಳಲಾಗಿದೆ.

ಏಪ್ರಿಲ್ 22 ರ ಪಹಲ್ಗಾಮ್ ದಾಳಿಯ ನಂತರ ಭದ್ರತಾ ಪಡೆಗಳು ತಮ್ಮ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ದಕ್ಷಿಣ ಕಾಶ್ಮೀರದಾದ್ಯಂತ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮಂಗಳವಾರ ಶೋಪಿಯಾನ್‌ನ ಜಿನ್‌ಪಥರ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಲಷ್ಕರ್-ಎ-ತೈಬಾ ಭಯೋತ್ಪಾದಕರು ಹತನಾಗಿದ್ದಾರೆ ಎಂದು ತಿಳಿದು ಬಂದಿದೆ. ಇತರ ಇಬ್ಬರು ಲಷ್ಕರ್ ಭಯೋತ್ಪಾದಕರನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದೆ.

ಈ ಸುದ್ದಿಯನ್ನೂ ಓದಿ:Operation Sindoor: ಉಗ್ರರ ನೆಲೆ ಸಂಹಾರಕ್ಕೆ ಭಾರತೀಯ ಸೇನೆ ತೆಗೆದುಕೊಂಡಿದ್ದು ಕೇವಲ ಬ್ರೇಕ್‌ಫಾಸ್ಟ್‌ ಸಮಯವಷ್ಟೇ; ರಾಜನಾಥ್ ಸಿಂಗ್

ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಕೈವಾಡವಿದೆ ಎಂದು ನಂಬಲಾದ ಮೂವರು ಪಾಕಿಸ್ತಾನಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್, ಅಲಿ ಭಾಯ್ ಮತ್ತು ಹಾಶಿಮ್ ಮೂಸಾ ಅವರ 'ಭಯೋತ್ಪಾದಕ ಮುಕ್ತ ಕಾಶ್ಮೀರ' ಪೋಸ್ಟರ್‌ಗಳನ್ನು ಭದ್ರತಾ ಸಂಸ್ಥೆಗಳು ಹಾಕಿದ ಕೆಲವೇ ಕ್ಷಣಗಳ ನಂತರ ಈ ಬೆಳವಣಿಗೆ ನಡೆದಿದೆ .