ಬಾಂಬ್ ದಾಳಿಗೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನ ಸಾವು
ಬಾಂಬ್ ದಾಳಿಗೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನ ಸಾವು
-
Vishwavani News
Feb 24, 2021 11:43 AM
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಬಾಂಬ್ ದಾಳಿಯಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟು, ಮೂವರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ. ಬಾಂಬ್ ದಾಳಿಯಲ್ಲಿ ಮೃತರನ್ನು ಸೌವಿಕ್ ದೊಲೈ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಮಿಡ್ನಾಪುರದ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸ ಲಾಗಿದೆ.
ನಾಲ್ವರು ಕಾರ್ಯಕರ್ತರು ಮಕ್ರಾಂಪುರದಲ್ಲಿ ರಾತ್ರಿ ರಸ್ತೆ ಬದಿ ಮಾತನಾಡುತ್ತಾ ನಿಂತಿದ್ದ ಸಂದರ್ಭ ಬೈಕ್‌ನಲ್ಲಿ ಬಂದ ದುಷ್ಕರ್ಮಿ ಗಳು ಬಾಂಬ್ ಎಸೆದಿದ್ದಾರೆ. ಓಡಲು ನೋಡಿದ ದೊಲೈ ಮೇಲೆ ಗುಂಡು ಹಾರಿಸಿದ್ದಾರೆ.
ನಾವು ಹಿಂದಿನ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಉತ್ತಮ ಮತಗಳನ್ನು ಪಡೆದಿದ್ದೆವು. ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರು ವುದರಿಂದ ನಮ್ಮನ್ನು ಗೆಲುವಿನಿಂದ ತಡೆಯಲು ಈ ರೀತಿ ಮಾಡಲಾಗಿದೆ. ಇದು ಬಿಜೆಪಿಯದ್ದೇ ಕೆಲಸ ಎಂದು ಟಿಎಂಸಿ ಜಿಲ್ಲಾ ಅಧ್ಯಕ್ಷ ಅಜಿತ್ ಮೈಟಿ ಆರೋಪಿಸಿದ್ದಾರೆ.
ಇದೇ ಏಪ್ರಿಲ್- ಮೇ ತಿಂಗಳಿನಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ತೃಣಮೂಲ ಹಾಗೂ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯ ಬಿರುಸಿನಿಂದ ನಡೆಯುತ್ತಿದೆ.