Colonel Sofiya Qureshi: ಹೋಗಿ ಕ್ಷಮೆಯಾಚಿಸಿ.... ಸೋಫಿಯಾ ಖುರೇಷಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಸಚಿವನಿಗೆ ಸುಪ್ರೀಂ ಕೋರ್ಟ್ ಫುಲ್ ಕ್ಲಾಸ್
Supreme Court slams over Sofiya Qureshi Remark:ಸೋಫಿಯಾ ಖುರೇಷಿ ವಿರುದ್ಧ ಅವಹೇಳನಾಕಾರಿ ಹೇಳಿಕೆಗೆ ವಿಚಾರಕ್ಕೆ ಸಂಬಂಧಿಸಿದಂತೆ ಬಂಧನದಿಂದ ರಕ್ಷಣೆ ಕೋರಿ ಸಚಿವ ವಿಜಯ್ ಶಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಇದ್ದ ನ್ಯಾಯಪೀಠ, ಒಬ್ಬರ ಬಗ್ಗೆ ಹೇಳಿಕೆ ನೀಡುವಾಗ ಸ್ವಲ್ಪ ಸೂಕ್ಷ್ಮತೆ ತೋರಬೇಕು. ಈ ರೀತಿಯ ಹೇಳಿಕೆ ನೀಡಲು ಹೇಗೆ ಸಾಧ್ಯ? ಇದು ಸ್ವೀಕಾರಾರ್ಹವಲ್ಲ. ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಗಳು ಇಂತಹ ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ ಎಂದು ಹೇಳುವ ಮೂಲಕ ಶಾ ಅವರ ಅರ್ಜಿಯನ್ನು ತಿರಸ್ಕರಿಸಿದೆ.


ನವದೆಹಲಿ: ಆಪರೇಷನ್ ಸಿಂದೂರ್ ಬಳಿಕ ಮಾಧ್ಯಮಗೋಷ್ಟಿ ಸಾರಥ್ಯ ವಹಿಸಿದ್ದ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ(Colonel Sofiya Qureshi)ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶ ಸಚಿವ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸಚಿವರ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಬೇಷರತ್ತು ಕ್ಷಮೆಯಾಚಿಸಬೇಕೆಂದು ಖಡಕ್ ಸೂಚನೆ ನೀಡಿದೆ.
ಸೋಫಿಯಾ ಖುರೇಷಿ ವಿರುದ್ಧ ಅವಹೇಳನಾಕಾರಿ ಹೇಳಿಕೆಗೆ ವಿಚಾರಕ್ಕೆ ಸಂಬಂಧಿಸಿದಂತೆ ಬಂಧನದಿಂದ ರಕ್ಷಣೆ ಕೋರಿ ಸಚಿವ ವಿಜಯ್ ಶಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಇದ್ದ ನ್ಯಾಯಪೀಠ, ಒಬ್ಬರ ಬಗ್ಗೆ ಹೇಳಿಕೆ ನೀಡುವಾಗ ಸ್ವಲ್ಪ ಸೂಕ್ಷ್ಮತೆ ತೋರಬೇಕು. ಈ ರೀತಿಯ ಹೇಳಿಕೆ ನೀಡಲು ಹೇಗೆ ಸಾಧ್ಯ? ಇದು ಸ್ವೀಕಾರಾರ್ಹವಲ್ಲ. ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಗಳು ಇಂತಹ ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ ಎಂದು ಹೇಳುವ ಮೂಲಕ ಶಾ ಅವರ ಅರ್ಜಿಯನ್ನು ತಿರಸ್ಕರಿಸಿದೆ.
ಈ ಸುದ್ದಿಯನ್ನೂ ಓದಿ: Sofia Qureshi: ಕರ್ನಲ್ ಸೋಫಿಯಾ ಖುರೇಷಿ ಮನೆ ಮೇಲೆ RSS ದಾಳಿ ಎಂದು ಫೇಕ್ ಪೋಸ್ಟ್; ಕಿಡಿಗೇಡಿ ಅನೀಸ್ ಸ್ಥಳ ಪತ್ತೆ
ಏನಿದು ವಿವಾದ?
ಮಹೌನಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿಜಯ್ ಶಾ, ಉಗ್ರರು ಭೀಕರ ದಾಳಿ ಮಾಡುವ ಮಾಡುವ ಮೂಲಕ ನಮ್ಮ ಹೆಣ್ಣು ಮಕ್ಕಳ ಕುಂಕುಮ ಅಳಿಸಿದ್ದರು. ನಾವು ಅವರ ಸಹೋದರಿಯನ್ನೇ ಪಾಠ ಕಲಿಸು ಕಳುಹಿಸಿದೆವು. ಅವರು ಹಿಂದೂಗಳನ್ನು ವಿವಸ್ತ್ರಗೊಳಿಸಿ ಕೊಂದರು. ಇದಕ್ಕೆ ಪ್ರತಿಯಾಗಿ ಮೋದಿ ಜಿ ಅವರ ಸಹೋದರಿಯನ್ನೇ ಕಳುಹಿಸಿದರು. ನಮ್ಮ ಸಮುದಾಯದ ಸಹೋದರಿಯರನ್ನು ವಿಧವೆಯರನ್ನಾಗಿ ಮಾಡಿದರೆ, ನಿಮ್ಮ ಸಮುದಾಯದ ಸಹೋದರಿ ನಿಮ್ಮನ್ನು ವಿವಸ್ತ್ರಗೊಳಿಸುತ್ತಾರೆ ಎಂಬ ಸಂದೇಶವನ್ನು ಕಳುಹಿಸಲು ಮೋದಿ ಉಗ್ರರ ಸಮುದಾಯದ ಸಹೋದರಿಯನ್ನೇ ಕಳುಹಿಸಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸಾವಿತ್ರಿ ಠಾಕೂರ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ನಾಯಕರು ವೇದಿಕೆಯಲ್ಲಿದ್ದರು ಎಂದು ವರದಿಗಳು ತಿಳಿಸಿವೆ.
ಇದರ ಬೆನ್ನಲ್ಲೇ ಶಾ ಹೇಳಿಕೆಗೆ ವಿರೋಧ ಪಕ್ಷಗಳು, ನಿವೃತ ಸೇನಾಧಿಕಾರಿಗಳು ಮತ್ತು ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೆಲವು ಸದಸ್ಯರಿಂದ ವ್ಯಾಪಕ ಟೀಕೆಗೆ ವ್ಯಕ್ತವಾಗಿತ್ತು. ಇದಾದ ಬಳಿಕ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಲಾಯಿತು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಹೈಕೋರ್ಟ್ ಕೂಡ ನಿರ್ದೇಶನ ನೀಡಿತ್ತು.