ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹೊಸೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ದುರಂತ: ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ

ಹೊಸೂರು ಸಮೀಪದ ಸಿಪ್‌ಕಾಟ್ (SIPCOT) ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣ ಹಂತದ ಕಾಂಕ್ರೀಟ್ ಕಟ್ಟಡದ ಕಮಾನು ಛಾವಣಿ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಹೊಸೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ದುರಂತ: ಮೂವರು ಕಾರ್ಮಿಕರು ಸಾವು

ಹೊಸೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ದುರಂತ -

Vishakha Bhat Heggar
Vishakha Bhat Heggar Nov 6, 2026 1:40 PM

ಚೆನ್ನೈ: ಹೊಸೂರು ಸಮೀಪದ ಸಿಪ್‌ಕಾಟ್ (SIPCOT) ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣ ಹಂತದ ಕಾಂಕ್ರೀಟ್ ಕಟ್ಟಡದ ಕಮಾನು (Building Collapses In Hosuru) ಛಾವಣಿ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ವ್ಯಾಪ್ತಿಯ ಬೇಡರಪಳ್ಳಿ (ವೇದರಪಳ್ಳಿ) ಎಂಬಲ್ಲಿ ಈ ಭೀಕರ ದುರಂತ ಸಂಭವಿಸಿದೆ.

ಖಾಸಗಿ ಆಟೋಮೊಬೈಲ್ ಬಿಡಿಭಾಗಗಳ ತಯಾರಿಕಾ ಕಾರ್ಖಾನೆಯೊಂದರ (ಎಕ್ಸೆಲ್ ಆಟೋ ಪ್ರಾಡಕ್ಟ್ಸ್) ಪ್ರವೇಶ ದ್ವಾರದಲ್ಲಿ ಭದ್ರತಾ ಕೊಠಡಿ ಹಾಗೂ ಕಮಾನು ಆಕಾರದ ಕಾಂಕ್ರೀಟ್ ಛಾವಣಿ ನಿರ್ಮಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ಸುಮಾರು 17 ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು. ಕಾಂಕ್ರೀಟ್ ಹಾಕುವ ಪ್ರಕ್ರಿಯೆಯಲ್ಲಿದ್ದಾಗ ಛಾವಣಿಗೆ ಆಸರೆಯಾಗಿ ನೀಡಲಾಗಿದ್ದ ಸಪೋರ್ಟಿಂಗ್ ಜ್ಯಾಕ್ ಇದ್ದಕ್ಕಿದ್ದಂತೆ ಜಾರಿದ್ದರಿಂದ ಇಡೀ ಕಾಂಕ್ರೀಟ್ ಮೇಲಾವಣಿ ಮತ್ತು ಕಬ್ಬಿಣದ ಸರಳುಗಳು ಕಾರ್ಮಿಕರ ಮೇಲೆ ಕುಸಿದು ಬಿದ್ದಿವೆ.

ದುರಂತದಲ್ಲಿ ಹೊಸೂರಿನ ಶ್ರೀನಿವಾಸನ್ (26), ತಿರುಪತ್ತೂರಿನ ಕುಮರೇಸನ್ (35) ಮತ್ತು ತಿರುವಣ್ಣಾಮಲೈನ ಮೈಕೆಲ್ (26) ಎಂಬ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಗಣೇಶ್ (39), ರಾಜು ನಾಯಕ್ (28), ರೋಹಿತ್ (25) ಮತ್ತು ಮೂರ್ತಿ (35) ಎಂಬ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹೊಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಮಿಳುನಾಡು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿಯಿಂದ ತಲಾ 8 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಿಸಿದೆ.

ದೆಹಲಿ ಚಾವರಿ ಬಜಾರ್‌ನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹಾಗೂ ಕೃಷ್ಣಗಿರಿ ಜಿಲ್ಲಾಧಿಕಾರಿ ಸಿ. ದಿನೇಶ್‌ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳಪೆ ನಿರ್ಮಾಣ ಕಾಮಗಾರಿ ಹಾಗೂ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಎಂಜಿನಿಯರ್ ಮತ್ತು ಮೇಲ್ವಿಚಾರಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.