ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಯನಾಡಿನಲ್ಲಿ ಮತ್ತೆ ಮುನಿದ ಪ್ರಕೃತಿ: ನಿರಂತರ ಮಳೆಯಿಂದ ಭೂಕುಸಿತ, ಇಬ್ಬರು ಸಾವು; ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

Landslide in Keralam: ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ಕೇರಳಂನ ವಯನಾಡ್ ಜಿಲ್ಲೆಯಲ್ಲಿ ನಡೆದಿದೆ. ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಅನಕ್ಕೊಂಪೊಯಿಲ್-ಮೆಪ್ಪಾಡಿ ಸುರಂಗ ರಸ್ತೆ ಯೋಜನೆಯ ಸ್ಥಳದ ಸಮೀಪವಿರುವ ಕಲ್ಲಡಿಯ ಮೀನಾಕ್ಷಿ ಸೇತುವೆಯ ಬಳಿ ಭೂಕುಸಿತ ಸಂಭವಿಸಿದೆ. 2024ರಲ್ಲಿ ಭೂಕುಸಿತ ಸಂಭವಿಸಿದ ಮುಂಡಕ್ಕೈ ಸಮೀಪವೇ ಈ ದುರ್ಘಟನೆ ನಡೆದಿದೆ.

ಭಾರಿ ಮಳೆಯಿಂದ ವಯನಾಡಿನಲ್ಲಿ ಭೂಕುಸಿತ, ಇಬ್ಬರ ಸಾವು

ನಿರಂತರ ಮಳೆಯಿಂದ ವಯನಾಡಿನಲ್ಲಿ ಭೂಕುಸಿತ -

Priyanka P
Priyanka P Jul 7, 2026 2:47 PM

ತಿರುವನಂತಪುರಂ, ಜು. 7: ನಿರಂತರ ಮಳೆಯಿಂದಾಗಿ ಸಂಭವಿಸಿದ ಭಾರಿ ಭೂಕುಸಿತದಲ್ಲಿ (Landslide) ಇಬ್ಬರು ಮೃತಪಟ್ಟಿರುವ ದುರ್ಘಟನೆ ಕೇರಳಂನ (Keralam) ವಯನಾಡ್ ಜಿಲ್ಲೆಯಲ್ಲಿ ನಡೆದಿದೆ. ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದು, ಈಗಾಗಲೇ ಭಾರಿ ಪ್ರಮಾಣದ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಅನಕ್ಕೊಂಪೊಯಿಲ್-ಮೆಪ್ಪಾಡಿ ಸುರಂಗ ರಸ್ತೆ ಯೋಜನೆಯ ಸ್ಥಳದ ಸಮೀಪವಿರುವ ಕಲ್ಲಡಿಯ ಮೀನಾಕ್ಷಿ ಸೇತುವೆಯ ಬಳಿ ಭೂಕುಸಿತ ಸಂಭವಿಸಿದೆ. ಘಟನೆ ನಡೆದಾಗ ನಿರ್ಮಾಣ ಕಾರ್ಮಿಕರು ಆ ಪ್ರದೇಶದಲ್ಲಿದ್ದರು ಎನ್ನಲಾಗಿದೆ.

ಸ್ಥಳೀಯ ನಿವಾಸಿಗಳು ತಕ್ಷಣವೇ ಸಹಾಯ ಮಾಡಲು ಮತ್ತು ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆತರಲು ಧಾವಿಸಿದರು. ಪ್ರಸ್ತುತ ಸುಮಾರು 10 ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳು ಸಹ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಗಿದೆ ಮತ್ತು 30 ಎನ್‌ಡಿಆರ್‌ಎಫ್ ಸಿಬ್ಬಂದಿ ತಂಡ ಸ್ಥಳಕ್ಕೆ ತಲುಪಿದೆ ಎಂದು ಕೇರಳಂ ಕಂದಾಯ ಸಚಿವ ಎ.ಪಿ. ಅನಿಲ್ ಕುಮಾರ್ ಹೇಳಿದ್ದಾರೆ.

ಇಲ್ಲಿದೆ ವಿಡಿಯೊ:





ಕಳೆದ 24 ಗಂಟೆಗಳಲ್ಲಿ ಈ ಪ್ರದೇಶದಲ್ಲಿ 265 ಮಿ.ಮೀ. ಮಳೆಯಾಗಿದ್ದು, ನಿರಂತರ ವರ್ಷಧಾರೆಯಿಂದಾಗಿ ಭೂಕುಸಿತ ಸಂಭವಿಸಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಸುರಂಗ ಯೋಜನೆಯ ಕಾರ್ಮಿಕರನ್ನು ಸಾಗಿಸಲು ಬಳಸಲಾಗಿದ್ದ ಕೆಲವು ವಾಹನಗಳು ಹಾನಿಗೊಳಗಾಗಿವೆ. ಹಲವು ಮನೆಗಳು ಮತ್ತು ಚರ್ಚ್‌ ಮಣ್ಣಿನಡಿಯಲ್ಲಿ ಹೂತು ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ, 51ಕ್ಕೂ ಅಧಿಕ ಮಂದಿ ಸಾವು

ಮುಖ್ಯಮಂತ್ರಿ ತುರ್ತು ಸಭೆ

ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ ನಂತರ ಕೇರಳಂ ಮುಖ್ಯಮಂತ್ರಿ ವಿ.ಡಿ. ಸತೀಶನ್ ಮಂಗಳವಾರ ಕೃಷಿ ಸಚಿವ ಟಿ. ಸಿದ್ದಿಕ್ ಅವರೊಂದಿಗೆ ತುರ್ತು ಸಭೆ ಕರೆದಿದ್ದಾರೆ. ಸಭೆಯ ನಂತರ, ಮುಖ್ಯಮಂತ್ರಿ ಅಧಿಕಾರಿಗಳಿಗೆ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಸಚಿವರಾದ ಎ.ಪಿ. ಅನಿಲ್ ಕುಮಾರ್ ಮತ್ತು ಸಚಿವ ಸಿದ್ದಿಕ್ ಅವರಿಗೆ ತಕ್ಷಣವೇ ಜಿಲ್ಲೆಗೆ ತೆರಳಿ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆ ನಡೆಸುವಂತೆ ಅವರು ಸೂಚಿಸಿದರು. ಈ ನಡುವೆ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತವು ಮಾನವ ನಿರ್ಮಿತ ಮತ್ತು ನಿರ್ಲಕ್ಷ್ಯದ ಪರಿಣಾಮದಿಂದ ಸಂಭವಿಸಿದೆ ಎಂದು ಸಿದ್ದಿಕ್ ಆರೋಪಿಸಿದ್ದಾರೆ. ಅಧಿಕಾರಿಗಳು ಈ ಸ್ಥಳದಲ್ಲಿ ಭೂಕುಸಿತದ ಅಪಾಯದ ಬಗ್ಗೆ ಕೊಂಕಣ ರೈಲ್ವೆ ಇಲಾಖೆಗೆ ಮೊದಲೇ ಎಚ್ಚರಿಕೆ ನೀಡಿದ್ದರು ಎಂದು ಹೇಳಿದ್ದಾರೆ.

ಇನ್ನು ಗಾಯಗೊಂಡ ಆರು ಜನರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಮಾಹಿತಿ ನೀಡಿದರು. ರೈಲ್ವೆಯು ಪೂರ್ವ ಎಚ್ಚರಿಕೆಗಳ ಹೊರತಾಗಿಯೂ ಕ್ರಮ ಕೈಗೊಳ್ಳಲು ವಿಫಲವಾಗಿವೆ ಎಂದು ಆರೋಪಿಸಿದರು. ಎರಡು ವರ್ಷಗಳ ಹಿಂದೆ ಮುಂಡಕ್ಕೈನಲ್ಲಿ ಸಂಭವಿಸಿದ ಭೂಕುಸಿತದಲ್ಲಿ 298 ಜನರು ಪ್ರಾಣ ಕಳೆದುಕೊಂಡ 2 ವರ್ಷಗಳ ಬಳಿಕ ಈ ದುರಂತ ಸಂಭವಿಸಿದೆ.

ಅಂದಹಾಗೆ, ವಯನಾಡಿನಲ್ಲಿ ಈ ಹಿಂದೆ ಹಲವು ಬಾರಿ ಭೂಕುಸಿತಗಳು ಸಂಭವಿಸಿದ್ದು, ಕಳೆದ ದಶಕಗಳಲ್ಲಿ ಜಿಲ್ಲೆಯು ಹಲವಾರು ಭೀಕರ ಘಟನೆಗಳಿಗೆ ಸಾಕ್ಷಿಯಾಗಿದೆ. 2024ರ ಜುಲೈ 30ರಂದು ವಯನಾಡಿನಲ್ಲಿ ಭಾರಿ ಭೂಕುಸಿತ ಸಂಭವಿಸಿತ್ತು. ಬೆಳಗಿನ ಜಾವ 1:30ರಿಂದ ಬೆಳಗಿನ 4ರ ನಡುವೆ ಭೂಕುಸಿತ ಸಂಭವಿಸಿದಾಗ ಸಂತ್ರಸ್ತರು ನಿದ್ರಿಸುತ್ತಿದ್ದರು. ಈ ದುರಂತದಲ್ಲಿ ಈ ದುರಂತದಲ್ಲಿ 298 ಜನರು ಮೃತಪಟ್ಟರು.