Naxal Encounter: ಛತ್ತೀಸ್‌ಗಢದಲ್ಲಿ ಮುಂದುವರಿದ ನಕ್ಸಲರ ಬೇಟೆ; ಇಬ್ಬರ ಎನ್‌ಕೌಂಟರ್
ಛತ್ತೀಸ್‌ಗಢದ ಬಿಜಾಪುರದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ (Chhattisgarh) ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ಶೋಧ ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಗರಿಯಾಬಾದ್ ಜಿಲ್ಲೆಯ ದಟ್ಟ ಕಾಡಿನಲ್ಲಿ ಈ ಕಾರ್ಯಾಚರಣೆ ನಡೆದಿದೆ.

-

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರದಲ್ಲಿ (Bijapur) ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ಶೋಧ (Naxal Encounter) ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ತೆಲಂಗಾಣದ ಗಡಿಯಲ್ಲಿರುವ ಜಿಲ್ಲೆಯ ನೈಋತ್ಯ ಪ್ರದೇಶದ ಅರಣ್ಯದಲ್ಲಿ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಯ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಬಿಜಾಪುರ ಎಸ್‌ಪಿ ಜಿತೇಂದ್ರ ಯಾದವ್ ಹೇಳಿದ್ದಾರೆ.
ಕಾರ್ಯಾಚರಣೆಯ ಬಳಿಕ ಇಬ್ಬರು ನಕ್ಸಲರ ಮೃತದೇಹಗಳು ಹಾಗೂ 303 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಎನ್‌ಕೌಂಟರ್ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಗುರುವಾರ, ರಾಜ್ಯದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಕೇಂದ್ರ ಸಮಿತಿ ಸದಸ್ಯ ಮೋಡೆಮ್ ಬಾಲಕೃಷ್ಣ ಸೇರಿದಂತೆ ಹತ್ತು ನಕ್ಸಲರನ್ನು ಹೊಡೆದುರುಳಿಸಲಾಗಿತ್ತು.
ಗರಿಯಾಬಾದ್ ಜಿಲ್ಲೆಯ ದಟ್ಟ ಕಾಡಿನಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ತೀವ್ರ ಕದನದಲ್ಲಿ ಅವರ ಹಿರಿಯ ನಾಯಕ ಸೇರಿದಂತೆ ಕನಿಷ್ಠ 10 ಶಂಕಿತ ನಕ್ಸಲರು ಹತರಾಗುವ ಮೂಲಕ ಭದ್ರತಾ ಸಿಬ್ಬಂದಿಗೆ ದೊರೆತ ಪ್ರಮುಖ ವಿಜಯವಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
''ಗುರುವಾರ ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು. ಈ ಸಂದರ್ಭದಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ 10 ಶಂಕಿತ ನಕ್ಸಲರು ಹತರಾಗಿದ್ದಾರೆ. ವಿಶೇಷ ಕಾರ್ಯಪಡೆ (ಎಸ್‌ಟಿಎಫ್), ಕೋಬ್ರಾ ಮತ್ತು ರಾಜ್ಯ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಗುಂಡಿನ ದಾಳಿ ಇನ್ನೂ ಮುಂದುವರೆದಿದೆ. ಮೃತರಲ್ಲಿ ಒಡಿಶಾ ರಾಜ್ಯ ಸಮಿತಿ ಸದಸ್ಯ ಪ್ರಮೋದ್ ಯಾರಫ್ ಪಾಂಡು ಕೂಡ ಸೇರಿದ್ದಾರೆ ಎಂಬ ಮಾಹಿತಿ ಇದೆ. ಪೊಲೀಸರು ಶವಗಳ ಜೊತೆಗೆ ಸ್ಥಳದಿಂದ ಹೆಚ್ಚಿನ ಸಂಖ್ಯೆಯ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ'' ಎಂದು ಐಜಿಪಿ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳಿಂದ ಗುಂಡಿನ ದಾಳಿ, ಹತ್ತು ನಕ್ಸಲರ ಹತ್ಯೆ
“ನಕ್ಸಲ್ ನಾಯಕರು ನೀರು, ಅರಣ್ಯ ಮತ್ತು ಭೂಮಿ, ಸಮಾನತೆ ಮತ್ತು ನ್ಯಾಯವನ್ನು ರಕ್ಷಿಸುವ ಸುಳ್ಳು ಭರವಸೆಗಳೊಂದಿಗೆ ಸ್ಥಳೀಯರನ್ನು ದಾರಿ ತಪ್ಪಿಸುತ್ತಾರೆ. ಅವರ ಮೇಲೆ ಶೋಷಣೆ ಮಾಡುತ್ತಾರೆ. ಸ್ಥಳೀಯ ಕಾರ್ಯಕರ್ತರು ತೀವ್ರ ಶೋಷಣೆಯನ್ನು ಎದುರಿಸುತ್ತಿದ್ದಾರೆ ಮತ್ತು ಮಹಿಳಾ ಮಾವೋವಾದಿಗಳ ಸ್ಥಿತಿ ಇನ್ನೂ ಕೆಟ್ಟದಾಗಿದೆ” ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.