ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Train Accident: ಲೋಕೋ - ಗೂಡ್ಸ್‌ ರೈಲು ಪರಸ್ಪರ ಡಿಕ್ಕಿ: 60ಕ್ಕೂ ಅಧಿಕ ಮಂದಿಗೆ ಗಾಯ

ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಢ್-ಪಿಪಲ್ಕೋಟಿ ಜಲ ವಿದ್ಯುತ್ ಯೋಜನೆಯ ಸುರಂಗದ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಸುಮಾರು 60 ಜನರು ಗಾಯಗೊಂಡಿದ್ದಾರೆ.

ಎರಡು ರೈಲುಗಳು ಪರಸ್ಪರ  ಡಿಕ್ಕಿ: 60ಕ್ಕೂ ಅಧಿಕ ಮಂದಿಗೆ ಗಾಯ

ಸಂಗ್ರಹ ಚಿತ್ರ -

Vishakha Bhat
Vishakha Bhat Dec 31, 2025 8:59 AM

ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಢ್-ಪಿಪಲ್ಕೋಟಿ ಜಲ ವಿದ್ಯುತ್ ಯೋಜನೆಯ ಸುರಂಗದ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಸುಮಾರು 60 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ಸಮಯದಲ್ಲಿ ರೈಲಿನಲ್ಲಿ ಒಟ್ಟು 109 ಜನರಿದ್ದರು ಮತ್ತು ಅವರಲ್ಲಿ 60 ಜನರು ಗಾಯಗೊಂಡಿದ್ದಾರೆ ಎಂದು ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರವ್ ಕುಮಾರ್ ತಿಳಿಸಿದ್ದಾರೆ.

ಗಾಯಾಳುಗಳನ್ನು ರಕ್ಷಿಸಲಾಗಿದ್ದು, ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಗೌರವ್ ಕುಮಾರ್ ತಿಳಿಸಿದ್ದಾರೆ. ಟಿಎಚ್‌ಡಿಸಿ (ಭಾರತ) ನಿರ್ಮಿಸುತ್ತಿರುವ ಯೋಜನೆಯ ಪಿಪಲ್‌ಕೋಟಿ ಸುರಂಗದೊಳಗೆ ಜನರನ್ನು ಸಾಗಿಸುವ ಒಂದು ರೈಲು ಮತ್ತು ಸಾಮಗ್ರಿಗಳನ್ನು ಸಾಗಿಸುವ ಇನ್ನೊಂದು ರೈಲು ಡಿಕ್ಕಿ ಹೊಡೆದಿದೆ. ಅಧಿಕಾರಿಗಳ ಪ್ರಕಾರ, ಲೋಕೋ ರೈಲುಗಳನ್ನು ಸುರಂಗಗಳ ಒಳಗೆ ಕಾರ್ಮಿಕರು, ಅಧಿಕಾರಿಗಳು ಮತ್ತು ನಿರ್ಮಾಣ ಕಾರ್ಯಗಳಿಗೆ ಬೇಕಾದ ಸಾಮಗ್ರಿಗಳನ್ನು ಸಾಗಿಸಲು ಬಳಸಲಾಗುತ್ತಿತ್ತು. ಗಾಯಗೊಂಡ 10 ಜನರನ್ನು ಚಿಕಿತ್ಸೆಗಾಗಿ ಗೋಪೇಶ್ವರದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಚಮೋಲಿಯ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.

ಪ್ರತ್ಯೇಕ ಘಟನೆಯಲ್ಲಿ ವಿಶಾಖಪಟ್ಟಣಂ-ದುವ್ವಾಡ ಮೂಲಕ ಎರ್ನಾಕುಲಂಗೆ ಹೋಗುತ್ತಿದ್ದ ಟಾಟಾನಗರ್-ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಡಿ. 29 ಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿತ್ತು. ಮಧ್ಯರಾತ್ರಿ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಬೆಳಗಿನ ಜಾವ 1.30 ಕ್ಕೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ದುರ್ಘಟನೆಯಲ್ಲಿ ಓರ್ವ ವ್ಯಕ್ತಿ ಸಜೀವ ದಹನವಾಗಿದ್ದಾರೆ. ರೈಲಿನ ಪ್ಯಾಂಟ್ರಿ ಕಾರಿನ ಪಕ್ಕದಲ್ಲಿರುವ ಬಿ1 ಮತ್ತು ಎಂ2 ಎಸಿ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಲೋಕೋ ಪೈಲಟ್‌ಗಳು ಎಲಮಂಚಿಲಿ ಬಳಿಯ ರೈಲ್ವೆ ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಿದರು.

Train Accident: ಆನೆ ಗುಂಪಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ‌, 8 ಆನೆಗಳ ದಾರುಣ ಸಾವು, ರೈಲು ಸಂಚಾರ ವ್ಯತ್ಯಯ

ಅಗ್ನಿಶಾಮಕ ದಳದ ಸಿಬ್ಬಂದಿಗೆ ಕೂಡಲೇ ಮಾಹಿತಿ ನೀಡಲಾಯಿತು. ರಕ್ಷಣಾ ಸಿಬ್ಬಂದಿ ಅಲ್ಲಿಗೆ ತಲುಪುವ ಹೊತ್ತಿಗೆ ಎರಡು ಬೋಗಿಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದವು. ಇಡೀ ನಿಲ್ದಾಣವು ದಟ್ಟ ಹೊಗೆಯಿಂದ ಆವೃತವಾಗಿತ್ತು. ಸುತ್ತಮುತ್ತಲಿನ ಪ್ರದೇಶಗಳು ಭಯಾನಕವಾಗಿ ಕಾಣುತ್ತಿದ್ದವು. ಅಷ್ಟರಲ್ಲಿ ಅನಕಪಲ್ಲಿ, ಎಲಮಂಚಿಲಿ ಮತ್ತು ನಕ್ಕಪಲ್ಲಿಯಿಂದ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದರು.