ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದೆಹಲಿ ಗಲಭೆ ಮಾಸ್ಟರ್‌ ಮೈಂಡ್‌ ಉಮರ್‌ ಖಾಲಿದ್‌ ಜಾಮೀನು ತಿರಸ್ಕಾರ; ಸುಪ್ರೀಂ ಮಹತ್ವದ ಆದೇಶ

Delhi riots case: ಜೆಎನ್‌ಯು (ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ) ಮಾಜಿ ವಿದ್ಯಾರ್ಥಿ ಮತ್ತು ದೆಹಲಿ ಗಲಭೆಯ ಮಾಸ್ಟರ್ ಮೈಂಡ್ ಎಂದು ಆರೋಪಿಸಿರುವ ಉಮರ್ ಖಾಲಿದ್‌ ಹಾಗೂ ಶಾರ್ಜೀಲ್ ಇಮಾಮ್, ಉಮರ್ ಖಾಲಿದ್ ಮತ್ತು ಇತರ ಹಲವರ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ದೆಹಲಿ ಗಲಭೆ ಮಾಸ್ಟರ್‌ ಮೈಂಡ್‌ ಉಮರ್‌ ಖಾಲಿದ್‌ ಜಾಮೀನು ತಿರಸ್ಕಾರ

ಉಮರ್‌ ಖಾಲಿದ್‌ ಹಾಗೂ ಶಾರ್ಜೀಲ್ ಇಮಾಮ್ -

Vishakha Bhat
Vishakha Bhat Jan 5, 2026 11:25 AM

ನವದೆಹಲಿ: ಜೆಎನ್‌ಯು (ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ) ಮಾಜಿ ವಿದ್ಯಾರ್ಥಿ ಮತ್ತು ದೆಹಲಿ ಗಲಭೆಯ ಮಾಸ್ಟರ್ (Delhi riots case) ಮೈಂಡ್ ಎಂದು ಆರೋಪಿಸಿರುವ ಉಮರ್ ಖಾಲಿದ್‌ (Umar Khalid) ಹಾಗೂ ಶಾರ್ಜೀಲ್ ಇಮಾಮ್, ಉಮರ್ ಖಾಲಿದ್ ಮತ್ತು ಇತರ ಹಲವರ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿನ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಆರೋಪಿಗಳು ಸುಪ್ರೀಂ ಮೆಟ್ಟಿಲೇರಿದ್ದರು.

ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಜಾಮೀನು ನಿರಾಕರಣೆ ಮಾಡಿದೆ. ಪ್ರಕರಣದಲ್ಲಿ ಹೆಸರಿಸಲಾದ ಇತರ ಐದು ಜನ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್‌ಗೆ ಜಾಮೀನು ಮಂಜೂರಿ ಮಾಡಲಾಗಿದೆ. ಗಲಭೆಯಲ್ಲಿ 53 ಜನರು ಸಾವನ್ನಪ್ಪಿದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡರು. ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ವಿರುದ್ಧ ವ್ಯಾಪಕ ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.

2020 ರ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿಯೊಂದಿಗೆ ಸಂಬಂಧ ಹೊಂದಿರುವ ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಅಥವಾ (ಯುಎಪಿಎ) ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಈ ಏಳು ಮಂದಿಯೂ ಪ್ರಶ್ನಿಸಿದ್ದರು. ಖಾಲಿದ್ ಮತ್ತು ಇಮಾಮ್ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಕ್ರಿಮಿನಲ್ ಪಿತೂರಿಯಲ್ಲಿ ಇಬ್ಬರೂ ಭಾಗಿಯಾಗಿರುವುದನ್ನು ಸೂಚಿಸುವ ಸಾಕಷ್ಟು ಪುರಾವೆಗಳನ್ನು ಪ್ರಾಸಿಕ್ಯೂಷನ್ ನೀಡಿದೆ ಎಂದು ಹೇಳಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿಷಯವನ್ನು ಜಾಗತಿಕೀಕರಣಗೊಳಿಸುವ ಮತ್ತು ಅಂತರರಾಷ್ಟ್ರೀಯ ಮಾಧ್ಯಮಗಳ ಗಮನ ಸೆಳೆಯುವ ಉದ್ದೇಶದಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಗೆ ಹೊಂದಿಕೆಯಾಗುವಂತೆ ಈ ಪಿತೂರಿಯನ್ನು ಯೋಜಿಸಲಾಗಿತ್ತು ಎಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದೆಹಲಿ ಸ್ಫೋಟಕ್ಕೆ ಮುನ್ನ ಮೊಬೈಲ್‌ ಫೋನ್‌ ನೀರಿಗೆ ಎಸೆಯುವಂತೆ ಸೂಚಿಸಿದ್ದ ಬಾಂಬರ್‌ ಉಮರ್‌ ಮೊಹಮ್ಮದ್‌

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ(UAPA) ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಆರೋಪಿಗಳು ಐದು ವರ್ಷಗಳಿಗಿಂತ ಹೆಚ್ಚು ಕಾಲ ಬಂಧನದಲ್ಲಿದ್ದಾರೆ. 2020 ಫೆ.23 ರಿಂದ ಫೆ.29 ರವರೆಗೆ ನಡೆದ ಗಲಭೆಯಲ್ಲಿ 53 ಮಂದಿ ಮೃತಪಟ್ಟಿದ್ದರು. ಈ ಗಲಭೆಗೆ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ ಪ್ರಚೋದನೆ ನೀಡಿದ್ದೇ ಕಾರಣ ಎಂದು ದೆಹಲಿ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದರು.