ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

National Security Advisory Board : ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಗೆ ಮರುಜೀವ; ಏಳು ಮಂದಿ ಉನ್ನತ ಅಧಿಕಾರಿಗಳ ತಂಡ ರಚನೆ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದ ನಂತರ ಸರ್ಕಾರ ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಕೇಂದ್ರ ಸರ್ಕಾರ ಬುಧವಾರ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು ಪರಿಷ್ಕರಿಸಿದೆ. ಸಶಸ್ತ್ರ ಪಡೆಗಳು ಮತ್ತು ರಾಜತಾಂತ್ರಿಕತೆಯಿಂದ ನಿವೃತ್ತರಾದ ಅಧಿಕಾರಿಗಳು ಹಾಗೂ ಸೈನಿಕರನ್ನೊಳಗೊಂಡ ಏಳು ಮಂದಿಯ ತಂಡವನ್ನು ರಚಿಸಲಾಗಿದೆ ಎಂದು ತಿಳಿದು ಬಂದಿದೆ.

ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಗೆ ಮರುಜೀವ

Profile Vishakha Bhat Apr 30, 2025 3:18 PM

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದ ನಂತರ ಸರ್ಕಾರ ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಕೇಂದ್ರ ಸರ್ಕಾರ ಬುಧವಾರ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು ಪರಿಷ್ಕರಿಸಿದೆ. (National Security Advisory Board) ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (ರಾ) ಮಾಜಿ ಮುಖ್ಯಸ್ಥ ಅಲೋಕ್ ಜೋಶಿ ಅವರನ್ನು ಅದರ ಅಧ್ಯಕ್ಷರನ್ನಾಗಿ ನೇಮಿಸಿದೆ. ಸಶಸ್ತ್ರ ಪಡೆಗಳು ಮತ್ತು ರಾಜತಾಂತ್ರಿಕತೆಯಿಂದ ನಿವೃತ್ತರಾದ ಅಧಿಕಾರಿಗಳು ಹಾಗೂ ಸೈನಿಕರನ್ನೊಳಗೊಂಡ ಏಳು ಮಂದಿಯ ತಂಡವನ್ನು ರಚಿಸಲಾಗಿದೆ ಎಂದು ತಿಳಿದು ಬಂದಿದೆ.

ತಂಡದ ಸದಸ್ಯರಲ್ಲಿ ಮಾಜಿ ಪಶ್ಚಿಮ ವಾಯು ಕಮಾಂಡರ್ ಏರ್ ಮಾರ್ಷಲ್ ಪಿ.ಎಂ. ಸಿನ್ಹಾ, ಮಾಜಿ ದಕ್ಷಿಣ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಎ.ಕೆ. ಸಿಂಗ್ ಮತ್ತು ರಿಯರ್ ಅಡ್ಮಿರಲ್ ಮಾಂಟಿ ಖನ್ನಾ ಸೇರಿದ್ದಾರೆ. ರಾಜೀವ್ ರಂಜನ್ ವರ್ಮಾ ಮತ್ತು ಮನಮೋಹನ್ ಸಿಂಗ್ ಭಾರತೀಯ ಪೊಲೀಸ್ ಸೇವೆಯ ಇಬ್ಬರು ನಿವೃತ್ತ ಸದಸ್ಯರು. ನಿವೃತ್ತ ಐಎಫ್‌ಎಸ್ ಅಧಿಕಾರಿ ಬಿ. ವೆಂಕಟೇಶ್ ವರ್ಮಾ ಕೂಡ ಇದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದಲ್ಲಿ ಹತ್ಯೆ ಬಳಿಕ ಕೇಂದ್ರ ಸರ್ಕಾರ ವೈರಿ ರಾಷ್ಟ್ರದ ಮೇಲೆ ಪ್ರತೀಕಾರಕ್ಕಾಗಿ ಯೋಜನೆ ರೂಪಿಸಿದೆ. ಇಂದು ಪ್ರಧಾನಿ ಮೋದಿ ನಿವಾಸದಲ್ಲಿ ಎರಡನೇ ಬಾರಿಗೆ ಸಂಪುಟ ಸಭೆಯನ್ನು ಕರೆಯಲಾಗಿದೆ. ಮಂಗಳವಾರ ಪ್ರಧಾನಿ ಮೋದಿ, ಮೂರು ರಕ್ಷಣಾ ಪಡೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿತ್ತು. ಸಭೆಯಲ್ಲಿ ಸೇನೆಗೆ ಸಂಪೂರ್ಣ ಸ್ವಾತಂತ್ಯವನ್ನು ನೀಡಲಾಗಿದ್ದು, ಜಾಗ ಹಾಗೂ ಸಮಯ ನೋಡಿ ಪಾಕಿಸ್ತಾನಕ್ಕೆ ಬುದ್ಧಿ ಕಲಿಸಿ ಎಂದು ಪ್ರಧಾನಿ ಸೂಚನೆಯನ್ನು ನೀಡಿದ್ದಾರೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ, ರಕ್ಷಣಾ ಸಚಿವರು, ಗೃಹ ಸಚಿವರು, ಹಣಕಾಸು ಸಚಿವರು ಮತ್ತು ವಿದೇಶಾಂಗ ಸಚಿವರನ್ನು ಒಳಗೊಂಡ ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ಸೇರುತ್ತಿರುವುದು ಇದು ಎರಡನೇ ಬಾರಿ. ಈ ಬಾರಿ ಮತ್ತೊಂದು ಮಹತ್ವದ ನಿರ್ಣಯವನ್ನು ಕೈಗೊಳ್ಳುವ ನಿರೀಕ್ಷೆಯಿದೆ.

ಈ ಸುದ್ದಿಯನ್ನೂ ಓದಿ: Javed Akhtar: ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನಿ ಕಲಾವಿದರ ಬಗ್ಗೆ ಆಕ್ರೋಶಿತ ಹೇಳಿಕೆ ನೀಡಿದ ಜಾವೇದ್ ಅಖ್ತರ್..

ಭಾರತೀಯ ಸಶಸ್ತ್ರ ಪಡೆಗಳ ವೃತ್ತಿಪರ ಸಾಮರ್ಥ್ಯಗಳಲ್ಲಿ ಪ್ರಧಾನಿ ಮೋದಿ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸ ವ್ಯಕ್ತಪಡಿಸಿದ್ದಾರೆ . ಈ ನಡುವೆ ಉದ್ವಿಗ್ನತೆಯನ್ನು ಕಡಿಮೆ ಮಾಡಲು, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ (Antonio Guterres) ಮಂಗಳವಾರ ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಮತ್ತು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ( Shehbaz Sharif) ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಗುಟೆರೆಸ್, ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರು ಸಾವನ್ನಪ್ಪಿದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ.