Girija Vyas: ಕಾಂಗ್ರೆಸ್ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್ ಇನ್ನಿಲ್ಲ
Girija Vyas Dies: ಗಂಭೀರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್ ಗುರುವಾರ (ಮೇ 1) ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಗಿರಿಜಾ ವ್ಯಾಸ್.

ಜೈಪುರ: ದೇವರಿಗೆ ಆರತಿ ಮಾಡುವಾಗ ಬಟ್ಟೆಗೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್ (Girija Vyas) ಗುರುವಾರ (ಮೇ 1) ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. (Girija Vyas Dies). ಅವರಿಗೆ 79 ವರ್ಷ ವಯಸ್ಸಾಗಿತ್ತು. ಮಾ. 31ರಂದು ರಾಜಸ್ಥಾನದ ಉದಯಪುರದ ತಮ್ಮ ಮನೆಯಲ್ಲಿ ದೇವರಿಗೆ ಆರತಿ ಮಾಡುವಾಗ ಅವರು ತೊಟ್ಟಿದ್ದ ಬಟ್ಟೆಗೆ ಬೆಂಕಿ ತಗುಲಿ ಸುಟ್ಟ ಗಾಯಗಳಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ʼʼಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗಿರಿಜಾ ವ್ಯಾಸ್ ಗುರುವಾರ ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಅವರ ಅಂತ್ಯಕ್ರಿಯೆ ಮೇ 2ರಂದು ನಡೆಯಲಿದೆʼʼ ಎಂದು ಅವರ ಸಹೋದರೆ ಗೋಪಾಲ್ ಶರ್ಮಾ ತಿಳಿಸಿದ್ದಾರೆ. ಆರಂಭದಲ್ಲಿ ಗಿರಿಜಾ ಅವರನ್ನು ಉದಯಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗುಜರಾತ್‌ನ ಅಗಮದಾಬಾದ್‌ನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಎಕ್ಸ್ ಪೋಸ್ಟ್:
पूर्व केन्द्रीय मंत्री एवं पूर्व कांग्रेस प्रदेशाध्यक्ष डॉ गिरिजा व्यास का निधन हम सबके लिए एक अपूरणीय क्षति है। डॉ गिरिजा व्यास ने शिक्षा, राजनीति एवं समाज सेवा के क्षेत्र में बड़ा योगदान था। उनका इस तरह एक हादसे का शिकार होकर असमय जाना हम सभी के लिए एक बड़ा आघात है।
— Ashok Gehlot (@ashokgehlot51) May 1, 2025
मैं ईश्वर… pic.twitter.com/RHSj5IHceA
ಈ ಸುದ್ದಿಯನ್ನೂ ಓದಿ: Dr K Kasturirangan: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್ ನಿಧನ
ಕಾಂಗ್ರೆಸ್‌ನ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದ ಗಿರಿಜಾ ವ್ಯಾಸ್ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ರಾಜಸ್ಥಾನ ಕಾಂಗ್ರೆಸ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ (NCW) ಅಧ್ಯಕ್ಷೆಯೂ ಆಗಿದ್ದರು. ಗಿರಿಜಾ ವ್ಯಾಸ್ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರು ಸೇರಿದಂತೆ ವಿವಿಧ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ದುಃಖ್ ವ್ಯಕ್ತಪಡಿಸಿ, "ಶಿಕ್ಷಣ, ಸಾಮಾಜಿಕ ನ್ಯಾಯ ಮತ್ತು ವಿಶೇಷವಾಗಿ ಮಹಿಳಾ ಸಬಲೀಕರಣ ಕ್ಷೇತ್ರಗಳಿಗೆ ಗಿರಿಜಾ ವ್ಯಾಸ್ ಗಮನಾರ್ಹ ಕೊಡುಗೆ ನೀಡಿದ್ದಾರೆ. ಅವರ ನಿಧನವು ನಮ್ಮೆಲ್ಲರಿಗೂ ಭರಿಸಲಾಗದ ನಷ್ಟʼʼ ಎಂದಿದ್ದಾರೆ.
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. “ಕೇಂದ್ರದ ಮಾಜಿ ಸಚಿವೆ ಡಾ. ಗಿರಿಜಾ ವ್ಯಾಸ್ ಅವರ ನಿಧನ ನಮಗೆಲ್ಲರಿಗೂ ತುಂಬಲಾರದ ನಷ್ಟ. ಗಿರಿಜಾ ವ್ಯಾಸ್ ಶಿಕ್ಷಣ, ರಾಜಕೀಯ ಮತ್ತು ಸಾಮಾಜಿಕ ಸೇವೆಯ ಕ್ಷೇತ್ರಕ್ಕೆ ಬಹು ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಅಕಾಲಿಕ ನಿಧನ ನಮಗೆಲ್ಲರಿಗೂ ದೊಡ್ಡ ಆಘಾತ ತಂದಿದೆ” ಎಂದು ಅಶೋಕ್ ಗೆಹ್ಲೋಟ್ ಬರೆದುಕೊಂಡಿದ್ದಾರೆ.
1946ರಲ್ಲಿ ರಾಜಸ್ಥಾನದ ರಾಜ್ಸಮಂದ್ ಜಿಲ್ಲೆಯ ನಾಥದ್ವಾರದಲ್ಲಿ ಜನಿಸಿದ ಗಿರಿಜಾ ವ್ಯಾಸ್ ಉದಯಪುರದ ಮೋಹನ್ಲಾಲ್ ಸುಖಾಡಿಯಾ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ದಿಲ್ಲಿ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದಿದ್ದಾರೆ. 1991ರಲ್ಲಿ ಗಿರಿಜಾ ವ್ಯಾಸ್ ಉದಯಪುರ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸುವ ಮೂಲಕ ಸಂಸತ್ತಿಗೆ ಮೊದಲ ಬಾರಿ ಪ್ರವೇಶಿಸಿದ್ದರು. 2019ರಲ್ಲಿ ಕೊನೆ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು ಉದಯಪುರ ಸಿಟಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಗುಲಾಬ್ ಚಂದ್ ಕಟಾರಿಯಾ ವಿರುದ್ಧ ಸೋತಿದ್ದರು.