ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಸಂಘರ್ಷ: ಮತ ಎಣಿಕೆ ಕೇಂದ್ರದ ಬಳಿ ಕುರ್ಚಿ, ವಾಹನ ಧ್ವಂಸ

Violence erupts in West Bengal: ಪಶ್ಚಿಮ ಬಂಗಾಳದಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಭಾರಿ ಅಂತರದ ಮುನ್ನಡೆ ಸಾಧಿಸಿದೆ. ಈ ನಡುವೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಹಿಂಸಾಚಾರ ನಡೆದಿದೆ. ಇನ್ನು ಮತ ಎಣಿಕೆಯನ್ನು ನಿಲ್ಲಿಸಲಾಗಿದೆ ಎಂದು ಆರೋಪಿಸಿರುವ ಮಮತಾ ಬ್ಯಾನರ್ಜಿ ಬ್ಯಾನರ್ಜಿ, ಎಣಿಕೆ ಕೇಂದ್ರಗಳಲ್ಲಿಯೇ ಇರುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಪಶ್ಚಿಮ ಬಂಗಾಳ ಎಣಿಕೆ ಕೇಂದ್ರದ ಬಳಿ ಕುರ್ಚಿಗಳು, ವಾಹನ ಧ್ವಂಸ

ಪಶ್ಚಿಮ ಬಂಗಾಳ ಮರ ಎಣಿಕೆ ಕೇಂದ್ರದ ಬಳಿ ಕುರ್ಚಿಗಳು, ವಾಹನಗಳು ಧ್ವಂಸ -

Priyanka P
Priyanka P May 4, 2026 6:27 PM

ಕೋಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal election) ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಭಾರಿ ಅಂತರದ ಮುನ್ನಡೆ ಸಾಧಿಸಿದೆ. ಈ ನಡುವೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಹಿಂಸಾಚಾರ ನಡೆದಿದೆ (Violence erupts in West Bengal). ಆಸನ್ಸೋಲ್ ಎಂಜಿನಿಯರಿಂಗ್ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಘರ್ಷಣೆ ಸಂಭವಿಸಿದ್ದು, ಈ ವೇಳೆ ಕುರ್ಚಿಗಳು ಮತ್ತು ವಾಹನಗಳನ್ನು ಧ್ವಂಸಗೊಳಿಸಲಾಗಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತುರ್ತು (SOS) ಸಂದೇಶವೊಂದನ್ನು ಬಿಡುಗಡೆ ಮಾಡಿದ್ದು, ಟಿಎಂಸಿ ಮುನ್ನಡೆ ಸಾಧಿಸುತ್ತಿರುವ ಕಡೆಗಳಲ್ಲಿ ಚುನಾವಣಾ ಆಯೋಗ ಮತ್ತು ಬಿಜೆಪಿ ಟ್ರೆಂಡ್‌ಗಳನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಅಂದರೆ ಟಿಎಂಸಿ ಗೆಲ್ಲುತ್ತಿರುವ ಕಡೆಗಳಲ್ಲಿ ಫಲಿತಾಂಶದ ವಿವರಗಳನ್ನು ಮರೆಮಾಡಲಾಗುತ್ತಿದೆ ಎಂಬುದು ಅವರ ದೂರಾಗಿದೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮ್ಯಾಜಿಕ್ ನಂಬರ್ ಆದ 148 ಸ್ಥಾನಗಳ ಗಡಿ ದಾಟಿದೆ. ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಬಿಜೆಪಿ 183 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಟಿಎಂಸಿ 89 ಸ್ಥಾನಗಳೊಂದಿಗೆ ಹಿನ್ನಡೆ ಅನುಭವಿಸುತ್ತಿದೆ.

ಇಲ್ಲಿದೆ ವಿಡಿಯೊ:



ಮತ ಎಣಿಕೆಯನ್ನು ನಿಲ್ಲಿಸಲಾಗಿದೆ ಎಂದು ಆರೋಪಿಸಿರುವ ಮಮತಾ ಬ್ಯಾನರ್ಜಿ ಎಣಿಕೆ ಕೇಂದ್ರಗಳಲ್ಲಿಯೇ ಇರುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ʼʼನಾನು ನಿನ್ನೆಯೇ ಹೇಳಿದಂತೆ, ಅವರು 2-3 ಸುತ್ತುಗಳ ನಂತರ ಬಿಜೆಪಿ ಮುನ್ನಡೆಯಲ್ಲಿದೆ ತೋರಿಸುತ್ತಾರೆ. ಸುಮಾರು 100 ಸ್ಥಳಗಳಲ್ಲಿ ಎಣಿಕೆಯನ್ನು ನಿಲ್ಲಿಸಲಾಗಿದೆʼʼ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ. ಸುಮಾರು 100 ಸ್ಥಾನಗಳಲ್ಲಿ ಟಿಎಂಸಿ ಮುನ್ನಡೆಯಲ್ಲಿದೆ. ಆದರೆ ಅದನ್ನು ಬಹಿರಂಗಪಡಿಸುತ್ತಿಲ್ಲʼʼ ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ವಾಧಿಕಾರ ಅಂತ್ಯ; ಸುದೀರ್ಘ ಆಡಳಿತಕ್ಕೆ ಬ್ರೇಕ್‌ ಬಿದ್ದಿದ್ದೇಗೆ?

ಭವಾನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಮುನ್ನಡೆ

ಭವಾನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಆಯೋಗದ (ECI) ಅಂಕಿಅಂಶಗಳ ಪ್ರಕಾರ, ಮುಖ್ಯಮಂತ್ರಿ 15,494 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ. ಸುವೇಂದು ಅಧಿಕಾರಿ 20,028 ಮತಗಳನ್ನು ಪಡೆದಿದ್ದಾರೆ. ಫಲಿತಾಂಶ ಘೋಷಣೆಯಾಗುವ ಮೊದಲು ಭವಾನಿಪುರ ಕ್ಷೇತ್ರದಲ್ಲಿ ಒಟ್ಟು 20 ಸುತ್ತುಗಳ ಮತ ಎಣಿಕೆ ನಡೆಯಲಿದೆ.

ಅಂದಹಾಗೆ, ಭಾರತೀಯ ಚುನಾವಣಾ ಆಯೋಗವು ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಮತ ಎಣಿಕೆಯನ್ನು ನಡೆಸುತ್ತಿದೆ. ಇದರೊಂದಿಗೆ ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆಯೂ ಇಂದು ನಡೆಯುತ್ತಿದೆ.

ಸೂರ್ಯಾಸ್ತದವರೆಗೂ ಕಾಯಿರಿ ಎಂದ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರು ಮತ್ತು ಪಕ್ಷದ ಬೆಂಬಲಿಗರಿಗೆ ತುರ್ತು ಸಂದೇಶ ರವಾನಿಸಿದ್ದು, ಎಣಿಕೆ ಕೇಂದ್ರಗಳನ್ನು ಬಿಟ್ಟು ಹೊರಬರದಂತೆ ಮನವಿ ಮಾಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಯು ಚುನಾವಣಾ ಆಯೋಗ ಮತ್ತು ಕೇಂದ್ರ ಪಡೆಗಳೊಂದಿಗೆ ಸೇರಿಕೊಂಡು ಚುನಾವಣೆಯಲ್ಲಿ ಅಕ್ರಮ ಎಸಗುತ್ತಿದೆ ಎಂದು ಆರೋಪಿಸಿದ್ದಾರೆ.

ಎಣಿಕೆ ಏಜೆಂಟ್‌ಗಳು ಮತ್ತು ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಎಣಿಕೆ ಕೇಂದ್ರದಿಂದ ಹೊರಬರಬಾರದು. ಇದು ಬಿಜೆಪಿಯ ಸಂಚು. ಅವರು ಮೊದಲು ಮುನ್ನಡೆ ಸಾಧಿಸಿದಂತೆ ತೋರಿಸಿಕೊಳ್ಳುತ್ತಾರೆ ಎಂದು ನಾನು ನಿನ್ನೆಯಿಂದಲೇ ಹೇಳುತ್ತಿದ್ದೇನೆ. ಅವರು ಹಲವು ಕಡೆಗಳಲ್ಲಿ ಎಣಿಕೆಯನ್ನು ನಿಲ್ಲಿಸಿದ್ದಾರೆ. ಕಲ್ಯಾಣಿಯಂತಹ ಸ್ಥಳಗಳಲ್ಲಿ ಸರಿಯಾದ ಹೊಂದಾಣಿಕೆಯಾಗದ ಯಂತ್ರಗಳು ಕಂಡುಬಂದಿವೆ. ಕೇಂದ್ರ ಪಡೆಗಳ ಮೂಲಕ ಟಿಎಂಸಿ ವಿರುದ್ಧ ಎಲ್ಲ ಕಡೆಯಿಂದ ಮೋಸ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.