ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Accident Case: ಭೀಕರ ಅಪಘಾತದಲ್ಲಿ ಎಡಗೈಯನ್ನೇ ಕಳೆದುಕೊಂಡ ಬೈಕ್‌ ಸವಾರ- ಈ ವಿಡಿಯೊ ನೋಡಿದ್ರೆ ಶಾಕ್‌ ಆಗೋದು ಗ್ಯಾರಂಟಿ

ಮುಂಬೈನ ಅಂಧೇರಿಯಲ್ಲಿ ಇತ್ತೀಚೆಗೆ ಬಸ್‌ಗೆ ಬೈಕ್ ಡಿಕ್ಕಿ(Accident Case) ಹೊಡೆದ ಪರಿಣಾಮ ಬೈಕ್‍ ಸವಾರನ ಎಡಗೈ ಬಸ್ಸಿನ ಚಕ್ರಗಳ ಅಡಿಯಲ್ಲಿ ಸಿಲುಕಿ ತುಂಡಾದ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಬಸ್‍ಗೆ ಡಿಕ್ಕಿ ಹೊಡೆದ ಬೈಕ್; ಗಂಭೀರವಾಗಿ ಗಾಯಗೊಂಡ ಬೈಕ್‌ ಸವಾರ!

Profile pavithra May 3, 2025 12:37 PM

ಮುಂಬೈ: ಬಸ್‌ಗೆ ಬೈಕ್‌ವೊಂದು ಡಿಕ್ಕಿ(Accident Case) ಹೊಡೆದ ಪರಿಣಾಮ ಬೈಕಿನಲ್ಲಿದ್ದ 35 ವರ್ಷದ ವ್ಯಕ್ತಿಯ ಎಡಗೈ ಬಸ್ಸಿನ ಚಕ್ರಗಳ ಅಡಿಯಲ್ಲಿ ಸಿಲುಕಿ ತುಂಡಾದ ಘಟನೆ ಮುಂಬೈನಲ್ಲಿ ಶುಕ್ರವಾರ (ಮೇ 2) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂಧೇರಿಯಲ್ಲಿ ಬೆಳಿಗ್ಗೆ 9.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಇಸ್ಮಾಯಿಲ್ ಸುರತ್ವಾಲಾ ಎಂಬ ವ್ಯಕ್ತಿ ತನ್ನ ಬೈಕಿನಲ್ಲಿ ಹೋಗುವಾಗ ಬಸ್‌ಗೆ ಡಿಕ್ಕಿ ಹೊಡೆದು ತನ್ನ ಕೈಯನ್ನು ಕಳೆದುಕೊಂಡಿದ್ದಾನೆ. ಮೊಹಮ್ಮದ್ ಅಲಿ ರಸ್ತೆಯ ನಿವಾಸಿಯಾಗಿದ್ದ ಇಸ್ಮಾಯಿಲ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಬಸ್‍ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಅವನ ಎಡಗೈ ಚಕ್ರದ ಅಡಿಯಲ್ಲಿ ಸಿಲುಕಿ ನಜ್ಜುಗುಜ್ಜಾಗಿ ತುಂಡಾಗಿದೆ. ತಕ್ಷಣ ಆತನನ್ನು ಹೋಲಿ ಸ್ಪಿರಿಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಎಡಗೈ ತೀವ್ರವಾಗಿ ಹಾನಿಗೊಳಗಾದ ಕಾರಣ ಅದನ್ನು ಕತ್ತರಿಸಲಾಗಿದೆ.

ಪೊಲೀಸರು ಬಸ್‍ ಅನ್ನು ವಶಪಡಿಸಿಕೊಂಡು ಎಂಐಡಿಸಿ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ್ದಾರೆ. ಹಾಗೂ ಈ ಘಟನೆಗೆ ಸಂಬಂಧಿಸಿದಂತೆ ಎಂಐಡಿಸಿ ಪೊಲೀಸರು ವಿಖ್ರೋಲಿ ನಿವಾಸಿ ಬಸ್ ಚಾಲಕ ವಿಜಯ್ ಪಾಟೀಲ್ (33) ವಿರುದ್ಧ ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 281 (ರಾಶ್ ಡ್ರೈವಿಂಗ್ ಅಥವಾ ಸಾರ್ವಜನಿಕ ಮಾರ್ಗದಲ್ಲಿ ಸವಾರಿ) ಮತ್ತು 125 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕೃತ್ಯ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಬಸ್ ಚಾಲಕನನ್ನು ಖಾಸಗಿ ಗುತ್ತಿಗೆದಾರರ ಮೂಲಕ ನೇಮಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ಕಾರಣವಾದ ಘಟನೆಗಳ ನಿಖರವಾದ ಅನುಕ್ರಮವನ್ನು ಕಂಡುಕೊಳ್ಳಲು ಪೊಲೀಸ್ ಅಧಿಕಾರಿಗಳು ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಪಿಕಪ್ ವ್ಯಾನ್ ಪಲ್ಟಿ: ನಾಲ್ವರ ಸಾವು

ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ, ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬರಾಟಿಗಳನ್ನು ಕರೆದೊಯ್ಯುತ್ತಿದ್ದ ಪಿಕಪ್ ವ್ಯಾನ್ ಪಲ್ಟಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 12 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುರುವಾರ(ಮೇ 1)ರಾತ್ರಿ 10 ಗಂಟೆ ಸುಮಾರಿಗೆ ಜಿಲ್ಲೆಯ ಲ್ಯಾಟೆರಿ ಪೊಲೀಸ್ ಠಾಣೆ ವ್ಯಾಪ್ತಿಯ ಆರಿ ಘಾಟ್ ಬಳಿ ಈ ಅಪಘಾತ ಸಂಭವಿಸಿದೆ. ಇಂದೋರ್ ಜಿಲ್ಲೆಯ ಸಿರೋಂಜ್‍ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಮೋವ್‍ನಿಂದ ಬಂದಿದ್ದ ಹದಿನಾರು ಜನರು ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಇಲ್ಲಿಂದ ಹಿಂದಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:Viral Video: ಡಿವೋರ್ಸ್‌ ಸಿಕ್ಕ ಖುಷಿಯಲ್ಲಿ ಪಾರ್ಟಿ ಮಾಡಿದ ಮಹಿಳೆ; ಸಿಕ್ಕಾಪಟ್ಟೆ ವೈರಲ್‌ ಆಯ್ತು ಮೆಹೆಂದಿ ಡಿಸೈನ್‌!

ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.