ಉತ್ತರಾಖಂಡದಲ್ಲಿ ಸುರಂಗದೊಳಗೆ ನುಗ್ಗಿದ ನೀರು: 7 ಮಂದಿ ಸಾವು, ಮೂವರು ಅಪಾಯದಲ್ಲಿ, ಹಲವರಿಗೆ ಗಾಯ
ಉತ್ತರಾಖಂಡದ ಚಮೋಲಿಯಲ್ಲಿ ಸುರಂಗದೊಳಗೆ ನೀರು ನುಗ್ಗಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗುರುವಾರ ಸಂಜೆ 6.30 ರ ಸುಮಾರಿಗೆ ಜಲವಿದ್ಯುತ್ ಯೋಜನೆಗಾಗಿ ನಿರ್ಮಾಣ ಹಂತದಲ್ಲಿರುವ ಸುರಂಗದೊಳಗೆ ಭಾರಿ ಪ್ರಮಾಣದಲ್ಲಿ ಪ್ರವಾಹದ ನೀರು ನುಗ್ಗಿದೆ. ಇದರಲ್ಲಿ ಇನ್ನು ಮೂರು ಮಂದಿ ಸಿಲುಕಿಕೊಂಡಿದ್ದಾರೆ.
ಸಂಗ್ರಹ ಚಿತ್ರ -
ಉತ್ತರಾಖಂಡ: ಸುರಂಗದೊಳಗೆ ನೀರು (Flood) ನುಗ್ಗಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ (Uttarakhand) ಚಮೋಲಿಯಲ್ಲಿ (Chamoli) ಗುರುವಾರ ಸಂಜೆ ನಡೆದಿದೆ. ಜಲವಿದ್ಯುತ್ ಯೋಜನೆಗಾಗಿ (hydropower project Tunnel) ನಿರ್ಮಾಣ ಹಂತದಲ್ಲಿರುವ ಸುರಂಗದೊಳಗೆ ಸಂಜೆ 6.30 ರ ಸುಮಾರಿಗೆ ಭಾರಿ ಪ್ರಮಾಣದ ಅವಶೇಷಗಳೊಂದಿಗೆ ನೀರು ನುಗ್ಗಿದೆ. ಇದರಲ್ಲಿ ಅನೇಕರು ಗಾಯಗೊಂಡಿದ್ದು, 18 ಕಾರ್ಮಿಕರನ್ನು ರಕ್ಷಿಸಲಾಗಿದೆ. ಇನ್ನು ಮೂವರು ಒಳಗೆ ಸಿಲುಕಿಕೊಂಡಿದ್ದು, ಅವರ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಮೋಲಿ ಜಿಲ್ಲೆಯಲ್ಲಿ ಗುರುವಾರ ಸಂಜೆ 6.30 ರ ಸುಮಾರಿಗೆ ಸುರಂಗದೊಳಗೆ ನೀರು ಮತ್ತು ಅವಶೇಷಗಳು ನುಗ್ಗಿದೆ. ಏಳು ಮಂದಿ ಸಾವನ್ನಪ್ಪಿದ್ದು, ಮೂವರು ಕಾರ್ಮಿಕರು ಒಳಗೆ ಸಿಲುಕಿಕೊಂಡಿದ್ದಾರೆ. ಅವರನ್ನು ತಲುಪಲು ರಕ್ಷಣಾ ಕಾರ್ಯಕರ್ತರು ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಚಮೋಲಿಯ ಪಿಪಲ್ಕೋಟಿಯಲ್ಲಿರುವ ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC) ನ ಯೋಜನಾ ಸ್ಥಳದಲ್ಲಿ ಸುಮಾರು 28 ಜನರು ಕೆಲಸ ಮಾಡುತ್ತಿದ್ದರು. ಆಗ ಹಠಾತ್ ನೀರು ಸುರಂಗದೊಳಗೆ ನುಗ್ಗಿದೆ. ಬಲವಾದ ಪ್ರವಾಹ ಉಂಟಾಗಿದ್ದು, ಹಲವರನ್ನು ಸುರಂಗದ ನಿರ್ಗಮನದ ಕಡೆಗೆ ಸೆಳೆದುಕೊಂಡು ಹೋಗಿತ್ತು.
A horrifying disaster inside the Chamoli, Uttarakhand tunnel.
— Kailash Vashi (@KailashVashi) August 14, 2026
A sudden leak triggered a torrent of water and mountain debris, turning the tunnel into a deadly quagmire. Six workers have died, two are still missing, and around 14 others remain injured and under treatment.
With… pic.twitter.com/TXkoKo8W1g
ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಶಾಸಕ ಲಖ್‌ಪತ್ ಬುಟೋಲಾ, ಇದೊಂದು ಅತ್ಯಂತ ದುರಂತ ಘಟನೆ. ಆಡಳಿತ ತಂಡ ಮತ್ತು ಎಲ್ಲಾ ಸಹೋದ್ಯೋಗಿಗಳು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವವರಿಗೆ ನಿರಂತರ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರವ್ ಕುಮಾರ್ ಮಾತನಾಡಿ, ಗುರುವಾರ ಸಂಜೆ 6.30 ರ ಸುಮಾರಿಗೆ ನಿರ್ಮಾಣ ಕಾರ್ಯ ನಡೆಯುತ್ತಿರುವ ಸುರಂಗದೊಳಗೆ ಗಣನೀಯ ಪ್ರಮಾಣದ ಅವಶೇಷಗಳೊಂದಿಗೆ ನೀರು ನುಗ್ಗಿದೆ. ಇದರಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಯುದ್ಧೋಪಾದಿಯಲ್ಲಿ ನಡೆಸಲು ಆದೇಶಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ಸಿಕ್ಕಿಬಿದ್ದ ಕಾರ್ಮಿಕರನ್ನು ಹುಡುಕುವ ಕಾರ್ಯ ನಡೆಸುತ್ತಿದೆ. ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳೊಂದಿಗೆ ಮಾತನಾಡಿದ್ದೇನೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಜಾರ್ಖಂಡ್ ಮತ್ತು ಛತ್ತೀಸ್‌ಗಢದ ನಿವಾಸಿಗಳಾಗಿರುವ ಅವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕರೊಂದಿಗೆ ಮಾತುಕತೆ ನಡೆಸಿರುವುದಾಗಿ ಅವರು ಹೇಳಿದರು.
ಉತ್ತರಾಖಂಡದಲ್ಲಿ ಜಲವಿದ್ಯುತ್ ಸುರಂಗ ಕುಸಿತ: 16 ಕಾರ್ಮಿಕರ ರಕ್ಷಣೆ, ಇನ್ನೂ ಕೆಲವರು ಸಿಲುಕಿರುವ ಶಂಕೆ
ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ನದಿ ನೀರಿನ ಮಟ್ಟದಲ್ಲಿ ಸೋಮವಾರ ಭಾರಿ ಏರಿಕೆಯಾಗಿದ್ದರಿಂದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚೆಗೆ ನೀತಿ ಕಣಿವೆ ಪ್ರದೇಶದಲ್ಲಿ ಸೇತುವೆಯೊಂದನ್ನು ಕೊಚ್ಚಿಕೊಂಡು ಹೋಗಿತ್ತು.