ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಂಗಾಳದಲ್ಲಿನ್ನು ಸುವೇಂದು "ಅಧಿಕಾರ"; ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಮೋದಿ, ಶಾ ಭಾಗಿ

West Bengal CM Oath Ceremony: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಗೆಲುವನ್ನು ಸಾಧಿಸಿದೆ. ಇಂದು ಸುವೇಂದು ಅಧಿಕಾರಿ ಬಂಗಾಳದಲ್ಲಿ ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ಎನ್. ರವಿ ಅವರು ಅಧಿಕಾರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಅಗ್ನಿಮಿತ್ರಾ ಪಾಲ್‌ ಅವರು ಅಧಿಕಾರವನ್ನು ಸ್ವೀಕರಿಸಿದ್ದಾರೆ.

ಬಂಗಾಳದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸುವೇಂದು ಅಧಿಕಾರಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 9, 2026 12:05 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ (West Bengal CM Oath Ceremony) ಬಿಜೆಪಿ ಐತಿಹಾಸಿಕ ಗೆಲುವನ್ನು ಸಾಧಿಸಿದೆ. ಇಂದು ಸುವೇಂದು ಅಧಿಕಾರಿ (Suvendu Adhikari) ಬಂಗಾಳದಲ್ಲಿ ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ಎನ್. ರವಿ ಅವರು ಅಧಿಕಾರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಅಗ್ನಿಮಿತ್ರಾ ಪಾಲ್‌ ಅವರು ಅಧಿಕಾರವನ್ನು ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಆಂಧ್ರ ಸಿಎಂ ಚಂದ್ರ ಬಾಬು ನಾಯ್ಡು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌ ಹಾಗೂ ಡಿಸಿಎಂ ಏಕನಾಥ ಶಿಂಧೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಚಿರಾಗ್‌ ಪಾಸ್ವಾನ್‌ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

ವಿಡಿಯೋ ನೋಡಿ



ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮ ವಾರ್ಷಿಕೋತ್ಸವದ ದಿನದಂದೇ ಅಧಿಕಾರಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದೆ. ಸುವೇಂದು ಜೊತೆಗೆ, ಬಿಜೆಪಿಯ ಹೊಸದಾಗಿ ಆಯ್ಕೆಯಾದ ಶಾಸಕರಾದ ದಿಲೀಪ್ ಘೋಷ್, ಅಗ್ನಿಮಿತ್ರ ಪಾಲ್, ಅಶೋಕ್ ಕೀರ್ತನಿಯಾ ಕೂಡ ಕ್ಯಾಬಿನೆಟ್ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಸುವೇಂದು ಅಧಿಕಾರಿ ಅವರ ಹೆಸರನ್ನು ಪಕ್ಷದ ಕಾರ್ಯಕರ್ತರು ಮತ್ತು ಶಾಸಕರ ಮುಂದೆ ಘೋಷಿಸಿದರು. ಬಂಗಾಳದಲ್ಲಿ ಹೊಸ ಸರ್ಕಾರವನ್ನು ಮುನ್ನಡೆಸಲು ಬಿಜೆಪಿ ಶಾಸಕಾಂಗ ಪಕ್ಷವು ಸುವೇಂದು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ ಎಂದು ಹೇಳಿದ್ದರು.