ಬಂಗಾಳದ ಹೌರಾದಲ್ಲಿ ಚುನಾವಣೋತ್ತರ ಹಿಂಸಾಚಾರ: ಟಿಎಂಸಿಯಿಂದ ಬಾಂಬ್ ದಾಳಿ
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ಬಳಿಕ ಹಿಂಸಾಚಾರ ತೀವ್ರಗೊಂಡಿದೆ. ಹೌರಾದ ಶಿಬ್‌ಪುರ ಪ್ರದೇಶದಲ್ಲಿ ಬಾಂಬ್ ದಾಳಿ, ಲೂಟಿ ಮತ್ತು ಧಾರ್ಮಿಕ ಘೋಷಣೆಗಳ ವಿಡಿಯೊ ವೈರಲ್ ಆಗಿದೆ. ಈ ದಾಳಿಯ ಹಿಂದೆ ಟಿಎಂಸಿ ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದ್ದು, ಇಬ್ಬರು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಘಟನೆಯ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದರೆ, ರಾಜ್ಯದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ -
ಕೋಲ್ಕತ್ತಾ, ಮೇ 8: ಪಶ್ಚಿಮ ಬಂಗಾಳದಲ್ಲಿ (West Benagal) ವಿಧಾನಸಭಾ ಚುನಾವಣೆಯ (Assembly Election) ಫಲಿತಾಂಶ ಪ್ರಕಟವಾದ ನಂತರದ ಹಿಂಸಾಚಾರ ದಿನದಿಂದ ದಿನಕ್ಕೆ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೌರಾದ ಶಿಬ್‌ಪುರ ಪ್ರದೇಶದಲ್ಲಿ ಉದ್ರಿಕ್ತ ಗುಂಪೊಂದು ಸಾರ್ವಜನಿಕವಾಗಿ ಬಾಂಬ್ ಎಸೆಯುತ್ತ, ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸುತ್ತ ಧಾರ್ಮಿಕ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಯೋಜಿತ ದಾಳಿಯ ಹಿಂದೆ ತೃಣಮೂಲ ಕಾಂಗ್ರೆಸ್ (Trinamool Congress) ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ನೇರ ಆರೋಪ ಮಾಡಿದೆ.
ಹೌರಾದ ಶಿಬ್‌ಪುರ ಪ್ರದೇಶದ ಚೌರಾಬಸ್ತಿ ಎಂಬಲ್ಲಿ ಈ ಹಿಂಸಾಚಾರ ನಡೆದಿದೆ. ವೈರಲ್ ಆಗಿರುವ ವಿಡಿಯೊದಲ್ಲಿ ಕಿರಿದಾದ ಗಲ್ಲಿಗಳಲ್ಲಿ ಸ್ಫೋಟದ ಭೀಕರ ಶಬ್ದ ಕೇಳಿಬರುತ್ತಿದ್ದು, ಜನಜಂಗುಳಿ ಇರುವ ಪ್ರದೇಶದಲ್ಲಿ ಹೊಗೆ ಆವರಿಸಿದೆ. ಈ ವೇಳೆ ಒಂದು ಗುಂಪು "ಅಲ್ಲಾಹು ಅಕ್ಬರ್" ಘೋಷಣೆ ಕೂಗುತ್ತಾ ಲೂಟಿ ಮತ್ತು ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿರುವುದು ಕಂಡುಬಂದಿದೆ. ಬಿಜೆಪಿ ನಾಯಕರ ಪ್ರಕಾರ, ಸ್ಥಳೀಯ ಟಿಎಂಸಿ ನಾಯಕ ಶಮೀಮ್ ಅಹ್ಮದ್ ನೇತೃತ್ವದ ಬೆಂಬಲಿಗರು ಕಚ್ಚಾ ಬಾಂಬ್‌ಗಳನ್ನು ಬಳಸಿ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಕನಿಷ್ಠ ಇಬ್ಬರು ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಹಿಂಸಾಚಾರ:
This Muslim BJP supporter is telling what happened in Shibpur, Howrah today.
— Facts (@BefittingFacts) May 7, 2026
When they were celebrating, TMC supporters started throwing stones and bottles at them. Later, they fired rounds and hurled 10–12 bombs.
Kashmir-like combing operations are needed in Bengal. pic.twitter.com/AJXfzs39sI
ಘಟನೆಯಿಂದ ಆಕ್ರೋಶಗೊಂಡ ಬಿಜೆಪಿ ಬೆಂಬಲಿಗರು ಶಿಬ್‌ಪುರ ಪೊಲೀಸ್ ಠಾಣೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಸ್ಥಳೀಯ ಪೊಲೀಸರು ಮತ್ತು ಆಡಳಿತ ಯಂತ್ರವು ಟಿಎಂಸಿ ಪರವಾಗಿ ಕೆಲಸ ಮಾಡುತ್ತಿದೆ ಮತ್ತು ವಿರೋಧ ಪಕ್ಷದ ಬೆಂಬಲಿಗರಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಪೊಲೀಸ್ ಠಾಣೆಯನ್ನು ಮುತ್ತಿಗೆ ಹಾಕಲಾಯಿತು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಸರ್ಕಾರ, ಕೂಡಲೇ ಹೆಚ್ಚಿನ ಸಂಖ್ಯೆಯ ಪೊಲೀಸರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ಸ್ಥಳಕ್ಕೆ ರವಾನಿಸಿದೆ. ಸದ್ಯ ಭದ್ರತಾ ಪಡೆಗಳು ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸುತ್ತಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಬಿಜೆಪಿಯ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಿದೆ. ಆದರೆ ಮೇ 4ರಂದು ಫಲಿತಾಂಶ ಬಂದಾಗಿನಿಂದ ರಾಜ್ಯದ ವಿವಿಧೆಡೆ ರಾಜಕೀಯ ಸಂಘರ್ಷಗಳು ನಿಂತಿಲ್ಲ. ಉತ್ತರ 24 ಪರಗಣ ಜಿಲ್ಲೆಯ ಪಾನಿಹಾಟಿಯಲ್ಲಿ ಬಿಜೆಪಿ ಕಾರ್ಯಕರ್ತರು ಜನಸಾಮಾನ್ಯರೊಂದಿಗೆ ಸಂವಹನ ನಡೆಸುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಬಾಂಬ್ ಎಸೆದಿದ್ದಾರೆ. ಇದಕ್ಕೂ ಮೊದಲು ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಸದ್ಯಕ್ಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವೈಷಮ್ಯವು ಜನರ ನೆಮ್ಮದಿಯನ್ನು ಕೆಡಿಸಿದೆ.